ಬೆಂಗಳೂರು, (ಏ.15): ಕೊರೋನಾ ಲಾಕ್‌ಡೌನ್ ವಿಸ್ತರಣೆಯ ನಡುವೆಯೂ ರಾಜ್ಯ ಸರ್ಕಾರದ 14 ಇಲಾಖೆಗಳ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. 

ಇಂದು (ಬುಧವಾರ) ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರು ಸುತ್ತೋಲೆ ಹೊರಡಿಸಿದ್ದಾರೆ. ಸಚಿವಾಲಯ ಸೇರಿದಂತೆ ರಾಜ್ಯಮಟ್ಟದ ಕಚೇರಿಗಳಲ್ಲಿ ಅತ್ಯಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳ ನೌಕರರಿಗೆ ಬುಲಾವ್ ನೀಡಲಾಗಿದೆ.

8 ಗಂಟೆ ಬದಲು 12 ಗಂಟೆ ಶಿಫ್ಟ್‌: ಸುಗ್ರೀವಾಜ್ಞೆ ಸಾಧ್ಯತೆ 

ಮೇ. 3 ರ ವರೆಗೆ ಒಟ್ಟು 19 ದಿನಗಳ ಕಾಲ ಲಾಕ್‌ಡೌನ್ ವಿಸ್ತರಣೆಯಾಗಿದೆ. ಈ ನಡುವೆ ಸರ್ಕಾರ ಕೆಲಸ ಕಾರ್ಯಗಳು ಸರಾಗವಾಗಿ ನಡೆಯುವ ಉದ್ದೇಶದಿಂದಾಗಿ  ಇಲಾಖೆಯಗಳ ನೌಕರರು ಕೆಲಸಕ್ಕೆ ಹಾಜರಾಗುವಂತೆ ಸರ್ಕಾರ ಸೂಚನೆ ನೀಡಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಒಳಾಡಳಿತ ಇಲಾಖೆ, ಕಂದಾಯ ಇಲಾಖೆ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ,ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸಾರಿಗೆ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಇಂಧನ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸಿಬ್ಬಂದಿಗೆ ಕೆಲಸಕ್ಕೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಲಾಗಿದೆ.

ಈ ಇಲಾಖೆಗಳು ಹೊರತುಪಡಿಸಿ ಇತರೆ ನೌಕರರಿಗೆ ರಜೆ ಘೋಷಿಸಿದ ಸರ್ಕಾರ

ಮೇಲಿನ ಎಲ್ಲಾ ಇಲಾಖೆಯ ಏ ದರ್ಜೆ ನೌಕರರು ಕರ್ತವ್ಯಕ್ಕೆ ಹಾಜರಾಗಲು ಸೂಚಿಸಿದ್ದು, ದೃಷ್ಟಿಹೀನ, ಅಂಗವೈಕಲ್ಯ ಉದ್ಯೋಗಿಗಳಿಗೆ ವಿನಾಯಿತಿ ನೀಡಲಾಗಿದೆ.