ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಗೆ ವಸ್ತ್ರಸಂಹಿತೆ ಬಿಡುಗಡೆ ಮಾಡಿದ ಸರ್ಕಾರ: ಜೀನ್ಸ್ ಪ್ಯಾಂಟ್, ಶೂ ನಿಷೇಧ
ರಾಜ್ಯಾದ್ಯಂತ ಫೆ.25ರಂದು ನಡೆಯುವ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆ ಹಾಜರಾಗುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ವಸ್ತ್ರಸಂಹಿತೆ (Dress Code) ಜಾರಿ ಮಾಡಲಾಗಿದೆ.
ಬೆಂಗಳೂರು (ಫೆ.15): ರಾಜ್ಯಾದ್ಯಂತ ಫೆ.25ರಂದು ನಡೆಯುವ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಪರೀಕ್ಷೆಯ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದಿಂದ ವಸ್ತ್ರಸಂಹಿತೆ (Dress Code) ಜಾರಿ ಮಾಡಲಾಗಿದೆ. ಪರೀಕ್ಷೆ ಬರೆಯುವ ಎಲ್ಲ ಅಭ್ಯರ್ಥಿಗಳು ಸರ್ಕಾರ ಸೂಚಿಸಿದ ಸಮವಸ್ತಗಳನ್ನು ಮಾತ್ರ ಧರಿಸಿಕೊಂಡು ಬರಲು ಸೂಚನೆ ನೀಡಲಾಗಿದೆ.
ಇದೇ ತಿಂಗಳ 25ರಂದು ರಾಜ್ಯಾದ್ಯಂತ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಪರೀಕ್ಷೆ (Police Constable (Civil) exam) ನಡೆಯಲಿವೆ. ಬೆಂಗಳೂರು ನಗರದಲ್ಲಿ 63 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತದೆ. ಒಟ್ಟು 38,180 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈಗ ಎಲ್ಲ ಪರೀಕ್ಷಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಜಾರಿ ಮಾಡಲಾಗಿದೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಸಮವಸ್ತ್ರಗಳನ್ನು ಧರಿಸಿಕೊಂಡು ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ. ಒಂದು ವೇಳೆ ನಿಯಮ ಉಲ್ಲಂಘನೆಯಾದಲ್ಲಿ ಪರೀಕ್ಷೆ ಬರೆಯಲು ಪ್ರವೇಶ ನಿರಾಕರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ರಾಜ್ಯದ ಎಲ್ಲ ಸರ್ಕಾರಿ ವಸತಿ ಶಾಲೆ, ಕಾಲೇಜುಗಳಲ್ಲಿ ಶಾರದಾಪೂಜೆ, ಗಣೇಶೋತ್ಸವ ನಿಷೇಧ
- ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ:
- ಅರ್ಧ ತೋಳಿನ ಶರ್ಟ್‌ಗಳನ್ನು ಕಡ್ಡಾಯವಾಗಿ ಧರಿಸುವುದು.
- ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‌ಗಳನ್ನು ಧರಿಸುವುದು.
- ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್ ಗಳು ಇರುವ ಶರ್ಟ್‌ಗಳನ್ನು ಧರಿಸುವಂತಿಲ್ಲ.
- ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‌ಗಳನ್ನು ಧರಿವಂತಿಲ್ಲ
- ಪರೀಕ್ಷಾ ಕೇಂದ್ರದೊಳಗೆ ಶೂ ಗಳಿಗೆ ನಿಷೇಧ ಹೇರಲಾಗಿದೆ.
- ಅಭ್ಯರ್ಥಿಗಳು ತೆಳುವಾದ ಅಡಿ ಬಾಗವಿರುವ ಪಾದರಕ್ಷೆಗಳನ್ನ ಧರಿಸುವಂತೆ ಸೂಚನೆ ನೀಡಲಾಗಿದೆ.
- ಕುತ್ತಿಗೆ ಸುತ್ತಾ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡತಗಳನ್ನು ಧರಿಸುವುದು ನಿಷೇಧಿಸಲಾಗಿದೆ.
ಹಿಂದೂ-ಮುಸ್ಲಿಂ ಭಾವೈಕ್ಯತೆ ಪ್ರಚಾರ ಮಾಡುತ್ತಿದ್ದ ಅಹಮದೀಯ ಮುಸ್ಲಿಂ ಮೌಲ್ವಿ ಮೇಲೆ ಸುನ್ನಿ ಮುಸ್ಲಿಮರಿಂದ ಹಲ್ಲೆ!
ಮಹಿಳೆ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತಸಂಹಿತೆ:
ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ.
ಪೂರ್ಣ ತೋಳಿನ ಬಟ್ಟೆ ಹಾಗೂ ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ.
ಬದಲಾಗಿ ಮುಜುಗರ ಆಗದಂತಹ ಅರ್ಧ ತೋಳಿನ ಬಟ್ಟೆಗಳನ್ನು ಧರಿಸಬೇಕು.
ಹೈ ಹೀಲ್ಡ್ ಶೂ ಹಾಗೂ ಚಪ್ಪಲಿಗಳನ್ನು ಧರಿಸುವಂತಿಲ್ಲ.
ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ನಿಷೇಧ ಹೇರಲಾಗಿದೆ.
ಮಂಗಳಸೂತ್ರ ಮತ್ತು ಕಾಲುಂಗುರಕ್ಕೆ ರಿಯಾಯಿತಿ ನೀಡಲಾಗಿದೆ.