Karnataka High Court Recruitment 2022: ರಾಜ್ಯ ಹೈಕೋರ್ಟ್ ನಲ್ಲಿ ಸ್ಟೆನೋಗ್ರಾಫರ್ ಹುದ್ದೆಗೆ ನೇಮಕಾತಿ

 ರಾಜ್ಯ ಹೈಕೋರ್ಟ್ ಖಾಲಿ ಇರುವ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ-ಸ್ಟೆನೋಗ್ರಾಫರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಒಟ್ಟು 54 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಪ್ರಿಲ್ 7 ಕೊನೆಯ ದಿನವಾಗಿದೆ. 

Karnataka High Court Stenographer Recruitment 2022 notification gow

ಬೆಂಗಳೂರು (ಮಾ.10): ಸರಕಾರಿ ಉದ್ಯೋಗ ಪಡೆಯುವ ಹಂಬಲ ಇರುವವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ (Karnataka High Court) ಉದ್ಯೋಗವಕಾಶವಿದೆ. ರಾಜ್ಯ ಹೈಕೋರ್ಟ್ ಖಾಲಿ ಇರುವ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ-ಸ್ಟೆನೋಗ್ರಾಫರ್ (Assistant Court Secretary) ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಒಟ್ಟು 54 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 7 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ karnatakajudiciary.kar.nic.in ಗೆ ಭೇಟಿ ನೀಡಬಹುದು.

ಶೈಕ್ಷಣಿಕ ವಿದ್ಯಾಭ್ಯಾಸ: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ  ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪಿಯುಸಿ/ ಪದವಿ , ಡಿಪ್ಲೊಮಾ ಅಥವಾ ಅದಕ್ಕೆ ಸಮನಾದ ವಿದ್ಯಾಭ್ಯಾಸ ಹೊಂದಿರಬೇಕು.

ವಯೋಮಿತಿ:  ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ  ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (ಸ್ಟೆನೋಗ್ರಾಫರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  18 ರಿಂದ 35 ವರ್ಷದೊಳಗಿರಬೇಕು.  OBC  ಅಭ್ಯರ್ಥಿಗಳಿಗೆ 3 ವರ್ಷ, SC, ST ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

KOLAR ANGANWADI RECRUITMENT 2022: ಕೋಲಾರ ಜಿಲ್ಲೆಯ ಅಂಗನವಾಡಿ ಹುದ್ದೆಗಳ ನೇಮಕಾತಿ 

ಅರ್ಜಿ ಶುಲ್ಕ: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ  ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (ಸ್ಟೆನೋಗ್ರಾಫರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ/ OBC ಅಭ್ಯರ್ಥಿಗಳು  500 ರೂ ಅರ್ಜಿ ಶುಲ್ಕ ಪಾವತಿಸಬೇಕು. SC/ ST ಅಭ್ಯರ್ಥಿಗಳು 250 ರೂ ಪಾವತಿಸಬೇಕು.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ  ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (ಸ್ಟೆನೋಗ್ರಾಫರ್) ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಟೈಪಿಂಗ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ವಿವರ: ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ  ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ   ₹44,900 ರಿಂದ ₹1,42,400 ವರೆಗೆ ವೇತನ ದೊರೆಯಲಿದೆ.

ಪ್ರಮುಖ ದಿನಾಂಕಗಳು:
ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಖಾಲಿ ಇರುವ  ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನ ಎಪ್ರಿಲ್ 7, 2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನ ಎಪ್ರಿಲ್ 12, 2022

Telangana Govt Job Announcements: ತೆಲಂಗಾಣದಲ್ಲಿ 80 ಸಾವಿರ ಸರ್ಕಾರಿ ಉದ್ಯೋಗ ನೇಮಕಾತಿ 

ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಜವಾನ ಹುದ್ದೆಗಳಿಗೆ ಅರ್ಜಿ ಆಹ್ವಾನ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ (Shivamogga District Court ) ಅಗತ್ಯವಿರುವ ಜವಾನ ( peon ) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 27 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 24 ಕೊನೆಯ ದಿನವಾಗಿದೆ. ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ ಮಾರ್ಚ್ 25 ಆಗಿದೆ. ಹೆಚ್ಚಿನ ಮಾಹಿತಿಗೆ https://districts.ecourts.gov.in/shivamogga-onlinerecruitment ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ಅರ್ಹತೆ : ಶಿವಮೊಗ್ಗ (Shivamogga) ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 10ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.

ವಯೋಮಿತಿ: ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಜವಾನ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

Latest Videos
Follow Us:
Download App:
  • android
  • ios