Asianet Suvarna News Asianet Suvarna News

Sakala Recruitment 2022: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನ

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ಸಕಾಲ ಮಿಷನ್‌ ನಲ್ಲಿ ಅಗತ್ಯ ಇರುವ ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 1 ಆಗಿದೆ.

Karnataka Information Technology Consultant Sakala Recruitment 2022 notification apply now gow
Author
Bengaluru, First Published Jan 22, 2022, 4:33 PM IST

ಬೆಂಗಳೂರು(ಜ.22): ಸಕಾಲ ಮಿಷನ್‌ ಮತ್ತು ಕರ್ನಾಟಕ ಸರ್ಕಾರದ ಇ-ಆಡಳಿತ ಉಪಕ್ರಮಗಳನ್ನು ನಿರ್ವಹಿಸಲು ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರ (karnataka Information Technology Consultant ) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಫೆಬ್ರವರಿ 1 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ http://www.sakala.kar.nic.in/index ಗೆ ಭೇಟಿ ನೀಡಬಹುದು.

ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿದವರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, 1 ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. 

ಶೈಕ್ಷಣಿಕ ವಿದ್ಯಾಭ್ಯಾಸ: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಬಿಇ ಇನ್ ಕಂಪ್ಯೂಟರ್ ಸೈನ್ಸ್‌ (ಎಂಟೆಕ್ ಐಚ್ಛಿಕ) ನಲ್ಲಿ ಪಾಸಾಗಿರಬೇಕು.

ವಯೋಮಿತಿ: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 40 ವರ್ಷ. ನಿಯಮಾನುಸಾರ ವಯೋಮಿತಿ ಸಡಿಲಿಕೆ ಇದೆ.

AHF Karnataka Recruitment 2022: ಬರೋಬ್ಬರಿ 1419 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅನುಭವ ಮತ್ತು ಕೌಶಲ್ಯಗಳು: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಪ್ರಾಜೆಕ್ಟ್‌ ಮ್ಯಾನೇಜ್ಮೆಂಟ್‌ ಟೂಲ್ಸ್‌ ಮತ್ತು ಪ್ರಾಜೆಕ್ಟ್‌ಗಳ ನಿರ್ವಹಣೆ ಬಗ್ಗೆ ಅನುಭವವಿರಬೇಕು. 5 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ವೇತನ ವಿವರ: ರಾಜ್ಯ ಮಾಹಿತಿ ತಂತ್ರಜ್ಞಾನ ಸಮಾಲೋಚಕರು ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,40,937 ರೂ ವೇತನ ದೊರೆಯಲಿದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-02-2022.
ಸಂದರ್ಶನ ನಡೆಯುವ ದಿನಾಂಕ 7-02-2022 ರ ಬೆಳಿಗ್ಗೆ 11-00 ಗಂಟೆಗೆ.

ಅರ್ಜಿಗಳನ್ನು ನಿಗದಿತ ನಮೂನೆಯಲ್ಲಿ aosakala@karnataka.gov.in ಗೆ ಇ-ಮೇಲ್‌ ಮೂಲಕ ಕಳುಹಿಸುವುದು. ಇತರೆ ಹೆಚ್ಚಿನ ಮಾಹಿತಿಗಳಿಗೆ ಸಂಪೂರ್ಣ ಅಧಿಸೂಚನೆಗೆ ವೆಬ್‌ಸೈಟ್‌ www.sakala.kar.nic.in ಗೆ ಭೇಟಿ ನೀಡಬಹುದು.

UAS RAICHUR RECRUITMENT 2022: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ

ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು  ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ:ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು (university of agricultural sciences raichur) ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. 2 ಸೀನಿಯರ್ ರಿಸರ್ಚ್ ಫೆಲೋ ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜನವರಿ 25,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.  ಹೆಚ್ಚಿನ ಮಾಹಿತಿಗೆ  ಆಸಕ್ತರು https://uasraichur.edu.in/index.php/en/ ಗೆ ಭೇಟಿ ನೀಡಿ.

ಶೈಕ್ಷಣಿಕ ವಿದ್ಯಾರ್ಹತೆ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು ನೇಮಕಾತಿಯ ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಎಂ.ಎಸ್ಸಿ, ಪಿಹೆಚ್‌ಡಿ ಪಡೆದಿರಬೇಕು.

ಅರ್ಜಿ ಸಲ್ಲಿಸಬೇಕಾದ ವಿಧಾನ: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://uasraichur.edu.in/index.php/en/ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಜನವರಿ 25,2022 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
Pesticide Residue & Food Quality Analysis Laboratory,
University of Agricultural Sciences,
Raichur - 584104

Follow Us:
Download App:
  • android
  • ios