Asianet Suvarna News Asianet Suvarna News

Karnataka Khadi Recruitment Exam: ಮಾ.12ಕ್ಕೆ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಸ್ಪರ್ಧಾತ್ಮಕ ಪರೀಕ್ಷೆ

ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ಖಾಲಿ ಇರುವ  ವಿವಿಧ  ಒಟ್ಟು 29 ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾರ್ಚ್ 12ರಂದು ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ.

Karnataka Khadi Recruitment Exam held on march 12th gow
Author
Bengaluru, First Published Feb 10, 2022, 4:56 PM IST

ಬೆಂಗಳೂರು(ಫೆ.10): ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ (karnataka state khadi and village industries board) ಖಾಲಿ ಇರುವ  ವಿವಿಧ  ಒಟ್ಟು 29 ಹುದ್ದೆಗಳಿಗೆ  ಪಿಯು, ಪದವಿ ಪಾಸಾದ ಅಭ್ಯರ್ಥಿಗಳಿಂದ 2021 ರ ಅಂತ್ಯದಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.  ಇದೀಗ ಈ ಹುದ್ದೆಗಳ ಆಯ್ಕೆಗಾಗಿ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ ನಿಗದಿಪಡಿಸಿರುವುದನ್ನು ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ (khadi and village industries board) ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ https://khadi.karnataka.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

ಖಾಲಿ ಇರುವ ಹುದ್ದೆಗಳನ್ನು ಉಳಿಕ ಮೂಲ ವೃಂದದ ಹುದ್ದೆ ಗ್ರೂಪ್ -ಸಿ 14, ಹೈದರಾಬಾದ್ ಕರ್ನಾಟಕ ಸ್ಥಳೀಯ ವೃಂದದ ಗ್ರೂಪ್-ಬಿ ಹುದ್ದೆ 2 ಹಾಗೂ ಗ್ರೂಪ್-ಸಿ 13 ಹುದ್ದೆಗಳು ಸೇರಿ 29 ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ (online) ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು.

ಈಗಾಗಲೇ ಅರ್ಜಿ ಸಲ್ಲಿಸಿರುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಗ್ರೂಪ್-ಬಿ ಹುದ್ದೆಗೆ ದಿನಾಂಕ ಮಾರ್ಚ್ 12, 2022ರಂದು ಬೆಳಿಗ್ಗೆ 9 ಗಂಟೆಯಿಂದ 11.15ರವರೆಗೆ ಹಾಗೂ ಗ್ರೂಪ್-ಸಿ ಹುದ್ದೆಗಳಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಯಿಂದ 5.15ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ಗೆ ಭೇಟಿ ನೀಡಲು ಮನವಿ ಮಾಡಿಕೊಂಡಿದೆ.

2011ರ ಕೆಪಿಎಸ್‌ಸಿ ಅಭ್ಯರ್ಥಿ‌ಗಳ ನೇಮಕಾತಿ ಸೇರಿ ಹಲವು ಯೋಜನೆಗಳಿಗೆ ಸಚಿವ ಸಂಪುಟ ಅನುಮೋದನೆ!

ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಡಿಎ: ಬೆಂಗಳೂರು ಅಭಿವೃಧ್ಧಿ ಪ್ರಾಧಿಕಾರವು (Bangalore Development Authority - BDA) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 6 ಕಾನೂನು ಅಧಿಕಾರಿ (law officer) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಫೆಬ್ರವರಿ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ಇಲಾಖೆಯ ಅಧಿಕೃತ ವೆಬ್‌ತಾಣ https://www.bdabangalore.org/ ಗೆ ಭೇಟಿ ನೀಡಿ.

IISC Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಮಾನದಂಡಗಳು ಇಂತಿದೆ.
-ಕರ್ನಾಟಕ ನ್ಯಾಯಾಂಗ ಸೇವೆಯಲ್ಲಿ ಕಾರ್ಯನಿರ್ವಹಿಸಿರುವ ನಿವೃತ್ತ ಜಿಲ್ಲಾ ನ್ಯಾಧೀಶರಾಗಿರಬೇಕು.
-ಕಾನೂನು ಇಲಾಖೆ ಅಥವಾ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿ ಕಾರ್ಯನಿರ್ವಹಿಸಿರುವ ಸರ್ಕಾರದ ಹೆಚ್ಚುವರಿ ಕಾರ್ಯದರ್ಶಿಗಳ ದರ್ಜೆಗಿಂತ ಕಡಿಮೆ ಇಲ್ಲದ ನಿವೃತ್ತ ಅಧಿಕಾರಿಗಳಾಗಿರಬೇಕು.

NMDC Recruitment 2022: ರಾಷ್ಟ್ರೀಯ ಖನಿಜ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ: ಬಿಡಿಎ ಕಾನೂನು ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ  1,00,000 ರೂ ವೇತನ ದೊರೆಯಲಿದೆ.

ಅರ್ಜಿಗಾಗಿ ಮತ್ತು ಇತರೆ ಮಾಹಿತಿಗೆ ಭೇಟಿ ನೀಡಬೇಕಾದ ವಿಳಾಸ : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್‌ ಪಶ್ಚಿಮ, ಬೆಂಗಳೂರು-560020. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆಧಾರ್‌ ಕಾರ್ಡ್‌, ಕಾರ್ಯಾನುಭವ, ನಿವೃತ್ತಿ ಪ್ರಮಾಣ ಪತ್ರ, ಇತರೆ ಅಗತ್ಯ ದಾಖಲೆಗಳನ್ನು ಒದಗಿಸಬೇಕು.

IIIT Bangalore Recruitment 2022: ಸಂಶೋಧನಾ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Follow Us:
Download App:
  • android
  • ios