Land Surveyor Recruitment: 3 ಸಾವಿರ ಭೂಮಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

* ಭೂಮಾಪಕರ(Land surveyor) ಹುದ್ದೆಗಳಿಗೆ ಅರ್ಜಿ ಆಹ್ವಾನ 
* 3 ಸಾವಿರ ಭೂಮಾಪಕರ ಹುದ್ದೆಗಳ ಭರ್ತಿಗೆ ನೇಮಕಾತಿ
* ಸುತ್ತೋಲೆ ಹೊರಡಿಸಿದ ಭೂಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ 

Karnataka land surveyor recruitment-2021 Apply For 3000 Post rbj

ಬೆಂಗಳೂರು, (ಡಿ.03): ಭೂಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ಭೂಮಾಪಕರ  (Land surveyor)  ಹುದ್ದೆಗಳ ನೇಮಕಾತಿಗೆ (Recruitment) ಅರ್ಜಿ ಆಹ್ವಾನಿಸಿದೆ.

ರಾಜ್ಯದ ವಿವಿಧ ಜಿಲ್ಲೆಗಳಿಗೆ ಸೇರಿದಂತೆ ಒಟ್ಟು 3 ಸಾವಿರ  ಲ್ಯಾಂಡ್‌ ಸರ್ವೇಯರ್‌ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, 03.12.2021ರಿಂದ 31.12.2021ರೊಳಗೆ ಆನ್‌ಲೈನ್(Online) ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ(Education): ಕನಿಷ್ಠ ಪದವಿಪೂರ್ವ ಶಿಕ್ಷಣ(ಪಿಯುಸಿ) ಅಥವಾ ಕೇಂದ್ರ ಪ್ರೌಢಶಿಕ್ಷಣ ಮಂಡಳಿ ನಡೆಸುವ 12ನೇ ತರಗತಿ ಸಿಬಿಎಸ್‍ಸಿ ಅಥವಾ ಐಸಿಎಸ್‍ಇ ಇವುಗಳಲ್ಲಿ ವಿಜ್ಞಾನ ವಿಷಯ ಪಡೆದು ಗಣಿತ ವಿಷಯದಲ್ಲಿ ಶೇ.60 ಕ್ಕಿಂತ ಕಡಿಮೆ ಇಲ್ಲದೆಂತೆ ಅಂಕ ಪಡೆದು ಉತ್ತೀರ್ಣರಾಗಿರಬೇಕು. ಅಥವಾ ನೋಂದಾಣಿಯಾಗಿರುವ ಯಾವುದೇ ವಿಶ್ವವಿದ್ಯಾಲಯದಲ್ಲಿ ಬಿ.ಇ(ಸಿವಿಲ್)/ಅಥವಾ ಬಿ.ಟೆಕ್(ಸಿವಿಲ್)/ಸಿವಿಲ್ ಇಂಜಿನಿಯರಿಂಗ್ ಡಿಪ್ಲೊಮಾದಲ್ಲಿ ಉತ್ತೀರ್ಣರಾಗಿರುವವರೂ ಸಹ ಅರ್ಜಿ ಸಲ್ಲಿಸಬಹುದು. 

ವಯೋಮಿತಿ, ಅರ್ಜಿ ಶುಲ್ಕ: ಕನಿಷ್ಟ 18 ವರ್ಷ, ಗರಿಷ್ಟ 65 ವರ್ಷ ಮೀರಿರಬಾರದು. ಹಾಗೂ ಅರ್ಜಿ ಶುಲ್ಕ 1000 ರೂ.ನಿಗದಿಪಡಿಸಲಾಗಿದೆ.

ಪರೀಕ್ಷೆ: ಪರೀಕ್ಷೆಯ ಖಚಿತ ದಿನಾಂಕವನ್ನು (Exam Date) ವೆಬ್‍ಸೈಟ್ ವಿಳಾಸ rdservices.karnataka.gov.in ರಲ್ಲಿ ಮತ್ತು ದಿನಪತ್ರಿಕೆಗಳಲ್ಲಿ 15 ದಿನ ಮುಂಚಿತವಾಗಿ ತಿಳಿಸಲಾಗುತ್ತದೆ. ನಿಗದಿಪಡಿಸಲಾದ ಅರ್ಜಿಗಳನ್ನು ಮೇಲ್ಕಂಡ ಇಲಾಖಾ ವೆಬ್‍ಸೈಟಿನಲ್ಲಿಯೇ ಪ್ರಕಟಿಸಲಾಗಿದ್ದು, ಆನ್‍ಲೈನ್ ಮುಖಾಂತರ ಸಲ್ಲಿಸಬೇಕು. ಒಬ್ಬ ಅಭ್ಯರ್ಥಿಯು ಆನ್‍ಲೈನ್‍ನಲ್ಲಿ ಒಂದು ಅರ್ಜಿಯನ್ನು ಸಲ್ಲಿಸುವುದಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿರುತ್ತದೆ. ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶ ಇರುವುದಿಲ್ಲ. 2021 ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿರುತ್ತದೆ.

ಭೂಮಾಪನ ಕೆಲಸ ನಿರ್ವಹಿಸಲು ಪರವಾನಗಿ ನೀಡುವ ಪ್ರಕ್ರಿಯೆಯಲ್ಲಿ ಮೊದಲು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಿರ್ದಿಷ್ಟಪಡಿಸಿದ ಜಿಲ್ಲಾ ಕೇಂದ್ರಗಳಲ್ಲಿ 2022 ರ ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ಭೂಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆ ತಿಳಿಸಿದೆ .

ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅಗತ್ಯ ಮಾಹಿತಿಗಳನ್ನು ಈ ಕೆಳಗಿನ ಲಿಂಕ್‌ ಕ್ಲಿಕ್ ಮಾಡಿ ಅಥವಾ rd service karnataka gov in ಗೆ ಭೇಟಿ ನೀಡಿ ತಿಳಿಯಬಹುದು.

ಜಿಲ್ಲಾವಾರು ಹುದ್ದೆಗಳು
ಉಡುಪಿ 131,  ಉತ್ತರಕನ್ನಡ 101,  ಕೊಡಗು 100, ಕೊಪ್ಪಳ 66, ಕೋಲಾರ    137, ಗದಗ    46, ಕಲಬುರಗಿ 12, ಚಿಕ್ಕಬಳ್ಳಾಪುರ 39, ಚಿಕ್ಕಮಗಳೂರು 112, ಚಿತ್ರದುರ್ಗ 93,  ಚಾಮರಾಜನಗರ 50,  ತುಮಕೂರು 334,  ದಕ್ಷಿಣ ಕನ್ನಡ 66,  ದಾವಣಗೆರ    183, ಬೆಂಗಳೂರು ಗ್ರಾಮಾಂತರ 12, ಬೆಂಗಳೂರು 65,  ವಿಜಯಪುರ 76,  ಬೆಳಗಾವಿ 112,  ಬಳ್ಳಾರಿ 27,  ವಿಜಯನಗರ 29,  ಬಾಗಲಕೋಟೆ 60,  ಬೀದರ್ 13,  ಮಂಡ್ಯ 195,  ಮೈಸೂರು 136, ಯಾದಗಿರಿ 45, ರಾಮನಗರ 155,  ರಾಯಚೂರು 54,  ಶಿವಮೊಗ್ಗ 127,  ಹಾವೇರಿ    299, ಹಾಸನ 136 ಸೇರಿ ಒಟ್ಟು 3000 ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಯಲಿದೆ.

Latest Videos
Follow Us:
Download App:
  • android
  • ios