Karnataka Legislative Assembly Recruitment 2022 ವಿವಿಧ 77 ಹುದ್ದೆಗಳಿಗೆ ನೇಮಕಾತಿ
ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 27, 2022 ಕೊನೆಯ ದಿನವಾಗಿರುತ್ತದೆ.
ಬೆಂಗಳೂರು (ಮೇ.20): ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡುವ ಸಂಬಂಧ ಅಧಿಸೂಚನೆ ಸಂಖ್ಯೆ: ಕವಿಸಸ/ಆ-1/54/ನೇನೇಭಮಾ-1/2021, ದಿನಾಂಕ:26.04.2022 ಮಾತೃ ವೃಂದದಡಿ ವರದಿಗಾರರು – 02, ಕಂಪ್ಯುಟರ್ ಆಪರೇಟರ್ – 04, ಕಿರಿಯ ಸಹಾಯಕ – 10, ಬೆರಳಚ್ಚುಗಾರರು – 01, ದಲಾಯತ್ – 23 ಹೀಗೆ ಒಟ್ಟು 43 ಹುದ್ದೆಗಳು.
ಹಾಗೂ ಅಧಿಸೂಚನೆ ಸಂಖ್ಯೆ: ಕವಿಸಸ/ಆ-1/54/ನೇನೇಭಮಾ-2/2021, ದಿನಾಂಕ:26.04.2022 ಸ್ಥಳೀಯ ವೃಂದದಡಿ ವರದಿಗಾರರು – 03, ಶೀಘ್ರಲಿಫಿಗಾರರು – 02, ಕಿರಿಯ ಸಹಾಯಕರು – 03, ಸ್ವಾಗತಕಾರರು – 01, ಬೆರಳಚ್ಚುಗಾರರು – 03, ಬಡಗಿ – 01, ವಾಹನಚಾಲಕರು – 08, ದಲಾಯತ್ – 11, ಸ್ವೀಪರ್ – 02 ಹೀಗೆ ಒಟ್ಟು 34 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ 27, 2022 ಕೊನೆಯ ದಿನವಾಗಿರುತ್ತದೆ. ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಇನ್ನಿತರ ಮಾಹಿತಿ ಹಾಗೂ ಪೂರ್ಣ ವಿವರವನ್ನು https://kla.kar.nic.in/assembly/career/career.htm ಲಿಂಕ್ ಅಡಿಯಲ್ಲಿ ಪಡೆಯಬಹುದಾಗಿರುತ್ತದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
Vijayapura ವರುಣನ ಆರ್ಭಟಕ್ಕೆ ಬೈಕ್ ಸವಾರರ ಮೇಲೆ ಬಿದ್ದ ಮರ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿ: ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.
ಕಳೆದ ಜನವರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಾಖೆ ಈಗ ಒಪ್ಪಿಗೆ ಸೂಚಿಸಿದ್ದು, ಶೀಘ್ರ ಅಧಿಸೂಚನೆ ಹೊರಡಿಸುವ ಸಾಧ್ಯತೆ ಇದೆ.
Chikkamagaluru ರಸ್ತೆಗೆ ಬಂಡೆ ಹಾಕಿ ಬೀಗ ಜಡಿದಿದ್ದ ಪ್ರಕರಣ, ಸ್ಥಳಿಯರಿಂದ ಬಂಡೆ ತೆರವು
300 ಹುದ್ದೆಗಳನ್ನು ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ)ನಿಯಮಗಳು, 2021ರಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನಿಯಮಾನುಸಾರ ಕೂಡಲೇ ಅಗತ್ಯ ಕ್ರಮಕೈಗೊಳ್ಳುವಂತೆ ಕೃಷಿ ಇಲಾಖೆ (ಸೇವೆಗಳು) ಸರ್ಕಾರದ ಅಧೀನ ಕಾರ್ಯದರ್ಶಿ ಜೋನ್ ಪುಕಾಶ್ ರೋಡ್ರಿಗಸ್ ಅವರು ಕೃಷಿ ಇಲಾಖೆ ಆಯುಕ್ತರಿಗೆ ನಿರ್ದೇಶಿಸಿರುವುದಾಗಿ ಸಚಿವರು ಹೇಳಿದ್ದಾರೆ.
ಕೃಷಿ ಪದವೀಧರರಿಗೆ ಶೇ. 85 ರಷ್ಟು ಹುದ್ದೆಗಳು, ಉಳಿದ ಶೇ. 15 ರಷ್ಟು ಪೋಸ್ಟ್‌ಗಳನ್ನು ಬಿ.ಟೆಕ್ (ಕೃಷಿ ಎಂಜಿನಿಯರಿಂಗ್) ಅಥವಾ ಬಿ.ಟೆಕ್ (ಆಹಾರ ತಂತ್ರಜ್ಞಾನ/ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ) ಅಥವಾ ಬಯೋಟೆಕ್ನಾಲಜಿ ಹೊಂದಿರುವವರು ಅರ್ಹರಿರುತ್ತಾರೆ.
ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ನಮ್ಮ ಮೆಟ್ರೋ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ (Bengaluru Metro Rail Corporation Limited- BMRCL) ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಫೈರ್ ಇನ್‌ಸ್ಪೆಕ್ಟರ್ (Fire Inspector) ಒಟ್ಟು 6 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೇ ದಿನ ಜೂನ್ 3 ಆಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ https://english.bmrc.co.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾಭ್ಯಾಸ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಖಾಲಿ ಇರುವ ಫೈರ್ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.Sc, B.E ಅಥವಾ B.Tech ವಿದ್ಯಾರ್ಹತೆ ಪಡೆದಿರಬೇಕು.