Asianet Suvarna News Asianet Suvarna News

ಕಾನ್ಸ್‌ಟೇಬಲ್‌ ನೇಮಕಾತಿ, ಡಿ.10ರಂದು ಲಿಖಿತ ಪರೀಕ್ಷೆ ಯಾವೆಲ್ಲ ಜಿಲ್ಲೆಯಲ್ಲಿ ನಡೆಯಲಿದೆ?

ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 454 ಪೊಲೀಸ್‌ ಕಾನ್ಸ್‌ಟೇಬಲ್‌(ಸಿವಿಲ್‌) ಹುದ್ದೆಗಳಿಗೆ ನೇಮಕಾತಿ ಸಂಬಂಧ ಡಿ.10ರಂದು ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿದೆ.

Karnataka Police Constable Exam will be held on December 10th gow
Author
First Published Nov 28, 2023, 9:32 AM IST

ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿ ಇರುವ 454 ಪೊಲೀಸ್‌ ಕಾನ್ಸ್‌ಟೇಬಲ್‌(ಸಿವಿಲ್‌) ಹುದ್ದೆಗಳಿಗೆ ನೇಮಕಾತಿ ಸಂಬಂಧ ಡಿ.10ರಂದು ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಿಗದಿಪಡಿಸಲಾಗಿದೆ. ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆ, ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಯಾದಗಿರಿ ಜಿಲ್ಲೆ, ರಾಯಚೂರು ಜಿಲ್ಲೆ, ಕೊಪ್ಪಳ ಜಿಲ್ಲೆ, ಬಳ್ಳಾರಿ ಜಿಲ್ಲೆ ಮತ್ತು ವಿಜಯನಗರ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಲಿಖಿತ ಪರೀಕ್ಷೆ ನಡೆಯಲಿದೆ.

4 ವರ್ಷದಿಂದ ನಡೆಯದ ಎಫ್‌ಡಿಎ, ಎಸ್‌ಡಿಎ ನೇಮಕಾತಿ, 150 ಹುದ್ದೆಗಳ ನೇಮಕಕ್ಕೆ 5 ಲಕ್ಷಕ್ಕೂ ಹೆಚ್ಚು ಅರ್ಜಿ ನಿರೀಕ್ಷೆ!

 ಅರ್ಹ ಅಭ್ಯರ್ಥಿಗಳಿಗೆ ಮುಂಬರುವ ದಿನಗಳಲ್ಲಿ ಕರೆಪತ್ರದ ಬಗ್ಗೆ ಎಸ್‌ಎಂಎಸ್‌ ಮುಖಾಂತರ ಮಾಹಿತಿ ನೀಡಲಾಗುವುದು. ಕರೆಪತ್ರ ಲಿಂಕ್‌ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರಪತ್ರ ಡೌನ್‌ಲೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಎಐ ಎಂಜಿನಿಯರಿಂಗ್ ಸರ್ವಿಸಸ್ ನಿಂದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಕೆಇಎಯಿಂದ 545 ಹುದ್ದೆಗೆ ಪರೀಕ್ಷೆ, ನಿಷೇಧಿತ 52 ಜನಕ್ಕೆ ಅವಕಾಶವಿಲ್ಲ
ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸಲು ಆದೇಶಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಹಸಿರು ನಿಶಾನೆ ನೀಡಿದ ಬೆನ್ನಲ್ಲೇ ಡಿಸೆಂಬರ್‌ 23ರಂದು ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ ನಡೆಸುವುದಾಗಿ ಪರೀಕ್ಷೆ ಉಸ್ತುವಾರಿ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಬುಧವಾರ ಪ್ರಕಟಿಸಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ.

ಪಿಎಸ್‌ಐ ನೇಮಕಾತಿಗೆ 2021ರ ಅಕ್ಟೋಬರ್‌ನಲ್ಲಿ ಪೊಲೀಸ್‌ ಇಲಾಖೆ ನಡೆಸಿದ್ದ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರ ಇಡೀ ಪರೀಕ್ಷೆಯನ್ನೇ ರದ್ದುಪಡಿಸಿ ಮರು ಪರೀಕ್ಷೆಗೆ ಆದೇಶಿಸಿತ್ತು.

ಆದರೆ ಇದನ್ನು ಕೆಲ ಅಭ್ಯರ್ಥಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು. ಮರುಪರೀಕ್ಷೆ ಬೇಡ, ಕಳಂಕಿತರನ್ನು ಹೊರತುಪಡಿಸಿ ನೇಮಕಾತಿ ಪಟ್ಟಿಯನ್ನು ಪ್ರಕಟಿಸಲು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದರು. ಆದರೆ, ಇದಕ್ಕೆ ಒಪ್ಪದ ಹೈಕೋರ್ಟ್‌ 545 ಪಿಎಸ್‌ಐಗಳ ನೇಮಕಾತಿಗಾಗಿ ನಡೆದ ಪರೀಕ್ಷೆ ಮತ್ತು ಬಳಿಕ ಪ್ರಕಟಿಸಿದ ನೇಮಕಾತಿ ಪಟ್ಟಿಯನ್ನು ರದ್ದುಪಡಿಸಿ ಹೊಸದಾಗಿ ಸ್ವತಂತ್ರ ಸಂಸ್ಥೆಯಿಂದ ಪರೀಕ್ಷೆ ನಡೆಸುವಂತೆ ಆದೇಶಿಸಿತ್ತು.

ಹೈಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಮರು ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಿದೆ. ಅದರಂತೆ ಪ್ರಾಧಿಕಾರ ಇದೀಗ ಡಿ.23ರಂದು ಮರು ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ. ಅಕ್ರಮದಲ್ಲಿ ಭಾಗಿಯಾಗಿ ಶಾಶ್ವತ ಡಿಬಾರ್‌ ಆಗಿದ್ದ 52 ಮಂದಿ ಹೊರತುಪಡಿಸಿ ಈ ಹಿಂದೆ ಪರೀಕ್ಷೆಗೆ ಅರ್ಹತೆ ಪಡೆದಿದ್ದ ಎಲ್ಲರೂ ಈ ಮರು‌ ಪರೀಕ್ಷೆಗೂ ಅರ್ಹರಾಗಿದ್ದಾರೆ. ಮರು ಪರೀಕ್ಷೆ ರಾಜ್ಯಾದ್ಯಂತ ನಡೆಯುವುದಿಲ್ಲ. ರಾಜ್ಯದ ಎಲ್ಲ ಜಿಲ್ಲೆಗಳ ಅಭ್ಯರ್ಥಿಗಳೂ ಬೆಂಗಳೂರಿಗೆ ಬಂದು ಪರೀಕ್ಷೆ ಬರೆಯಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2021ರ ಜನವರಿ 21ರಂದು ಪೊಲೀಸ್‌ ಇಲಾಖೆಯಿಂದ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಟಿಸಿತ್ತು. ಅದೇ ವರ್ಷದ ಅಕ್ಟೋಬರ್‌ 3 ರಂದು ಲಿಖಿತ ಪರೀಕ್ಷೆ ನಡೆದಿತ್ತು.

Follow Us:
Download App:
  • android
  • ios