ಕರ್ನಾಟಕ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ನೇಮಕಾತಿ: ಅರ್ಜಿ ಹಾಕಿ

* ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ
*ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
*  387  ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದಗೆ ಅರ್ಜಿ ಆಹ್ವಾನ

Karnataka Police Constable Recruitment 2021 Apply for 387 posts rbj

ಬೆಂಗಳೂರು, (ಆ.20): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

387  ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದಗೆ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 6, 2021ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

ಉದ್ಯೋಗ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ ಯಿಂದ 12ನೇ ತರಗತಿ (PUC) ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಅರ್ಜಿ ಶುಲ್ಕ: ಸಾಮಾನ್ಯ ಹಾಗೂ  ಹಿಂದೂಳಿದ  ವರ್ಗದವರಿಗೆ 400 ಮತ್ತು ಎಸ್‌ಸಿ, ಎಸ್ಟಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ವಯೋಮಿತಿ:  ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 19ರಿಂದ 31 ವರ್ಷ, ಇತರೆ SC, ST ಅಭ್ಯರ್ಥಿಗಳಿಗೆ 19ರಿಂದ 33 ವರ್ಷ.

ವೇತನ: ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು. 

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://ksp.karnataka.gov.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

Latest Videos
Follow Us:
Download App:
  • android
  • ios