4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

* ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ
* 4000 ಹುದ್ದೆಗಳನನ ನೇರ ನೇಮಕಾತಿ ಮೂಲಕ ಭರ್ತಿ 
* ಮೇ 25,2021 ರಿಂದ ಆನ್‌ಲೈನ್ ಮೂಲಕ  ಅರ್ಜಿ ಸಲ್ಲಿಸಹುದು

Karnataka Police Recruitment 2021 Apply for 4000 Constable Posts rbj

ಬೆಂಗಳೂರು, (ಮೇ.25): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

4000 ಹುದ್ದೆಗಳನನ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಮೇ 25,2021 ರಿಂದ ಜೂನ್ 25,2021ರೊಳಗೆ ಅರ್ಜಿಸಲು ಕೋರಲಾಗಿದೆ. 

ಜಾಬ್ಸ್ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆ: ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಪಿಯುಸಿ/10+2/ಇಂಟರ್‌ಮೀಡಿಯೇಟ್ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 19 ರಿಂದ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು, ಪ.ಜಾ, ಪ.ಪಂ, ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಬುಡಕಟ್ಟು ಜನಾಂಗ/ಟ್ರೈಬ್ಸ್ ನ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನ: ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 23,500/- ರಿಂದ 47,650/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ನೇಮಕಾತಿಯ ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ, ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 400 ರೂ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳು 200 ರೂ ಅರ್ಜಿ ಶುಲ್ಕವನ್ನು ನಗದು/ಆನ್‌ಲೈನ್ ರೂಪದಲ್ಲಿ ಸ್ಥಳೀಯ ಅಂಚೆ ಕಚೇರಿಗಳಲ್ಲಿ ಅಥವಾ ಹೆಚ್.ಡಿ.ಎಫ್.ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್ ನ 'ಅಭ್ಯರ್ಥಿ ಪ್ರತಿ'ಯನ್ನು ಇಟ್ಟುಕೊಂಡಿರತಕ್ಕದ್ದು. ಅರ್ಜಿ ಶುಲ್ಕವನ್ನು ಪಾವತಿಸಲು ಜೂನ್ 28,2021 ಕೊನೆಯ ದಿನವಾಗಿರುತ್ತದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್‌ನಲ್ಲಿ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ
 

Latest Videos
Follow Us:
Download App:
  • android
  • ios