ಬೆಂಗಳೂರು, (ಮೇ.31):  ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳ ನೇಮಕಾತಿ ಮೇಲೆ ಪರಿಣಾಮ ಬೀರಿದ್ದು, ನೇಮಕಾತಿ ಪ್ರಕ್ರಿಯೆ ಕ್ಯಾನ್ಸಲ್ ಆಗಿದೆ

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 431 ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗಳು ಮತ್ತು ಕಲ್ಯಾಣ ಕರ್ನಾಟಕ ಭಾಗದ 125 ಪೊಲೀಸ್ ಸಬ್ ಇನ್ಸ್ ಪೆಕ್ಟರ್‌ಗಳ ನೇಮಕಾತಿ ಪ್ರಕ್ರಿಯೆ ನಡೆದಿತ್ತು.

4014 ಸಿವಿಲ್‌, ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕ; ಅರ್ಜಿ ಸಲ್ಲಿಕೆ ಆರಂಭ

ಆದ್ರೆ, 5.0 ಲಾಕ್‌ಡೌನ್ ಜೂನ್ 30ರ ವರೆಗೆ ವಿಸ್ತರಿಸಿರುವುದರಿಂದ ಪಿಎಸ್‌ಐ ನೇಮಕಾತಿ ಪ್ರಕ್ರಿಯೆಯನ್ನು ಸಧ್ಯಕ್ಕೆ ಸ್ಥಗಿತಗೊಳಿಸಲಾಗಿದೆ.

ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್  ಹುದ್ದೆಗೆ ಕೂಡಲೇ ಅರ್ಹ ಅಭ್ಯರ್ಥಿಳಿಂದ ಅರ್ಜಿ ಆಹ್ವಾನಿಸಲಾಗುತ್ತು. ಇದಕ್ಕಾಗಿ ಎಲ್ಲಾ ರೀತಿಯ ಸಿದ್ದತೆಗಳು ಸಹ ನಡೆಯುತ್ತಿತ್ತು. ಆದರೆ, ಅಂತಿಮವಾಗಿ ಗೃಹ ಸಚಿವಾಲಯ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಿದೆ.

ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್  ಹುದ್ದೆ ಅಭ್ಯರ್ಥಿಗಳ ವಯೋಮಿಯನ್ನು ಸಹ ರಾಜ್ಯ ಸರ್ಕಾರ ಹೆಚ್ಚಿಸಿದ್ದನ್ನು ಇಲ್ಲಿ ಸ್ಮರಿಸಬಹುದು.