ರಾಜ್ಯದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿಯ ಪರೀಕ್ಷೆಯಲ್ಲಿ ಅಕ್ರಮವೆಸಗಿದ 52 ಅಭ್ಯರ್ಥಿಗಳಿಗೆ ಪೊಲೀಸ್‌ ಇಲಾಖೆಯ ಎಲ್ಲ ನೇಮಕಾತಿಗಳಿಂದ ಶಾಶ್ವತ ನಿಷೇಧ ಹೇರಲಾಗಿದೆ. 

ಬೆಂಗಳೂರು (ಜೂ.21): ಕರ್ನಾಟಕ ಸರ್ಕಾರಿ ನೇಮಕಾತಿಯಲ್ಲಿ ದೊಡ್ಡ ಹಗರಣಗಳಲ್ಲಿ ಒಂದಾಗಿರುವ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿ ಬಂಧನವಾದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಪೊಲೀಸ್‌ ಇಲಾಖೆಯ ನೇಮಕಾತಿಯಲ್ಲಿ ಭಾಗವಹಿಸದಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ರಾಜ್ಯದಲ್ಲಿ 2021ರಲ್ಲಿ ನಡೆದ ಪೊಲೀಸ್ ಸಬ್‌ ಇನ್ಸ್‌ಪೆಕ್ಟರ್‌ ಸಿವಿಲ್‌ (545) ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಸಂಬಂಧಿದಂತೆ ರಾಜ್ಯದ 7 ಕೇಂದ್ರಗಳಾದ ಬೆಂಗಳೂರು, ಮಂಗಳೂರು, ಹುಬ್ಬಳ್ಳ- ಧಾರವಾಡ, ಕಲಬುರಗಿ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಪರೀಕ್ಷೆಯನ್ನು ನಡೆಸಲಾಗಿತ್ತು. ಆದರೆ, ಈ ವೇಳೆ ಲಿಖಿತ ಪರೀಕ್ಷೆಯಲ್ಲಿ ಬ್ಲೂಟೂತ್‌ ಹಾಗೂ ಎಲೆಕ್ಟ್ರಾನಿಕ್‌ ಸಾಧನಗಳನ್ನು ಬಳಸಿ ಅಕ್ರಮವೆಸಗಲಾಗಿದೆ ಎಂಬ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ತನಿಖೆಯಲ್ಲಿಯೂ ಆರೋಪ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ತನಿಖೆಗೆ ವಹಿಸಲಾಗಿದ್ದು, ಅಕ್ರಮವೆಸಗಿದ 52 ಆರೋಪಿಗಳನ್ನು ಬಂಧಿಸಲಾಗಿತ್ತು. ಈಗ ಬಂಧನವಾಗಿದ್ದ 52 ಆರೋಪಿಗಳನ್ನು ಪೊಲೀಸ್‌ ಇಲಾಖೆಯ ಎಲ್ಲ ನೇಮಕಾತಿ ಪ್ರಕ್ರಿಯೆಗಳಿಂದ ಶಾಶ್ವತವಾಗಿ ಕೈಬಿಡಲು ನಿರ್ಧರಿಸಲಾಗಿದೆ.

PSI Scam ಆರೋಪಿಗಳನ್ನು ಬಿಟ್ಟು ನೇಮಕಾತಿ ಮುಂದುವರೆಸಲು ಸಾಧ್ಯವೇ? ಹೈಕೋರ್ಟ್‌ ಪ್ರಶ್ನೆ

ಚಾರ್ಜ್‌ಶೀಟ್‌ ಸಲ್ಲಿಸಿದ ಸಿಐಡಿ: ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಬಂಧನವಾಗಿದ್ದ 52 ಪೊಲೀಸ್ ಅಭ್ಯಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ. ಬಂಧನದ ಬಳಿಕ ಮಾಹಿತಿ ಕಲೆ ಹಾಕಿ ಚಾರ್ಜ್ ಶೀಟ್ ಸಿಐಡಿಯಿಂದ ಚಾರ್ಜ್‌ ಶೀಟ್‌ ಸಲ್ಲಿಕೆ ಮಾಡಲಾಗಿದೆ. ಪ್ರಾಥಮಿಕ ವರದಿ ಯಲ್ಲಿ ಅಕ್ರಮ ನೇಮಕಾತಿ ಸಾಬೀತು ಪಡಿಸಿದ್ದ ಸಿಐಡಿ, ವರದಿ ಬೆನ್ನಲ್ಲೆ ಪೊಲೀಸ್ ಇಲಾಖೆ ಮಹತ್ತರ ಆದೇಶ ಹೊರಡಿಸಿದೆ. ಒಟ್ಟಾರೆ 52 ಅಭ್ಯರ್ಥಿಗಳನ್ನ ಪೊಲೀಸ್ ಹುದ್ದೆ ನೇಮಕಾತಿ ಪ್ರಕ್ರಿಯೆಯಿಂದ ಶಾಶ್ವತವಾಗಿ ನಿಷೇಧ ಮಾಡಲಾಗಿದೆ. ಇನ್ನುಮುಂದೆ ಕರ್ನಾಟಕ ಪೊಲೀಸ್‌ ಇಲಾಖೆಯ ಯಾವುದೇ ಹುದ್ದೆಗಳಲ್ಲಿ ಭಾಗವಹಿಸದಂತೆ ನಿಷೇಧ ಹೇರಲಾಗಿದೆ.

ನೇಮಕಾತಿ ಮುಂದುವರೆಸಲು ಸಾಧ್ಯವೇ ಎಂದು ಕೇಳಿದ್ದ ಹೈಕೋರ್ಟ್: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವೆಸಗಿದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗೆ ನೇಮಕಾತಿ ಮುಂದುವರೆಸಲು ಸಾಧ್ಯವೇ ಎಂದು ಹೈಕೋರ್ಟ್‌ ಸರ್ಕಾರಕ್ಕೆ ಪ್ರಶ್ನೆಯನ್ನು ಮಾಡಲಾಗಿತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪಿಗಳನ್ನು ಬಿಟ್ಟು ಉಳಿದ ಅಭ್ಯರ್ಥಿಗಳಿಗೆ ನೇಮಕಾತಿ ಪ್ರಕ್ರಿಯೆ ಮುಮದುವರೆಸಲು ಸಾಧ್ಯವೇ ಎಂದು ಹೂಕೋರ್ಟ್‌ನಿಂದ ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದು, ಈ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ಅಭಿಪ್ರಾಯ ತಿಳಿಸುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆಯನ್ನು ನೀಡಿತ್ತು. 

PSI Recruitment Scam: ಕಾನೂನು ತಜ್ಞ ರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ, ಗೃಹ ಸಚಿವ ಡಾ ಪರಮೇಶ್ವರ

ಸಾಮರ್ಥ್ಯ ಪರೀಕ್ಷೆ ನಡೆಸಿ ನೇಮಕಾತಿ ಪರೀಕ್ಷೆ ಮುಂದುವರೆಸಬಹುದೇ? : ಮತ್ತೊಂದೆಡೆ ಈಗ ನೇಮಕಾತಿ ಪ್ರಕ್ರಿಯೆಯಲ್ಲಿ ಉತ್ತಮ ಅಂಕ ಗಳಿಸಿದ ಆರೋಪರಹಿತ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆಯನ್ನು ನಡೆಸಿ ಅವರ ಸಾಮರ್ಥ್ಯ ತಿಳಯಲು ಸಾಧ್ಯವೇ? ಈ ಬಗ್ಗೆ ಸರ್ವಸಮ್ಮತ ಅಭಿಪ್ರಾಯ ಏನಿದೆ ಎಂಬುದನ್ನ ತಿಳಿಸಲು ಅರ್ಜಿದಾರರು ಹಾಗೂ ಸರ್ಕಾರಕ್ಕೆ‌ ಹೈಕೋರ್ಟ್ ಸೂಚನೆಯನ್ನು ನೀಡಿದೆ. ಈ ಬಗ್ಗೆ ಸರ್ಕಾರದ ಪರವಾಗಿ ಬಂದ ಅಡ್ವೋಕೇಟ್ ಜನರಲ್‌ಗೆ ಹೈಕೋರ್ಟ್‌ಗೆ ಉತ್ತರಿಸಿ ರಾಜ್ಯ ಸರ್ಕಾರದ ಅಭಿಪ್ರಾಯ ಪಡೆದು ತಿಳಿಸುವುದಾಗಿ ಹೇಳಿದ್ದಾರೆ.