Asianet Suvarna News Asianet Suvarna News

KSAT Recruitment 2022: ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯ ಗ್ರೂಪ್​ ಡಿ ಡಿವಿಜನ್‌ ನಲ್ಲಿ ಒಟ್ಟು 7 ದಲಾಯತ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಫ್​ಲೈನ್​ ಮೂಲಕ  ಫೆಬ್ರವರಿ 25 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.  

Karnataka State Administrative Tribunal Recruitment 2022 notification for Dalayath post gow
Author
Bengaluru, First Published Feb 22, 2022, 3:01 PM IST

ಬೆಂಗಳೂರು(ಫೆ.22): ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ( Karnataka State Administrative Tribunal  -  KSAT) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ.  ಗ್ರೂಪ್​ ಡಿ ಡಿವಿಜನ್‌ ನಲ್ಲಿ ಒಟ್ಟು 7 ದಲಾಯತ್ (Dalayath) ಹುದ್ದೆಗಳ ಭರ್ತಿಗೆ ಇಲಾಖೆ ಮುಂದಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್ (Offline)​ ಮೂಲಕ  ಫೆಬ್ರವರಿ 25 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು   ksat.karnataka.gov.in ಗೆ ಭೇಟಿ ನೀಡಲು ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:  ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು  ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ   ಕಡ್ಡಾಯವಾಗಿ 10ನೇ ತರಗತಿ  ಉತ್ತೀರ್ಣರಾಗಿರಬೇಕು. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.

ವಯೋಮಿತಿ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಫೆಬ್ರವರಿ 25, 2022ಕ್ಕೆ ಅನ್ವಯವಾಗಿ ಕನಿಷ್ಠ 18  ಮತ್ತು ಗರಿಷ್ಠ  35 ವರ್ಷವಾಗಿರಬೇಕು. OBC ಅಭ್ಯರ್ಥಿಗಳಿಗೆ 3 ವರ್ಷ, SC/ ST/ Cat-I ಅಭ್ಯರ್ಥಿಗಳಿಗೆ 05 ವರ್ಷ ಮತ್ತು PH/ವಿಧವಾ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

KSSRDI RECRUITMENT 2022: ರಾಜ್ಯ ರೇಷ್ಮೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ  SC/ ST/ Cat-I/  PH  ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.  ಮಿಕ್ಕ ಎಲ್ಲಾ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ ನಿಗದಿಯಾಗಿದೆ.  ಅರ್ಜಿ ಶುಲ್ಕವನ್ನು ಡಿಡಿ/ಐಪಿಒ ಮೂಲಕವೇ ಸಲ್ಲಿಸಬೇಕು.

ಆಯ್ಕೆ ವಿಧಾನ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇಮಕಾತಿ ನಿಯಮದಂತೆ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. 

ವೇತನ ವಿವರ: ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 17,000 ದಿಂದ 28,950  ರೂ ವರೆಗೆ ವೇತನ ದೊರೆಯಲಿದೆ. 

Karnataka Stamp Registration Department Recruitment 2022: 10ನೇ ತರಗತಿ ಪಾಸ್ ಆಗಿದ್ದರೆ ಈ ಹುದ್ದೆಗ ಅರ್ಜಿ ಸಲ್ಲಿಸಿ

ಅರ್ಜಿ ಸಲ್ಲಿಸಬೇಕಾದ ವಿಳಾಸ:  ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ  ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಅರ್ಜಿಯನ್ನು ಅಧಿಕೃತ ವೆಬ್‌ತಾಣಕ್ಕೆ ಭೇಟಿ ನೀಡಿ ಡೌನ್‌ಲೋಡ್ ಮಾಡಿಕೊಂಡು. ಅರ್ಜಿಯಲ್ಲಿ ಕೇಳಿರುವ ಮಾಹಿತಿಯನ್ನು ತುಂಬಬೇಕು. ಬಳಿಕ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಪೋಸ್ಟ್ ಮೂಲಕ ಅಥವಾ ಖುದ್ದಾಗಿ ತಲುಪಿಸಬಹುದು.

ಕರೆಸ್ಪಾಂಡೆಂಟ್​
ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ
ಕಂದಾಯ ಭವನ
7ನೇ ಮಹಡಿ, ಕೆ.ಜಿ.ರಸ್ತೆ
ಬೆಂಗಳೂರು - 560009

Correspondent
Karnataka State Administrative Tribunal
Kandaya Bhavan
7th Floor, K.G Road
Bengaluru  –  560009

Karnataka Admin Reforms Panel: ನಾನ್‌ ಗೆಜೆಟೆಡ್‌ ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವಂತೆ ಶಿಫಾರಸು

Follow Us:
Download App:
  • android
  • ios