ಕರ್ನಾಟಕ ಪೊಲೀಸ್ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಹಾಕಿ
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹುದ್ದೆಗಳ ವಿವರ ಬಗ್ಗೆ ಸಂಪೂರ್ಣ ವಿವರ ಈ ಕೆಳಗಿನಂತಿದೆ.
ಬೆಂಗಳೂರು, (ಫೆ. 24): ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 54 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
ಪೊಲೀಸ್ ಇಲಾಖೆಯು ಬೆಂಗಳೂರಿನ ನ್ಯಾಯ ವಿಜ್ಞಾನ ಪ್ರಾಯೋಗಾಲಯ, ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಾಯೋಗಾಲಯದ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರ ನೇಮಕಾತಿಗೆ ಮೂಲಕ ಭರ್ತಿ ಮಾಡುತ್ತಿದೆ.
ಗ್ರಾಮಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗೆ ಅರ್ಜಿ ಆಹ್ವಾನ
ವೈಜ್ಞಾನಿಕ ಅಧಿಕಾರಿ 50, ವೈಜ್ಞಾನಿಕ ಅಧಿಕಾರಿ (ಹೈದ್ರಬಾದ್-ಕರ್ನಾಟಕ) 4 ಹುದ್ದೆಗಳಿಗೆ ನೇಮಕಾತಿತಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ದಿನಾಂಕ 18/3/2020ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ.
ವಯೋಮಿತಿ: 18/3/2020ಕ್ಕೆ ಅನ್ವಯವಾಗುವಂತೆ ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗೆ 35, 2ಎ/2ಬಿ/3ಎ/3ಬಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗೆ 40 ವರ್ಷ ಪೂರೈಸಿರಬೇಕು.
100ಕ್ಕೆ 100 ಅಂಕ ಪಡೆದ ವಿದ್ಯಾರ್ಥಿನಿಯ ಉತ್ತರ ಪತ್ರಿಕೆ ಹೀಗಿದೆ ನೋಡಿ: ನೀವೂ ಒಂದ್ಸಲ ಚೆಕ್ ಮಾಡಿ
ಅರ್ಜಿ ಶುಲ್ಕ: ಸಾಮಾನ್ಯ/ಪ್ರವರ್ಗ(2ಎ), 2 (ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಪ್ರತಿ ಹುದ್ದೆಗೆ ಪ್ರತ್ಯೇಕವಾದ ವಿದ್ಯಾರ್ಹತೆ ಇದ್ದು ಅಭ್ಯರ್ಥಿಗಳು www.ksp.gov.inನಲ್ಲಿ ವಿವರಗಳನ್ನು ನೋಡಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೀಡಿರುವ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಪೊಲೀಸ್ ಇಲಾಖೆಯ ವೆಬ್ www.ksp.gov.in ಗೆ ಭೇಟಿ ನೀಡಿ ತಿಳಿಯಬಹುದು.
#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"
ಫೆಬ್ರವರಿ 24ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ