ಕರ್ನಾಟಕ ಪೊಲೀಸ್ ಇಲಾಖೆಯು 71 ರಿಸರ್ವ್‌ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸಹಿಷ್ಣುತಾ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ಮುಂದೂಡಿ ಪ್ರಕಟಣೆ ಹೊರಡಿಸಿದೆ. 

ಬೆಂಗಳೂರು(ಫೆ.12): ಕರ್ನಾಟಕ ಪೊಲೀಸ್ ಇಲಾಖೆಯು ( Karnataka State Police -KSP) 71 ರಿಸರ್ವ್‌ ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಸಹಿಷ್ಣುತಾ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆಗಳನ್ನು ಮುಂದೂಡಿ ಪ್ರಕಟಣೆ ಹೊರಡಿಸಿದೆ. ಕೆಎಸ್‌ಪಿಯು 71 ರಿಸರ್ವ್‌ ಎಸ್‌ಐ (ಸಿಎಆರ್‌/ಡಿಎಆರ್) (ಪುರುಷ) ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಯನ್ನು ಕೈಗೊಂಡು ಅರ್ಹ ಅಭ್ಯರ್ಥಿಗಳಿಗೆ ಇಟಿ, ಪಿಎಸ್‌ಟಿ ಪರೀಕ್ಷೆಗಳನ್ನು ದಿನಾಂಕ ಫೆಬ್ರವರಿ 16 ರಿಂದ ನಡೆಸಲು ವೇಳಾಪಟ್ಟಿ ನಿಗದಿಪಡಿಸಿತ್ತು.

ಸದ್ಯ ರಾಜ್ಯದಲ್ಲಿ ಹಿಜಾಬ್ ಸೇರಿ ಹಲವು ವಿವಾದಗಳು ಇರುವ ಕಾರಣ ಕಾನೂನು ಸುವ್ಯವಸ್ಥೆ ಹಾಗೂ ಅಭ್ಯರ್ಥಿಗಳ ಹಿತದೃಷ್ಟಿಯಿಂದ, ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆಗಳನ್ನು ಮುಂದೂಡಿದೆ. ಮುಂದಿನ ದಿನಾಂಕಗಳ ಬಗ್ಗೆ ಶೀಘ್ರದಲ್ಲಿ ತಿಳಿಸಲಾಗುವುದು ಎಂದು ಇಲಾಖೆಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಇಟಿ, ಪಿಎಸ್‌ಟಿ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಂದಿನ ದಿನಾಂಕಗಳು ಹಾಗೂ ಕೆಎಸ್‌ಪಿ ಲೇಟೆಸ್ಟ್‌ ಸೂಚನೆಗಳನ್ನು ತಿಳಿಯಲು ಆಗಾಗ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಿ.

GKVK BANGALORE RECRUITMENT 2022: ಅಸಿಸ್ಟೆಂಟ್ ಪ್ರೊಫೆಸರ್ ಸೇರಿ ಒಟ್ಟು 19 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ರಾಜ್ಯ ಪೊಲೀಸ್:  ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ (Karnataka State Industrial Security Force - KSISF) ಖಾಲಿ ಇರುವ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್ (Karnataka State police - KSP) ಅಧಿಸೂಚನೆ ಹೊರಡಿಸಿದೆ. ಒಟ್ಟು 63 ಸಬ್ ಇನ್ಸ್ ಪೆಕ್ಟರ್ (Sub-Inspector) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮಾರ್ಚ್‌ 03, 2022 ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ http://ksisfsi21.ksponline.co.in/ ಗೆ ಭೇಟಿ ನೀಡಿ. ಪುರುಷ, ಮಹಿಳಾ ಮತ್ತು ತೃತೀಯ ಲಿಂಗ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಪದವಿ ಪಡೆದಿರಬಹುದು.

ವಯೋಮಿತಿ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 26 ವರ್ಷ, ಇತರೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 28 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.

Mangalore University Recruitment 2022: ನ್ಯಾಯವಾದಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಆಯ್ಕೆ ಪ್ರಕ್ರಿಯೆ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಹಿಷ್ಣುತಾ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದವರಿಗೆ ಮಾಸಿಕ 37900 ರೂ ನಿಂದ 70850 ರೂ. ವರೆಗೆ ವೇತನ ದೊರೆಯಲಿದೆ.

ಅರ್ಜಿ ಶುಲ್ಕ: ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಖಾಲಿ ಇರುವ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ.500, ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.250 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.