ಕೋರ್ಟ್ ತಡೆ ನೀಡಿದ್ದ ಶಿಕ್ಷಕರ ನೇಮಕಕ್ಕೆ ಮತ್ತೆ ಚಾಲನೆ, ನ.4ರಿಂದ ಮತ್ತೆ ಕೌನ್ಸೆಲಿಂಗ್
ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆ ಹಿಡಿಯಲಾಗಿದ್ದ ನೇಮಕಕ್ಕೆ ಮರುಚಾಲನೆ.. ಶಿಕ್ಷಕರ ನೇಮಕ ನಾಳೆಯಿಂದ ಕೌನ್ಸೆಲಿಂಗ್.
ಬೆಂಗಳೂರು (ಅ.3): ನ್ಯಾಯಾಲಯದಲ್ಲಿ ಪ್ರಕರಣಗಳು ಬಾಕಿ ಇದ್ದ ಕಾರಣಕ್ಕೆ ತಡೆ ಹಿಡಿಯಲಾಗಿದ್ದ ‘371 ಜೆ’ಗೆ (ಹೈ-ಕ ವಿಶೇಷ ಸ್ಥಾನಮಾನ) ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಮತ್ತು ಉತ್ತರ ಶೈಕ್ಷಣಿಕ ಜಿಲ್ಲೆಗಳಲ್ಲಿ 6ರಿಂದ 8ನೇ ತರಗತಿಯ ಪದವೀಧರ ಶಿಕ್ಷಕರ ಹುದ್ದೆಗಳಿಗೆ ನ.4ರಿಂದ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ತಿಳಿಸಿದೆ.
ನ್ಯಾಯಾಲಯದ ಆದೇಶದಿಂದ ಪ್ರಭಾವಿತವಾಗಬಹುದಾದ ಹುದ್ದೆಗಳನ್ನು ಕಾಯ್ದಿರಿಸಿ ಉಳಿದ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಮುಂದುವರೆಸಲಾಗುವುದು. ಈ ನಿಟ್ಟಿನಲ್ಲಿ 371 ಜೆ ಹುದ್ದೆಗಳಿರುವ (ಶೇ.80 ಸ್ಥಳೀಯ, ಶೇ.20 ಮಿಕ್ಕುಳಿದ ವೃಂದದ ಹುದ್ದೆಗಳು) ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ, ವಿಜಯನಗರ, ಬೆಂಗಳೂರು ಉತ್ತರ ಮತ್ತು ದಕ್ಷಿಣ ಶೈಕ್ಷಣಿಕ ಜಿಲ್ಲೆಗಳಿಗೆ (ಶೇ.8ರಷ್ಟು ರಾಜ್ಯಮಟ್ಟದ ಸ್ಥಳೀಯ ವೃಂದದ ಹುದ್ದೆಗಳು) ಸಂಬಂಧಿಸಿದಂತೆ ಕಳೆದ ಮಾರ್ಚ್‌ನಲ್ಲಿ ಪ್ರಕಟಿಸಿರುವ 1:1ರ ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸೆಲಿಂಗ್‌ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತಿದೆ ಎಂದು ಇಲಾಖೆ ಹೇಳಿದೆ.
ನಾಸಾದಲ್ಲಿ 1.85 ಕೋಟಿ ರೂ ಉದ್ಯೋಗ ಪಡೆದ ಯುವಕನ ಸುಳ್ಳಿನ ಕಥೆ ಬಿಚ್ಚಿಟ್ಟ ಅಮೆರಿಕ ಅಧ್ಯಕ್ಷರ ಸಹಿಯ ಐಡಿ ಕಾರ್ಡ್!
ಈ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ, ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ, ಆಂಗ್ಲಭಾಷೆ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಅನ್ನು ನ.4ರಿಂದ ಆಯಾ ಜಿಲ್ಲಾ ನೇಮಕಾತಿ ಪ್ರಾಧಿಕಾರಗಳಾದ ಉಪನಿದೇಶಕರ ಕಚೇರಿಗಳಲ್ಲಿ ನಡೆಸಲಾಗುವುದು. ಅರ್ಹ ಅಭ್ಯರ್ಥಿಗಳು ಸೂಕ್ತ ದಾಖಲೆಗಳೊಂದಿಗೆ ಸಮಯಕ್ಕೆ ಸರಿಯಾಗಿ ಕೌನ್ಸೆಲಿಂಗ್‌ಗೆ ಆಗಮಿಸಬೇಕೆಂದು ಸೂಚಿಸಲಾಗಿದೆ.
- ಅರ್ಹ ಅಭ್ಯರ್ಥಿಗಳ ವಿವರ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟ
- ಈ ಅಭ್ಯರ್ಥಿಗಳಿಗೆ ವಿವಿಧ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸೆಲಿಂಗ್
- ಆಯಾ ಜಿಲ್ಲಾ ಉಪನಿದೇಶಕರ ಕಚೇರಿಗಳಲ್ಲಿ ಕೌನ್ಸೆಲಿಂಗ್
- ಅರ್ಹ ಅಭ್ಯರ್ಥಿಗಳು ದಾಖಲೆಗಳೊಂದಿಗೆ ಹಾಜರಾಗಲು ಸೂಚನೆ
ಕರ್ನಾಟಕ ಹೈಕೋರ್ಟ್ ನೇಮಕಾತಿ, 14 ಜಿಲ್ಲಾ ನ್ಯಾಯಾಧೀಶರ ಹುದ್ದೆ ಭರ್ತಿಗೆ ಅಧಿಸೂಚನೆ
ಸರ್ಕಾರಿ ಶಾಲೆಗಳಿಗಿನ್ನು ಉಚಿತ ವಿದ್ಯುತ್, ನೀರು: ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್, ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತ್ತೊಂದೆಡೆ ಕನ್ನಡದ ಅಸ್ಮಿತೆಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಕನ್ನಡದಲ್ಲೇ ಬರೆಯಲು ಅವಕಾಶ ನೀಡಬೇಕೆಂದು ಕೇಂದ್ರಕ್ಕೆ ಪತ್ರ ಬರೆಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಕಲಿಕಾ ವಾತಾವರಣ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿದೆ. ಆದ್ದರಿಂದ ತಕ್ಷಣದಿಂದಲೇ ಜಾರಿಗೆ ಬರುವಂತೆ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ವಿದ್ಯುತ್, ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದರು.
ಶಾಲೆಗಳಲ್ಲಿ ಕನ್ನಡ ಕಡ್ಡಾಯಗೊಳಿಸುವ ನಮ್ಮ ಪ್ರಯತ್ನಗಳಿಗೆ ನ್ಯಾಯಾಲಯ ಸಹಕಾರ ನೀಡುತ್ತಿಲ್ಲ. ಮಕ್ಕಳನ್ನು ಅವರ ಇಷ್ಟದ ಭಾಷೆಯಲ್ಲಿ ಕಲಿಸುವುದು ಪೋಷಕರ ನಿರ್ಧಾರಕ್ಕೆ ಬಿಟ್ಟ ವಿಷಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ಆದರೆ, ಮಾತೃಭಾಷೆಯ ಮಾಧ್ಯಮದಲ್ಲೇ ಕಲಿಯುವುದು ಅತ್ಯಂತ ವೈಜ್ಞಾನಿಕ ಎನ್ನುವುದನ್ನು ಗ್ರಹಿಸಬೇಕು ಎಂದು ಅವರು ಹೇಳಿದರು.
ಕನ್ನಡದಲ್ಲಿ ಕಲಿತರೆ ಉದ್ಯೋಗ ಸಿಗುವುದಿಲ್ಲ ಎಂಬ ತಪ್ಪು ಕಲ್ಪನೆಯಿಂದ ಇಂಗ್ಲಿಷ್ ಕಾನ್ವೆಂಟ್ ವ್ಯಾಮೋಹ ಬೆಳೆಸಿಕೊಳ್ಳಲಾಗಿದೆ. ಇದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.