ನಿಗದಿಯಂತೆ KAS ಪೂರ್ವಭಾವಿ ಪರೀಕ್ಷೆ: ಕೆಪಿಎಸ್‌ಸಿ ಸ್ಪಷ್ಟನೆ...!
ಕೆಎಎಸ್ ಪೂರ್ವಭಾವಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೊಗ ಮಹತ್ವದ ಮಾಹಿತಿಯೊಂದನ್ನು ನೀಡಿದೆ.
ಬೆಂಗಳೂರು, (ಆ.02): ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿಯಂತೆ ಆಗಸ್ಟ್ 24 ರಂದೇ ನಡೆಯಲಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗ ಹೇಳಿದೆ.
ಕೊrOನಾ ವೈರಸ್ ಹಿನ್ನೆಲೆಯಲ್ಲಿ ಈಗಾಗಲೇ ಎರಡು ಬಾರಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಾರಿ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ನಿಗದಿಯಂತೆ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್ ಸಿ ತಿಳಿಸಿದೆ.
ವಿವಿಧ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನ
ಎಸ್‌ಎಸ್‌ಎಲ್ ಸಿ, ಸಿಇಟಿ ಪರೀಕ್ಷೆಗಳು ಈಗಾಗಲೇ ಯಶಸ್ವಿಯಾಗಿ ನಡೆದಿದ್ದು, ಅದೇ ಮಾದರಿಯನ್ನು ಮುಂದಿಟ್ಟುಕೊಂಡು ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದೆ. ಮತ್ತೊಂದೆಡೆ ಕೊರೋನಾ ಭೀತಿ ನಡುವೆ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.
ಇನ್ನು ಪರೀಕ್ಷೆಗೆ ಸಿದ್ಧತೆ ನಡೆಸಲು ರಾಜ್ಯದ ಇತರೆ ಜಿಲ್ಲೆಗಳ ಸಾವಿರಾರು ಅಭ್ಯರ್ಥಿಗಳು ಬೆಂಗಳೂರು ಅಥವಾ ಧಾರವಾಡದಲ್ಲಿ ನಡೆಸಲಿದ್ದರು. ಅರ್ಜಿ ಸಲ್ಲಿಸುವ ವೇಳೆ, ಅಲ್ಲಿಯ ವಿಳಾಸವನ್ನೇ ನೀಡಿದ್ದರು.
ಈಗ ಬಹುತೇಕರು ತಮ್ಮ ತಮ್ಮ ಊರುಗಳಿಗೆ ತೆರಳಿದ್ದಾರೆ. ಅಲ್ಲದೇ ಕೊರೋನಾ ಹಿನ್ನೆಲೆಯಲ್ಲಿ ಮಾನಸಿಕ ಒತ್ತಡದಲ್ಲಿ ಅವರಿಗೆ ಓದಲು ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ಪರೀಕ್ಷೆ ಮುಂದೂಡಬೇಕು ಎಂದು ಅಭ್ಯರ್ಥಿಗಳು ಒತ್ತಾಯಿಸಿದ್ದಾರೆ.