Asianet Suvarna News Asianet Suvarna News

ವಿವಿಧ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕೆಪಿಎಸ್​​ಸಿ

ಕೊರೋನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ವಿವಿಧ ಹುದ್ದೆಗಳ ಪರೀಕ್ಷೆ ದಿನಾಂಕವನ್ನು ಕೆಎಎಸ್ ಪ್ರಕಟಿಸಿದೆ/ ಪರಿಷ್ಕೃತ ದಿನಾಂಕ ಈ ಕೆಳಗಿನಂತಿದೆ.

KAS prelims and Others Requirement exam-date released By KPSC
Author
Bengaluru, First Published Jun 11, 2020, 10:09 PM IST

ಬೆಂಗಳೂರು, (ಜೂನ್.11) : ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕ ನಿಗಧಿ ಮಾಡಿದೆ. ದಿನಾಂಕ 02-08-2020ರಂದು ಕೆಎಎಸ್ ಹುದ್ದೆಗಳಿಗೆ ಪ್ರಿಲಿಮಿನರಿ ಪರೀಕ್ಷೆ ನಡೆಯಲಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಕೋವಿಡ್-19 ಸೋಂಕಿನ ಭೀತಿಯಿಂದಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ 18-03-2020 ಮತ್ತು 24-04-2020ರ ಪತ್ರಿಕಾ ಪ್ರಕಟಣೆಗಳಲ್ಲಿ ಮುಂದೂಡಲಾಗಿತ್ತು. ಪ್ರಸ್ತುತ ಪರೀಕ್ಷೆಗಳನ್ನು ನಡೆಸಲು ದಿನಾಂಕಗಳನ್ನು ಮರುನಿಗದಿಪಡಿಸಿದ್ದು, ಅದು ಈ ಕೆಳಗಿನಂತಿದೆ.

ಕೆಪಿಎಸ್‌ಸಿ ನೇಮಕಾತಿ: ಮುಖ್ಯ ಪರೀಕ್ಷೆಯ ಅಂಕಗಳಲ್ಲಿ ಇಳಿಕೆ

ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ ಗ್ರೂಪ್ ಎ ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ 24 ಹುದ್ದೆಗಳಿಗೆ ದಿನಾಂಕ 07-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1- ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2.30 ರಿಂದ 4.30ರ ವರೆಗೆ ಪತ್ರಿಕೆ 2).

ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಣಕರು 54 ಹುದ್ದೆಗಳಿಗೆ ದಿನಾಂಕ 19-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. (ಬೆಳಗ್ಗೆ 10 ರಿಂದ 12 ರ ವರೆಗೆ ಪತ್ರಿಕೆ 1 - ಸಾಮಾನ್ಯ ಅಧ್ಯಯನ ಹಾಗೂ ಮಧ್ಯಾಹ್ನ 2 ರಿಂದ 4 ವರೆಗೆ ಪತ್ರಿಕೆ 2- ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣೆ ವಿಷಯದ ಪರೀಕ್ಷೆ ನಡೆಯಲಿದೆ)

ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳಿಗೆ ದಿನಾಂಕ 02-08-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಅಂದು ಬೆಳಗ್ಗೆ 10 ರಿಂದ 12 ರವರೆಗೆ ಪತ್ರಿಕೆ 1, ಹಾಗೂ ಮಧ್ಯಾಹ್ನ 2 ರಿಂದ 4 ರ ವರೆಗೆ ಪತ್ರಿಕೆ 2ರ ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್​​ಸಿ ಪ್ರಕಟಣ ತಿಳಿಸಿದೆ.

Follow Us:
Download App:
  • android
  • ios