ಪರೀಕ್ಷಾ ಅಭ್ಯರ್ಥಿಗಳಿಗೆ ಹಿಜಾಬ್ ಧರಿಸಲು ಅವಕಾಶವಿದೆ, ಆದ್ರೆ ಕಣ್ಣು ಬಾಯಿ ಮುಚ್ಚುವಂತಿಲ್ಲ: ಕೆಇಎ ಆದೇಶ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ನಡೆಸಲಾಗುವ ನಿಗಮ ಮಂಡಳಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆಗೆ ಹಿಜಾಬ್ ಧರಿಸಲು ಅವಕಾಶವಿದೆ. ಆದರೆ, ಕಣ್ಣು, ಕಿವಿ, ಬಾಯಿ ಮುಚ್ಚುವಂತಿಲ್ಲ.
ಬೆಂಗಳೂರು (ನ.15): ರಾಜ್ಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಿಂದ ನಡೆಸಲಾಗುತ್ತಿರುವ ನಿಗಮ ಮಂಡಳಿಗಳ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ಎಸಗುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಕಟ್ಟು ನಿಟ್ಟಿನ ಕ್ರಮವಹಿಸಲು ಹಿಜಾಬ್ ಧರಿಸುವುದನ್ನು ನಿಷೇಧಿಸಿದ್ದ ಪರೀಕ್ಷಾ ಪ್ರಾಧಿಕರವು, ಇಂದು ಆದೇಶವನ್ನು ಬದಲಿಸಿ ಹಿಜಾಬ್ ಧರಿಸಿಕೊಂಡು ಬರಲು ಆದೇಶ ನೀಡಿದೆ. ಆದರೆ, ಹಿಜಾಬ್ ಧರಿಸಿದರೂ ಕಣ್ಣು, ಕಿವಿ ಹಾಗೂ ಬಾಯಿಯನ್ನು ಮುಚ್ಚುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.
ಪರೀಕ್ಷಾ ಅಕ್ರಮಗಳಿಂದ ಎಚ್ಚೆತ್ತುಕೊಂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಿಗಮ ಮಂಡಳಿಗಳ ಪರೀಕ್ಷೆಗೆ ನಕಲು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ತಪಾಸಣೆಗೆ ಪೊಲೀಸ್ ನಿಯೋಜನೆ, ಮೆಟಲ್ ಡಿಟೆಕ್ಟರ್ ಬಳಕೆ ಮಾಡಲಾಗುತ್ತಿದೆ. ಆದರೆ, ಈ ಹಿಂದೆ ಹಿಜಾಬ್ ಧರಿಸುವ ಹಾಗಿಲ್ಲ ಎಂದು ಹೇಳಿದ್ದ ಕೆಇಎ ಈಗ ಹಲವು ಸಂಘಟನೆಗಳು, ಪರೀಕ್ಷಾ ಅಭ್ಯರ್ಥಿಗಳು ಹಾಗೂ ಪೋಷಕರ ಮನವಿಗೆ ಒಪ್ಪಿಕೊಂಡು ಹಿಜಾಬ್ ಧರಿಸಿಕೊಂಡು ಪರೀಕ್ಷೆ ಬರೆಯಲು ಅವಕಾಶವನ್ನು ನೀಡಿದೆ. ಆದರೆ, ಹಿಜಾಬ್ ಧರಿಸಿದರೂ ಕಿವಿ, ಕಣ್ಣು ಹಾಗೂ ಬಾಯಿ ಮುಚ್ಚಿಕೊಳ್ಳುವಂತಿಲ್ಲ ಎಂದು ಆದೇಶ ಹೊರಡಿಸಲಾಗಿದೆ.
ಪೊಲೀಸರ ಮುಂದೆ ಹೇಳಿಕೆ ಕೊಟ್ಟ ನಟ ದರ್ಶನ್: ಮಹಿಳೆಗೆ ನಾಯಿ ಕಚ್ಚಿದಾಗ ಸಿಸಿಟಿವಿ ವರ್ಕ್ ಆಗ್ತಿರಲಿಲ್ಲ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವಿವಿಧ ನಿಗಮ ಮಂಡಳಿಗಳಿಗೆ ನ.18 ಮತ್ತು 19ರಂದು ನೇರ ನೇಮಕಾತಿ ಪರೀಕ್ಷೆ ಮಾಡಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಾಗದಂತೆ ಕಟ್ಟೆಚ್ಚರ ವಹಿಸಲು ಪೊಲೀಸ್ ಇಲಾಖೆಗೂ ಮನವಿ ಮಾಡಲಾಗಿದೆ. ಇನ್ನೊಂದು ಕಡೆ ವಸ್ತ್ರಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸಲು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ. ಎಲ್ಲ ಅಭ್ಯರ್ಥಿಗಳು ಪರೀಕ್ಷೆಗೆ ಪ್ರವೇಶಪತ್ರ ತರುವುದು ಕಡ್ಡಾಯ. ಇತ್ತೀಚಿನ ಎರಡು ಪಾಸ್ ಪೋರ್ಟ್ ಅಳತೆಯ ಫೋಟೋ ಕೊಂಡೊಯ್ಯಬೇಕು. ಸರ್ಕಾರದಿಂದ ಮಾನ್ಯವಾದ ಫೋಟೋ ಗುರುತಿನ ಚೀಟಿ ಹೊಂದಿರಬೇಕು. ಪರೀಕ್ಷೆಯ ಕೊನೆಯ ಬೆಲ್ ಆಗುವವರೆಗೂ ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯಿಂದ ಹೊರಗೆ ಹೋಗಲು ಅನುಮತಿ ಇಲ್ಲ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
- ಪರೀಕ್ಷಾರ್ಥಿಗಳಿಗೆ ಕಟ್ಟು ನಿಟ್ಟಿನ ಸೂಚನೆಗಳು:
- ಪರೀಕ್ಷೆಯ ದಿನದಂದು ತುಂಬು ತೋಳಿನ ಶರ್ಟ್ ಧರಿಸುವಂತಿಲ್ಲ.
- ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು.
- ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
- ಧರಿಸುವ ಬಟ್ಟೆಗಳು ಹಗುರವಾಗಿದ್ದು ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಇರಬಾರದು.
- ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.
- ಹೀಲ್ಡ್ ಇಲ್ಲದ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
- ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಮಾತ್ರ ಅವಕಾಶ.
- ಉಳಿದಂತೆ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು, ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದ ನಿರ್ಬಂಧ.
ಕುಮಾರಸ್ವಾಮಿ ಹೇಳೋದೆಲ್ಲ ಶೇ. 99 ಸುಳ್ಳು, ಜೆಡಿಎಸ್ ಸೆಕ್ಯುಲರ್ ಆಗಿಲ್ಲ: ಸಿಎಂ ಸಿದ್ದರಾಮಯ್ಯ
- ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವುದಕ್ಕೆ ನಿರ್ಬಂಧ.
- ಅಂತಯೇ, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ ಧರಿಸುವುದನ್ನು ನಿಷೇಧ.
- ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ.
- ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಮತ್ತು ಕೈಗಡಿಯಾರಗಳನ್ನು ಕೊಂಡೊಯ್ಯುವಂತಿಲ್ಲ.
- ಪರೀಕ್ಷಾ ಕೊಠಡಿ ಒಳಕ್ಕೆ ತಿನ್ನುವ ಪದಾರ್ಥ ತೆಗೆದುಕೊಂಡು ಹೋಗುವಂತಿಲ್ಲ.
- ಪೆನ್ಸಿಲ್, ಪೇಪರ್, ಎರೇಸರ್, ಜಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಕ್ಕೆ ತೆಗೆದುಕೊಂಡು ಹೋಗುವಂತಿಲ್ಲ.