ಬೆಂಗಳೂರು, (ಫೆ.02): ಪ್ರಥಮ ದರ್ಜೆ ಸಹಾಯಕ (FDA) ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ಹೊಸ ದಿನಾಂಕ ನಿಗದಿ ಮಾಡಲಾಗಿದ್ದು, ಇದೇ ಫೆಬ್ರವರಿ 28ರಂದು ಪರೀಕ್ಷೆ ನಡೆಯಲಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

2020ರ ಜನವರಿ 31ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, 2021ರ ಜನವರಿ 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. 

ನಾಳೆ (ಜ.24)ರಂದು ನಡೆಯಬೇಕಿದ್ದ FDA ಪರೀಕ್ಷೆ ಮುಂದೂಡಿಕೆ: ಕಾರಣ ಇಲ್ಲಿದೆ.. 

ಜ. 24ರಂದು ಪರೀಕ್ಷೆ ನಡೆಯಬೇಕಿತ್ತು. ಆದ್ರೆ, ಪರೀಕ್ಷೆಗೂ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕೆಪಿಎಸ್‌ಇ ಪರೀಕ್ಷೆಯನ್ನು ರದ್ದು ಮಾಡಿ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಸುತ್ತೋಲೆ ಹೊರಡಿಸಿತ್ತು.

ಅದರಂತೆ ಇದೀಗ ಪರಿಷ್ಕೃತ ಪರೀಕ್ಷೆ ದಿನಾಂಕ ಪ್ರಕಟಿಸಲಾಗಿದ್ದು, ಇದೇ ಫೆಬ್ರವರಿ 28ಕ್ಕೆ ಪರೀಕ್ಷೆ ನಡೆಸಲಾಗುವುದು ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ಜಿ ಸತ್ಯವತಿ ತಿಳಿಸಿದ್ದಾರೆ.

"