ಬೆಂಗಳೂರು, (ಜ.11): ಕರ್ನಾಟಕ ಲೋಕಸೇವಾ ಆಯೋಗವು 2015ನೇ ಸಾಲಿನ 70 ಹೈದರಾಬಾದ್ ಕರ್ನಾಟಕ (HK) ಇನ್ನುಳಿದಂತೆ 358 ಒಟ್ಟು  428 ಗೆಜೆಟೆಡ್ ಪ್ರೊಬೇಷನರ್ಸ್‌ ಹುದ್ದೆಗಳ ನೇಮಕಾತಿಯ ಸೆಲೆಕ್ಷನ್ ಪಟ್ಟಿಯನ್ನು ಪ್ರಕಟಿಸಿದೆ.

ಕೆಪಿಎಸ್‌ಸಿ ನೇಮಕಾತಿ: ಗ್ರೂಪ್ ಸಿ ಹುದ್ದೆಗಳ ಭರ್ತಿ

 ಜನವರಿ 10,2020 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. 

ಅಂತಿಮ ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿ ಹೆಸರು, ವಿಳಾಸ, ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳು, ರಿಜಿಸ್ಟರ್ ನಂಬರ್, ಗ್ರೂಪ್‌ 'ಎ'  ಹಾಗೂ ಗ್ರೂಪ್‌ 'ಬಿ' ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಮಾಹಿತಿಯನ್ನು ನೀಡಲಾಗಿದೆ.

ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಪಿಎಸ್‌ಸಿಯು 2017ರಲ್ಲಿ 428 ಗ್ರೂಪ್ 'ಎ' ಮತ್ತು ಗ್ರೂಪ್‌ 'ಬಿ' ಶ್ರೇಣಿಯ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿತ್ತು. ಅಭ್ಯರ್ಥಿಗಳಿಂದ ಆಕ್ಷೇಪಣೆ ಅರ್ಜಿಯನ್ನು ಸ್ವೀಕರಿಸಲಾಗಿ, ಪರಿಶೀಲನೆ ನಂತರ ಪ್ರಸ್ತುತ ಅಂತಿಮವಾಗಿ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹಾಗಿದ್ರೆ, ಅಂತಿಮ ಆಯ್ಕೆ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.