ಬೆಂಗಳೂರು, (ಜುಲೈ,01):  ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ 106 ಹುದ್ದೆಗಳಿಗೆ ಪರೀಕ್ಷಾ ದಿನಾಂಕವನ್ನು ಮರು ನಿಗದಿ ಮಾಡಿದೆ. 

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಲೋಕಸೇವಾ ಆಯೋಗ, ಕೋವಿಡ್-19 ಸೋಂಕಿನ ಭೀತಿಯಿಂದಾಗಿ ಈ ಹಿಂದೆ ನಿಗದಿಪಡಿಸಲಾಗಿದ್ದ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಗಸ್ಟ್ 17 ಮತ್ತು 24ಕ್ಕೆ ಮುಂದೂಡಲಾಗಿದೆ.

ವಿವಿಧ ಹುದ್ದೆಗಳ ಪರೀಕ್ಷೆ ವೇಳಾಪಟ್ಟಿ ಪ್ರಕಟಿಸಿದ ಕೆಪಿಎಸ್​​ಸಿ

ಲೆಕ್ಕಪತ್ರ ಇಲಾಖೆ ಮತ್ತು ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಈ ಹಿಂದೆ ದಿನಾಂಕ 19-07-2020 ಹಾಗೂ 02-08-2020ಕ್ಕೆ ಫಿಕ್ಸ್ ಮಾಡಲಾಗಿತ್ತು. ಸಂಡೇ ಲಾಕ್‌ಡೌನ್ ಜಾರಿಯಾಗಿರುವುದರಿಂದ ಪರೀಕ್ಷೆಗಳ ದಿನಾಂಕಗಳನ್ನು ಮರುನಿಗದಿಪಡಿಸಿದೆ.

ಹೊಸ ದಿನಾಂಕ ಇಂತಿದೆ

* ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಸಮೂಹ ಎ ವೃಂದದ ಸಹಾಯಕ ನಿಯಂತ್ರಣಕರು 54 ಹುದ್ದೆಗಳಿಗೆ ದಿನಾಂಕ 19-07-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಬೇಕಿತ್ತು. ಆದ್ರೆ, ಇದೀಗ ಆಗಸ್ಟ್ 17ಕ್ಕೆ ಮುಂದೂಡಿದೆ.

* ಇನ್ನು ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ವೃಂದದ ಒಟ್ಟು 106 ಹುದ್ದೆಗಳಿಗೆ ದಿನಾಂಕ 02-08-2020ರಂದು ಸ್ಪರ್ಧಾತ್ಮಕ ಪರೀಕ್ಷೆ ನಿಗದಿ ಪಡಿಸಲಾಗಿತ್ತು, ಇದೀಗ ಇದನ್ನ  ಆಗಸ್ಟ್ 24ಕ್ಕೆ ಪರೀಕ್ಷೆ ನಡೆಸುವುದಾಗಿ ಕೆಪಿಎಸ್‌ಸಿ ತಿಳಿಸಿದೆ.