ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರೂಪ್‌ ಸಿ ವಿಭಾಗದಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರೂಪ್‌ ಸಿ ವಿಭಾಗದಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಲೋಕಸೇವಾ ಆಯೋಗವು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಹಾಗೂ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರೂಪ್‌ ಸಿ ವಿಭಾಗದಲ್ಲಿ ಖಾಲಿ ಇರುವ ಕೈಗಾರಿಕಾ ವಿಸ್ತರಣಾಧಿಕಾರಿ ಮತ್ತು ಗ್ರಂಥಪಾಲಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

KPSC Recruitment 2024 ಜಲಸಂಪನ್ಮೂಲ, ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ನೇಮಕಾತಿ

ಹುದ್ದೆಯ ವಿವರ

1.ಕೈಗಾರಿಕಾ ವಿಸ್ತರಣಾಧಿಕಾರಿ : 50 ಹುದ್ದೆ

2.ಗ್ರಂಥಪಾಲಕರು : 10 ಹುದ್ದೆ

ಪ್ರಮುಖ ದಿನಾಂಕಗಳು:

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2024

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ: ರು. 600

ಪ್ರ-ವರ್ಗ 2ಎ, 2ಬಿ, 3ಎ, ಮತ್ತು 3ಬಿ ಅಭ್ಯರ್ಥಿಗಳಿಗೆ: ರು. 300

ಮಾಜಿ ಸೈನಿಕರಿಗೆ: ರು.50

ಎಸ್‌ ಸಿ/ಎಸ್‌ ಟಿ, ಪ್ರ ವರ್ಗ-1/ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ

ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ: ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ಪತ್ರಿಕೆ ಎಂಬ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆಯ ಮಾದರಿಯಲ್ಲಿ ಇದ್ದು, ಮೂರುವರೆ ಗಂಟೆಯ ಅವಧಿಯಲ್ಲಿ ನಡೆಸಲಾಗುತ್ತದೆ. ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ನಿರ್ದಿಷ್ಟ ಪತ್ರಿಕೆಯು ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್‌, ಕಂಪ್ಯೂಟರ್‌ ಜ್ಞಾನ ವಿಷಯಗಳನ್ನು ಒಳಗೊಂಡಿರುತ್ತದೆ.

IIMB Recruitment ಬೆಂಗಳೂರಿನ ಇಂಡಿಯನ್ ಇನ್​ಸ್ಟಿಟ್ಯೂಟ್ ಆಫ್ ಮ್ಯಾನೇಜ್​ಮೆಂಟ್ ನಲ್ಲಿ ಹುದ್ದೆ

ಶೈಕ್ಷಣಿಕ ವಿದ್ಯಾರ್ಹತೆ

1.ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ: ಅಭ್ಯರ್ಥಿಗಳು ವಿಜ್ಞಾನ ಅಥವಾ ವಾಣಿಜ್ಯ ಅಥವಾ ಇತರ ಯಾವುದೇ ಶಾಖೆಯಲ್ಲಿ ಬ್ಯಾಚುಲರ್ ಆಫ್ ಎಂಜಿನಿಯರಿಂಗ್‌ ಪದವಿಯನ್ನು ಪಡೆದಿರಬೇಕು.

2. ಗ್ರಂಥಪಾಲಕ ಹುದ್ದೆಗೆ: ಅಭ್ಯರ್ಥಿಗಳು ಗ್ರಂಥಾಲಯ ವಿಜ್ಞಾನದಲ್ಲಿ ಪದವಿಯನ್ನು ಹೊಂದಿರಬೇಕು.

ವೇತನ ಶ್ರೇಣಿ

1.ಕೈಗಾರಿಕಾ ವಿಸ್ತರಣಾಧಿಕಾರಿ: ರು. 33,450 – 62,600

2.ಗ್ರಂಥಪಾಲಕ: ರು.37,900 - 70,850

ಆಯ್ಕೆ ವಿಧಾನ

1.ಕನ್ನಡ ಭಾಷಾ ಪರೀಕ್ಷೆ: ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಮಟ್ಟದಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಧ್ಯಯನ ಮಾಡಿರಬೇಕು. ಇಲ್ಲದಿದ್ದರೆ ಕರ್ನಾಟಕ ನಾಗರಿಕ ಸೇವಾ ನಿಯಮಗಳನ್ವಯ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆಯಲ್ಲಿ 150 ಅಂಕಗಳಿಗೆ ಕನಿಷ್ಟ 50 ಅಂಕಗಳನ್ನು ಪಡೆದು ಉತ್ತೀರ್ಣರಾಗಬೇಕು.

2. ಸ್ಪರ್ಧಾತ್ಮಕ ಪರೀಕ್ಷೆ: ಈ ಮೇಲ್ಕಂಡ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯಲ್ಲಿ ಒಟ್ಟು‌ ಶೇಕಡಾ 35 ರಷ್ಟು ಅಂಕಗಳನ್ನು ಕಡ್ಡಾಯವಾಗಿ ಪಡೆಯಬೇಕಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ಸಂಬಂಧಿಸಿದ ಪಠ್ಯಕ್ರಮ ಮತ್ತು ಇನ್ನಿತರ ಮಾಹಿತಿಗಾಗಿ: https://www.kpsc.kar.nic.in/