ಬೆಂಗಳೂರು, (ನ.19): ಅಭ್ಯರ್ಥಿಗಳ ಒತ್ತಾಯಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ) ನಡೆಸುವ ಕೆಎಎಸ್ ಮುಖ್ಯ ಪರೀಕ್ಷೆ ದಿನಾಂಕವನ್ನು ಮುಂದೂಡಿದೆ.

 ಈ ಹಿಂದೆ ಜನವರಿಯಲ್ಲಿ ಪರೀಕ್ಷೆ ನಡೆಸಲು ವೇಳಾಪಟ್ಟಿ ಬಿಡುಗಡೆ ಮಾಡಿತ್ತು. ಆದ್ರೆ, ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಾರ ಫೆಬ್ರವರಿಯಲ್ಲಿ ಪರೀಕ್ಷೆ ನಡೆಯಲಿದೆ.

"

ಕೆಎಎಸ್‌ ಪರೀಕ್ಷೆ 2 ತಿಂಗಳು ಮುಂದೂಡಿಕೆ..?

2020ರ ಜನವರಿ 8ರಿಂದ ಐಎಎಸ್ ಮುಖ್ಯ ಪರೀಕ್ಷೆ ನಡೆಸಲು ಕಳೆದ 6 ತಿಂಗಳ ಹಿಂದೆ ಯುಪಿಎಸ್‌ಸಿ ದಿನಾಂಕ ನಿಗದಿ ಮಾಡಿತ್ತು. ಈ ಅಂಶ ಗಮನದಲ್ಲಿದ್ದರೂ ಜನವರಿ 4ರಿಂದ ಕೆಎಎಸ್ ಮುಖ್ಯ ಪರೀಕ್ಷೆಗೆ ಕೆಪಿಎಸ್‌ಸಿ ದಿನಾಂಕ ನಿಗದಿ ಮಾಡಿತ್ತು. ಪರಿಣಾಮ ರಾಜ್ಯದಿಂದ ಐಎಎಸ್ ಮತ್ತು ಕೆಎಎಸ್ ಮುಖ್ಯ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿದ್ದ ರಾಜ್ಯದ ಸಾವಿರಾರೂ ಅಭ್ಯರ್ಥಿಗಳಿಗೆ ತೀವ್ರ ತೊಂದರೆಯಾಗಿತ್ತು. 

ಈ ಬಗ್ಗೆ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಮಧ್ಯೆ ಪ್ರವೇಶ ಮಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪರೀಕ್ಷೆ ಮುಂದೂಡುವಂತೆ ಕೆಪಿಎಸ್​ಸಿಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಯೋಗವು ಪರೀಕ್ಷೆ ಮುಂದೂಡಿ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಹೆಚ್ಚಿನ ಮಾಹಿತಿಗೆ http://www.kpsc.kar.nic.in/ ನೋಡಬಹುದು.