KPSC ನೇಮಕಾತಿ: 1080 ದ್ವಿತೀಯ ದರ್ಜೆ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ
ಕೆಪಿಎಸ್‌ಸಿ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
ಬೆಂಗಳೂರು, (ಮಾ.17): ಕರ್ನಾಟಕ ಲೋಕಸೇವಾ ಆಯೋಗ 2019-20ನೇ ಸಾಲಿನ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ.
ರಾಜ್ಯದ ವಿವಿಧ ಇಲಾಖೆಗಳಲ್ಲಿನ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ/ದ್ವಿತೀಯ ದರ್ಜೆ ಸಹಾಯಕ ಒಟ್ಟು ಒಟ್ಟು 1080 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
ಆಸಕ್ತಿ ಹಾಗೂ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ 9/4/2020ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಕರ್ನಾಟಕ ಪ್ರವಾಸೋದ್ಯಮ ನಿಗಮದಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಹುದ್ದೆಗಳ ವಿವರ: ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ 11, ಕಾರಾಗೃಹಗಳ ಇಲಾಖೆ 15, ಸಾರಿಗೆ ಇಲಾಖೆ 25, ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ 16, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ 428, ಕಾಲೇಜು ಶಿಕ್ಷಣ ಇಲಾಖೆ 88 ಸೇರಿದಂತೆ 1080 ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದೆ.
ವಿದ್ಯಾರ್ಹತೆ: ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಪಿಯುಸಿ/ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ವಿದ್ಯಾರ್ಹತೆಯ ತತ್ಸಮಾನ ವಿದ್ಯಾರ್ಹತೆ, ಸಿಬಿಎಸ್‌ಸಿ ಮತ್ತು ಐಎಸ್‌ಸಿ ಮಂಡಳಿಯು ನಡೆಸುವ ಕ್ಲಾಸ್ 12 ಪರೀಕ್ಷೆ. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳು ನಡೆಸುವ ಕ್ಲಾಸ್ 12 ಪರೀಕ್ಷೆ, ಎನ್‌ಐಓಎಸ್ ವತಿಯಿಂದ ನಡೆಸುವ ಉನ್ನತ ಪ್ರೌಢ ಶಿಕ್ಷಣ ಕೋರ್ಸ್ ಮುಗಿಸಿರಬೇಕು.
ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, ಪ್ರವರ್ಗ2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಶುಲ್ಕ, ವೇತನದ ವಿವರ ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.+ 35 ರೂ. ಪ್ರೋಸೆಸಿಂಗ್ ಚಾರ್ಜ್, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ. + 35 ರೂ. ಪ್ರೋಸೆಸಿಂಗ್ ಚಾರ್ಜ್, ಮಾಜಿ ಸೈನಿಕರಿಗೆ 50 ರೂ. + 35 ರೂ. ಪ್ರೋಸೆಸಿಂಗ್ ಶುಲ್ಕ ನಿಗದಿ ಮಾಡಲಾಗಿದೆ.
SC/ST/ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆದರೆ, ಪ್ರೋಸೆಸಿಂಗ್ ಶುಲ್ಕ 35 ರೂ. ಪಾವತಿಸಬೇಕು.
ಪರೀಕ್ಷೆ: ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ 6/6/2020 ಮತ್ತು ಸ್ಪರ್ಧಾತ್ಮಕ ಪರೀಕ್ಷೆ 7/6/2020ರಂದು ನಡೆಯಲಿದೆ ಎಂದು ನೇಮಕಾತಿ ಆದೇಶದಲ್ಲಿ ಉಲ್ಲೆಖಿಸಲಾಗಿದೆ.
ವೇತನ ಶ್ರೇಣಿ: 21400 ರಿಂದ 42000 ರೂ.ತಿಂಗಳಿಗೆ. ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.