Asianet Suvarna News Asianet Suvarna News

ಅರಣ್ಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

KPSC Recruitment 2020 Apply for Assistant Conservator of Forest Posts rbj
Author
Bengaluru, First Published Oct 16, 2020, 8:57 PM IST

ಬೆಂಗಳೂರು, (ಅ.16): ಕರ್ನಾಟಕ ಲೋಕಸೇವಾ ಆಯೋಗ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಲ್ಲಿ ಗ್ರೂಪ್ -"ಎ" ವೃಂದದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಅನ್​ಲೈನ್​ ಅರ್ಜಿ ಆಹ್ವಾನಿಸಿದೆ.

 16 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅ.20ರೊಳಗೆ ಅರ್ಜಿ ಸಲ್ಲಿಸಬಹುದಾಗಿ ತಿಳಿಸಿದೆ.

ವಿದ್ಯಾರ್ಹತೆ: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಬಿ.ಎಸ್ಸಿ ಪದವಿ ಮತ್ತು ಬಿ.ಎಸ್ಸಿ ಪದವಿ ಹೊರತುಪಡಿಸಿ ಇತರೆ ವಿಜ್ಞಾನ/ಇಂಜಿನಿಯರಿಂಗ್ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದೆ.

ಜಾಬ್ಸ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಯೋಮಿತಿ: ಅಭ್ಯರ್ಥಿಯು ಕನಿಷ್ಟ 18 ವರ್ಷ ಪೂರೈಸಿರಬೇಕು. ಗರಿಷ್ಟ 30 ವರ್ಷದೊಳಗಿನ ಸಾಮಾನ್ಯ, ಗರಿಷ್ಟ 33 ವರ್ಷದೊಳಗಿನ ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 35 ವರ್ಷದೊಳಗಿನ ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

ವೇತನ ಶ್ರೇಣಿ: ಗ್ರೂಪ್ 'ಎ' ವೃಂದದ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 52,650/- ರಿಂದ 97,100/-ರೂ ವೇತನವನ್ನು ಸಿಗಲಿದೆ.

ಪರೀಕ್ಷಾ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಗಳನ್ನು ಆನ್‌ಲೈನ್ ಮೂಲಕ ಪಾವತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇದೆ.

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kpsc.kar.nic.in/indexk.html ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ನಂತರ ಭರ್ತಿ ಮಾಡಿ ಅರ್ಜಿ ಶುಲ್ಕವನ್ನು ಪಾವತಿಸಬೇಕು
 

Follow Us:
Download App:
  • android
  • ios