ಬೆಂಗಳೂರು, (ಆ.01): ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ಸಿ ತಾಂತ್ರಿಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್​ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಆರ್​ಪಿಸಿ- 244 ಹಾಗೂ ಕಲ್ಯಾಣ ಕರ್ನಾಟಕ 279 ಸೇರಿ ಒಟ್ಟು 523 ಹುದ್ದೆಗಳಿದ್ದು, ಆಗಸ್ಟ್ 20 ರಿಂದ ಸೆಪ್ಟೆಂಬರ್ 19ರ ವರೆಗೆ ಸಲ್ಲಿಸಲು ಅವಕಾಶವಿದೆ.

ಜಾಬ್ಸ್‌ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಜಿಗಳನ್ನು ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸಿದಲ್ಲಿ ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಿ, ಒಂದೇ ಶುಲ್ಕವನ್ನು ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಹತೆ: ಪದವಿ ಮತ್ತು ಪದವಿ ಪೂರ್ವ ವಿದ್ಯಾರ್ಹತೆ ಪೂರೈಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನೇಮಕಾತಿ ಪ್ರಕ್ರಿಯೆಯಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆ, ದಾಖಲಾತಿ ಪರಿಶೀಲನೆ, ಇತರ ಮಾನದಂಡಗಳನ್ನು ಅನುಸರಿಸಲಾಗುತ್ತದೆ.

ಬೆಂಗಳೂರು, ಬೆಳಗಾವಿ, ಕಲಬುರಗಿ, ಮೈಸೂರು, ಶಿವಮೊಗ್ಗ ವಿಭಾಗೀಯ ಕೇಂದ್ರಗಳಲ್ಲಿ ಅಥವಾ ಆಯೋಗ ನಿಗದಿಪಡಿಸುವ ಇತರ ಯಾವುದೇ ಕೇಂದ್ರ ಸ್ಥಳದಲ್ಲಿ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ/ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುವುದು. 

ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕ- 20-08-2020
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ-19-09-2020
* ಅರ್ಜಿ ಶುಲ್ಕ ಪಾವತಿಸುವ ಕೊನೆ ದಿನಾಂಕ-21-09-2020
*  ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕ- ನಂತರ ತಿಳಿಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ಆಗಸ್ಟ್ 20 ರಿಂದ ಸೆಪ್ಟೆಂಬರ್ 19ರ ವರೆಗೆ ಸಲ್ಲಿಸಲು ಅವಕಾಶವಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ