ರೇಷ್ಮೆ ವಿಸ್ತಾರಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಪ್ರಕಟ : ಸಚಿವ ನಾರಾಯಣ ಗೌಡ
ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣ ಗೌಡ ಅವರು ತಿಳಿಸಿದ್ದಾರೆ.
ಬೆಂಗಳೂರು (ಜು. 30): ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿಗಳ 72 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ಮೂಲಕ ಅಧಿಸೂಚನೆ ಹೊರಡಿಸಲಾಗಿದೆ ಎಂದು ರೇಷ್ಮೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರಾದ ಡಾ. ನಾರಾಯಣ ಗೌಡ ಅವರು ತಿಳಿಸಿದ್ದಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಆಗಸ್ಟ್ 10 ರಿಂದ ಸೆಪ್ಟೆಂಬರ್ 9 ರ ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸಾಮಾನ್ಯ ಅಭ್ಯರ್ಥಿಗಳಿಗೆ 600 ರೂ, ಪ್ರವರ್ಗ 2 ಎ,ಬಿ, 3 ಎ, ಬಿ 300 ರೂ. ಮಾಜಿ ಸೈನಿಕರಿಗೆ 50 ರೂ ಶುಲ್ಕ ವಿಧಿಸಲಾಗಿದೆ. ಹಾಗೂ ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಹಾಗೂ ವಿಕಲಾಂಗ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ. ರೇಷ್ಮೆ ಇಲಾಖೆಯ ಯೋಜನೆಗಳನ್ನು ಸಮರ್ಥವಾಗಿ ಜಾರಿಗೊಳಿಸಲಾಗಿದೆ. ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಿಬ್ಬಂದಿ ಕೊರತೆ ಇರುವುದು ಕಂಡು ಬಂದಿತ್ತು. ಜೊತೆಗೆ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಸಿಬ್ಬಂದಿ ಕೊರತೆಯ ಬಗ್ಗೆ ರೈತರು ಸರಕಾರದ ಗಮನಕ್ಕೆ ಕೂಡ ತಂದಿದ್ದರು.