KPSC Recruitment 2022: ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ
ಕರ್ನಾಟಕ ಲೋಕಸೇವಾ ಆಯೋಗವು ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಒಟ್ಟು 10 ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಏಪ್ರಿಲ್ 18 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಬೆಂಗಳೂರು(ಮಾ.9): ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission -KPSC) ತನ್ನ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ (Forensic Science Laboratories) ಒಟ್ಟು 10 ಸಹಾಯಕ ನಿರ್ದೇಶಕ (Assistant Director) ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 10 ಸಹಾಯಕ ನಿರ್ದೇಶಕ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಮಾರ್ಚ್ 16 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 18ರ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 19 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗೆ https://kpsc.kar.nic.in/ಗೆ ಭೇಟಿ.
ಒಟ್ಟು 10 ಹುದ್ದೆಗಳ ಮಾಹಿತಿ:
ಸಹಾಯಕ ನಿರ್ದೇಶಕರು (Toxicology - ಟಾಕ್ಸಿಕಾಲಜಿ ವಿಭಾಗ): 3 ಹುದ್ದೆಗಳು
ಸಹಾಯಕ ನಿರ್ದೇಶಕರು ((Biology - ಜೀವಶಾಸ್ತ್ರ ವಿಭಾಗ): 2 ಹುದ್ದೆಗಳು
ಸಹಾಯಕ ನಿರ್ದೇಶಕ (DNA - ಡಿಎನ್ಎ ವಿಭಾಗ): 1 ಹುದ್ದೆ
ಸಹಾಯಕ ನಿರ್ದೇಶಕರು ( Chemical - ರಾಸಾಯನಿಕ ವಿಭಾಗ): 2 ಹುದ್ದೆಗಳು
ಸಹಾಯಕ ನಿರ್ದೇಶಕರು (Question Document - ಪ್ರಶ್ನೆ ದಾಖಲೆ ವಿಭಾಗ): 2 ಹುದ್ದೆಗಳು
ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಲೋಕಸೇವಾ ಆಯೋಗದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಸಂಬಂಧಿಸಿ ವಿಷಯದಲ್ಲಿ ಡಾಕ್ಟರೇಟ್ ಪದವಿ ಮಾಡಿರಬೇಕು.
FCI Recruitment 2022: ಆಹಾರ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ
ವಯೋಮಿತಿ: ಕರ್ನಾಟಕ ಲೋಕಸೇವಾ ಆಯೋಗದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದ ಒಳಗಿರಬೇಕು. 2A,2B,3A,3B ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಕರ್ನಾಟಕ ಲೋಕಸೇವಾ ಆಯೋಗದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ: ಕರ್ನಾಟಕ ಲೋಕಸೇವಾ ಆಯೋಗದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 600 ರೂ ಅರ್ಜಿ ಶುಲ್ಕ ಪಾವತಿಸಬೇಕು. 2A, 2B, 3A, 3B ಅಭ್ಯರ್ಥಿಗಳು 300 ರೂ., ಮಾಜಿ ಸೈನಿಕರು 50 ರೂ ಅರ್ಜಿ ಶುಲ್ಕ ಪಾವತಿಸಬೇಕು. SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ವೇತನ ವಿವರ: ಕರ್ನಾಟಕ ಲೋಕಸೇವಾ ಆಯೋಗದ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ವಿವಿಧ ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ₹52,650 ರಿಂದ ₹97,100 ವೇತನ ದೊರೆಯಲಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮಾರ್ಚ್ 16, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಎಪ್ರಿಲ್ 18 , 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಎಪ್ರಿಲ್ 19, 2022
Delhi University Khalsa College Recruitment 2022: ಬೋಧಕರ ಹುದ್ದೆಗೆ ದೆಹಲಿ ವಿವಿ ನೇಮಕಾತಿ