Asianet Suvarna News Asianet Suvarna News

KPSC Recruitment 2024 ಜಲಸಂಪನ್ಮೂಲ, ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ನೇಮಕಾತಿ

ಕೆಪಿಎಸ್‌ಸಿ ಜಲ ಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ28 ಕೊನೆಯ ದಿನವಾಗಿದೆ.

KPSC Recruitment 2024  Group C Notification   for Water Resources  Public Library Department gow
Author
First Published May 14, 2024, 11:09 AM IST

ಕರ್ನಾಟಕ ಲೋಕಸೇವಾ ಆಯೋಗವು ಜಲ ಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಮೇ28 ಕೊನೆಯ ದಿನವಾಗಿದೆ.

ಕರ್ನಾಟಕ ಲೋಕಸೇವಾ ಆಯೋಗ (KPSC) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಜಲ ಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಈ ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಪ್ರಕಟಿಸಿದೆ. ಕಿರಿಯ ಇಂಜಿನಿಯರ್‌, ಸಹಾಯಕ ಗ್ರಂಥಪಾಲಕ ಸೇರಿ ಒಟ್ಟು 313 ಹುದ್ದೆಗಳಿವೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಮೇ 28 ಕೊನೆಯ ದಿನವಾಗಿದೆ.

5, 8, 9ನೇ ಕ್ಲಾಸ್‌ ಬೋರ್ಡ್‌ ಎಕ್ಸಾಂ ಮಾಹಿತಿ ರಹಸ್ಯ..!

ಹುದ್ದೆಗಳ ವಿವರ: ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆ: 216 ಹುದ್ದೆ, ಕಿರಿಯ ಎಂಜಿನಿಯರ್‌ (ಸಿವಿಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 54 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)- ಜಲ ಸಂಪನ್ಮೂಲ ಇಲಾಖೆ: 26 ಹುದ್ದೆ, ಕಿರಿಯ ಎಂಜಿನಿಯರ್‌ (ಮೆಕ್ಯಾನಿಕಲ್‌)-ಜಲ ಸಂಪನ್ಮೂಲ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಸೇವಾ ನಿರತ ಗ್ರೂಪ್‌ ಸಿ ಸಿಬ್ಬಂದಿಗೆ: 4 ಹುದ್ದೆ, ಸಹಾಯಕ ಗ್ರಂಥಪಾಲಕ-ಸಾರ್ವಜನಿಕ ಗ್ರಂಥಾಲಯ: 13 ಹುದ್ದೆಗಳಿವೆ.

ವಿದ್ಯಾರ್ಹತೆ: ಕಿರಿಯ ಇಂಜಿನಿಯರ್ (JE): ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಸಿವಿಲ್‌ / ಮೆಕ್ಯಾನಿಕಲ್‌ ಡಿಪ್ಲೋಮಾ ಪದವಿ ಪಡೆದಿರಬೇಕು.

ಗ್ರಂಥಾಲಯ ಸಹಾಯಕ: ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ಮೂರು ವರ್ಷಗಳ ಡಿಪ್ಲೋಮಾ ಇನ್‌ ಲೈಬ್ರರಿ ಸೈನ್ಸ್‌ (Diploma in Library Science) ವಿದ್ಯಾರ್ಹತೆಯನ್ನು ಹೊಂದಿರಬೇಕು.

ಸಿಬಿಎಸ್‌ಇ ಫಲಿತಾಂಶ 2023-24: ಮಾಯಾ, ಸ್ತುತಿ ಕರ್ನಾಟಕದ ಟಾಪರ್ಸ್‌

ವಯೋಮಿತಿ: ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಸಡಿಲಿಕೆ ಇದೆ.

ಅರ್ಜಿ ಶುಲ್ಕ: ಸಾಮಾನ್ಯ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 600 ರು. ಪಾವತಿಸಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 300 ರು. ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50 ರು. ಪಾವತಿಸಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ /ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ನೆಟ್ ಬ್ಯಾಂಕಿಂಗ್/ ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್ /ಯುಪಿಐ ಮೂಲಕ ಆನ್‌ಲೈನ್‌ನಲ್ಲೇ ಪಾವತಿ ಮಾಡಬೇಕು.

ಆಯ್ಕೆ ವಿಧಾನ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ದಿಷ್ಟ ವಿಷಯಗಳ ಪತ್ರಿಕೆಯನ್ನು ಹೊಂದಿದೆ. ಪ್ರತಿಯೊಂದು ಪತ್ರಿಕೆಯು 100 ಅಂಕಗಳ ಪ್ರಶ್ನೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ಒಟ್ಟು ಅಂಕ 200. ಪರೀಕ್ಷೆಯಲ್ಲಿ ನೆಗೆಟಿವ್‌ ಅಂಕವಿದ್ದು, ಎಚ್ಚರಿಕೆಯಿಂದ ಉತ್ತರಿಸಬೇಕು.

ಮಾಸಿಕ ವೇತನ: ಆಯ್ಕೆಯಾಗುವ ಕಿರಿಯ ಎಂಜಿನಿಯರ್‌ಗೆ 33,450 ರು.-62,600 ರು. ಮತ್ತು ಗ್ರಂಥಾಲಯ ಸಹಾಯಕರಿಗೆ 30,350 ರು. – 58,250 ರು.

ಕೆಪಿಸಿಎಲ್ ನೇಮಕ ಪರೀಕ್ಷೆ ಅಂಕ ಪಟ್ಟಿ, ಆಕ್ಷೇಪಣೆಗೆ ಅವಕಾಶ
ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (ಕೆಪಿಸಿಎಲ್) ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್, ಕೆಮಿಸ್ಟ್ ಇತ್ಯಾದಿ 622 ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದಿರುವ ಅಂಕಗಳ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್ ನಲ್ಲಿ ಪ್ರಕಟಿಸಿದೆ. ಆಕ್ಷೇಪಣೆಗಳು ಇದ್ದಲ್ಲಿ ಮೇ 15ರೊಳಗೆ kea2023exam@gmail.com ಗೆ ಇ ಮೇಲ್ ಮೂಲಕ ಕಳುಹಿಸಬೇಕು ಎಂದು ಪ್ರಾಧಿಕಾರ ತಿಳಿಸಿದೆ. ಇದೇ ವೇಳೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯಲ್ಲಿ ಖಾಲಿ ಇದ್ದ 41 ಹುದ್ದೆಗಳಿಗೆ ನಡೆಸಿದ ಲಿಖಿತ ಪರೀಕ್ಷೆಯ ಅಂತಿಮ ಅಂಕ ಪಟ್ಟಿಯನ್ನು ಕೂಡ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ ಸೈಟ್‌ನಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ನಿಂದ ಹೆಚ್ಚಿನ ಮಾಹಿತಿ ಪಡೆಯಬಹುದು. ಒಂದೆರಡು ದಿನಗಳಲ್ಲಿ ಈ ಪಟ್ಟಿಯನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲಾಗುತ್ತದೆ ಎಂದು ಕೆಇಎ ತಿಳಿಸಿದೆ.

Follow Us:
Download App:
  • android
  • ios