ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹಾಗೂ ಹೈದ್ರಾಬಾದ್‌ ಕರ್ನಾಟಕದ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆನ್ ಲೈನ್‌ ಅರ್ಜಿ ಸಲ್ಲಿಸಲು ಮೆ 28 ಕೊನೆಯ ದಿನವಾಗಿದೆ.

ಕರ್ನಾಟಕ ಲೋಕಸೇವಾ ಆಯೋಗವು ಜಲ ಸಂಪನ್ಮೂಲ ಇಲಾಖೆ ಮತ್ತು ಸಾರ್ವಜನಿಕ ಗ್ರಂಥಾಲಯ ಹಾಗೂ ಅಂತರ್ಜಲ ನಿರ್ದೇಶನಾಲಯ, ಪೌರಾಡಳಿತ ನಿರ್ದೇಶನಾಲಯದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ 313 ಹಾಗೂ ಹೈದ್ರಾಬಾದ್‌ ಕರ್ನಾಟಕದ ವೃಂದದ 97 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಆನ್ ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ

1. ಉಳಿಕೆ ಮೂಲ ವೃಂದ : 313 ಹುದ್ದೆ

ಅ. ಕಿರಿಯ ಇಂಜಿನಿಯರ್‌ (ಸಿವಿಲ್‌ )– 300 ಹುದ್ದೆ

ಆ. ಸಹಾಯಕ ಗ್ರಂಥಪಾಲಕ – 13 ಹುದ್ದೆ

2. ಹೈದ್ರಾಬಾದ್‌ ಕರ್ನಾಟಕದ ವೃಂದ :

ಅ. ಕಿರಿಯ ಇಂಜಿನಿಯರ್‌ : 41 ಹುದ್ದೆ

ಆ. ನೀರು ಸರಬರಾಜುದಾರರು : 09 ಹುದ್ದೆ

ಇ. ಕಿರಿಯ ಆರೋಗ್ಯ ನಿರೀಕ್ಷಕರು : 39 ಹುದ್ದೆ

ಈ. ಸಹಾಯಕ ಗ್ರಂಥಪಾಲಕ : 08 ಹುದ್ದೆ

UPSC Result 2023: ದೇಶಕ್ಕೆ ಟಾಪರ್‌ ಈ 10 ಮಂದಿ, ಬಹುತೇಕರು ಸರ್ಕಾರಿ ಸೇವೆಯಲ್ಲಿರುವವರೇ!

ಪ್ರಮುಖ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 29-04-2024

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 28-05-2024

ಅರ್ಜಿ ಶುಲ್ಕ

ಸಾಮಾನ್ಯ ಅಭ್ಯರ್ಥಿಗಳಿಗೆ: ರು. 600

ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರು. 300

ಮಾಜಿ ಸೈನಿಕರಿಗೆ: ರು.50

ಎಸ್‌ ಸಿ/ ಎಸ್‌ ಟಿ/ಪ್ರವರ್ಗ-೧/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕಇಲ್ಲ

AAI Recruitment 2024 ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ ಉದ್ಯೋಗ ನೇಮಕಾತಿ

ಶೈಕ್ಷಣಿಕ ವಿದ್ಯಾರ್ಹತೆ :

1. ಕಿರಿಯ ಇಂಜಿನಿಯರ್‌ (ಸಿವಿಲ್‌): ಅಭ್ಯರ್ಥಿಗಳು ಮಾನ್ಯತೆ ಪಡೆದ ತಾಂತ್ರಿಕ ಶಿಕ್ಷಣ ವಿಶ್ವವಿದ್ಯಾನಿಲಯದಿಂದ ಸಿವಿಲ್ ಇಂಜಿನಿಯರಿಂಗ್ (ಸಾಮಾನ್ಯ) ಪದವಿ/ ಡಿಪ್ಲೊಮಾ ಹೊಂದಿರಬೇಕು.

2. ಸಹಾಯಕ ಗ್ರಂಥಪಾಲಕ: ಅಭ್ಯರ್ಥಿಗಳು ಲೈಬ್ರರಿ ಸೈನ್ಸ್‌ನಲ್ಲಿ ಡಿಪ್ಲೊಮಾ ಹೊಂದಿರುವವರಾಗಿರಬೇಕು.

ಸ್ಪರ್ಧಾತ್ಮಕ ಪರೀಕ್ಷೆಯ ಮಾಹಿತಿ: ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿಧರ್ಧಷ್ಟ ಪತ್ರಿಕೆ ಎಂಬ 100 ಅಂಕಗಳ ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆಯ ಮಾದರಿಯಲ್ಲಿ ಇದ್ದು, ಮೂರುವರೆ ಗಂಟೆಯ ಅವಧಿಯಲ್ಲಿ ನಡೆಸಲಾಗುತ್ತದೆ. ತಪ್ಪು ಉತ್ತರಕ್ಕೆ ನಾಲ್ಕನೇ ಒಂದು ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ನಿರ್ದಿಷ್ಟ ಪತ್ರಿಕೆಯು ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್‌, ಕಂಪ್ಯೂಟರ್‌ ಜ್ಞಾನ ವಿಷಯಗಳನ್ನು ಒಳಗೊಂಡಿರುತ್ತದೆ.

ವೇತನ ಶ್ರೇಣಿ

1. ಕಿರಿಯ ಇಂಜಿನಿಯರ್‌ (ಸಿವಿಲ್‌ ): ರು. 33,450 – 62,600

2. ಸಹಾಯಕ ಗ್ರಂಥಪಾಲಕ : ರು. 30,350 - 58,250

ಆಯ್ಕೆ ವಿಧಾನ: ಈ ಮೇಲ್ಕಂಡ ಹುದ್ದೆಗಳನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳ‌ನ್ವಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: https://www.kpsc.kar.nic.in/