ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಇಂದೇ ಅರ್ಜಿ ಸಲ್ಲಿಸಿ

ಕೆಪಿಎಸ್‌ಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ‌ಹೈ-ಕ‌ ವೃಂದದ‌ಲ್ಲಿನ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ.

KPSC Recruitment notification for  Development Officer in Rural Development Panchayat Raj Department gow

ಕರ್ನಾಟಕ ಲೋಕಸೇವಾ ಆಯೋಗವು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಮತ್ತು ‌ಹೈ-ಕ‌ ವೃಂದದ‌ಲ್ಲಿನ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಏಪ್ರಿಲ್ 15ರಿಂದ ಆನ್‌ಲೈನ್ ಮೂಲಕ ಅರ್ಜಿ https://kpsc.kar.nic.in/ ಸಲ್ಲಿಸಬಹುದು.

ಹುದ್ದೆಯ ವಿವರ
ಪಂಚಾಯತ್ ಅಭಿವೃದ್ಧಿ ಅಧಿಕಾರಿ : 247 ಹುದ್ದೆ

1. ಉಳಿಕೆ ಮೂಲ ವೃಂದ : 150 ಹುದ್ದೆ
2. ಹೈದರಾಬಾದ್-ರ‍್ನಾಟಕ ವೃಂದ : 97 ಹುದ್ದೆ

ಪ್ರಮುಖ ದಿನಾಂಕಗಳು
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 15-04-2024
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-05-2024

ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ: ರೂ. 600

ವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ: ರೂ. 300

ಮಾಜಿ ಸೈನಿಕರಿಗೆ: ರೂ.50

ಎಸ್ ಸಿ/ ಎಸ್ ಟಿ/ ಪ್ರವರ್ಗ -1, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ: ಶುಲ್ಕವಿಲ್ಲ

ವಯಸ್ಸಿನ ಮಿತಿ (15-05-2024 ರಂತೆ) :
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 35 ವರ್ಷಗಳು
ವೇತನ ಶ್ರೇಣಿ: ಮಾಸಿಕ ರೂ. 37900 - 70850

ಶೈಕ್ಷಣಿಕ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.

ಆಯ್ಕೆ ವಿಧಾನ: ಈ ಮೇಲ್ಕಂಡ ಹುದ್ದೆಗಳನ್ನು ಕರ್ನಾಟಕ ನಾಗರಿಕ ಸೇವೆಗಳ ನಿಯಮಗಳ‌ನ್ವಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಶೇಕಡಾವಾರು ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಸ್ಮರ್ಧಾತ್ಮಕ ಪರೀಕ್ಷೆಯ ಮಾಹಿತಿ: ಪರೀಕ್ಷೆಯು ಸಾಮಾನ್ಯ ಪತ್ರಿಕೆ ಮತ್ತು ನಿರ್ಧಿಷ್ಟ ಪತ್ರಿಕೆಯ 100 ಅಂಕಗಳ

ಎರಡು ಪತ್ರಿಕೆಗಳನ್ನು ಒಳಗೊಂಡಿದ್ದು, ವಸ್ತುನಿಷ್ಠ ಬಹು ಆಯ್ಕೆಯ ಮಾದರಿಯಲ್ಲಿ ಇದ್ದು, ಎರಡು ಗಂಟೆಯ ಅವಧಿಯಲ್ಲಿ

ನಡೆಸಲಾಗುತ್ತದೆ. ತಪ್ಪು ಉತ್ತರಕ್ಕೆ ನಾಲ್ಲನೇ ಒಂದು ಋಣಾತ್ಮಕ ಅಂಕಗಳನ್ನು ಕಡಿತಗೊಳಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ :  https://kpsc.kar.nic.in/

Latest Videos
Follow Us:
Download App:
  • android
  • ios