ಕರ್ನಾಟಕ ಲೋಕಸೇವಾ ಆಯೋಗವು ಕಾಲೇಜು ಶಿಕ್ಷಣ ಇಲಾಖೆ , BWSSB, ಕೃಷಿ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ, ಹೆಚ್ಚುವರಿ ಆಯ್ಕೆಪಟ್ಟಿಗಳನ್ನು ಬಿಡುಗಡೆ ಮಾಡಿದೆ. 

ಬೆಂಗಳೂರು(ಫೆ.6): ಕರ್ನಾಟಕ ಲೋಕಸೇವಾ ಆಯೋಗವು (Karnataka Public Service Commission - KPSC) ಕಾಲೇಜು ಶಿಕ್ಷಣ ಇಲಾಖೆ , BWSSB, ಕೃಷಿ ಇಲಾಖೆ ಹೀಗೆ ವಿವಿಧ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಅಂತಿಮ ಮತ್ತು ಹೆಚ್ಚುವರಿ ಆಯ್ಕೆಪಟ್ಟಿಗಳು ಜೊತೆಗೆ ಕಟ್‌ ಆಫ್‌ ಅಂಕಗಳನ್ನು ಕೂಡ ಬಿಡುಗಡೆ ಮಾಡಿದೆ. ಆಯ್ಕೆಪಟ್ಟಿಗಳನ್ನು ಪರಿಶೀಲಿಸಲು ವೆಬ್‌ಸೈಟ್‌ http://www.kpsc.kar.nic.in/ ಗೆ ಭೇಟಿ ನೀಡಿರಿ. ಯಾವ ಹುದ್ದೆಗೆ ಅಂತಿಮ, ಹೆಚ್ಚುವರಿ ಆಯ್ಕೆ ಪಟ್ಟಿಗಳನ್ನು ಬಿಡುಗಡೆ ಮಾಡಿದೆ ಎಂಬುದರ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ.

ಅಂತಿಮ ಆಯ್ಕೆಪಟ್ಟಿಗಳು
ಜಲ ಸಂಪನ್ಮೂಲ ಇಲಾಖೆಯಲ್ಲಿನ 181 (ಹೆಚ್‌ಕೆ) ಸಹಾಯಕ ಇಂಜಿನಿಯರ್ ಹುದ್ದೆಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.
ಕಾಲೇಜು ಶಿಕ್ಷಣ ಇಲಾಖೆಯ ಗ್ರಂಥಾಲಯ ಸಹಾಯಕರು 29 (HK) ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.

ಹೆಚ್ಚುವರಿ ಆಯ್ಕೆಪಟ್ಟಿಗಳು
ಕೃಷಿ ಮಾರಾಟ ಇಲಾಖೆಯಲ್ಲಿನ ಮಾರಾಟ ಸಹಾಯಕರು 25 (HK) ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ.

BEML RECRUITMENT 2022: ಗ್ರೂಪ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನ

ಈ ಮೇಲಿನ ಸದರಿ ಹುದ್ದೆಗಳಿಗೆ ಆಯ್ಕೆ ಮಾಡಲಾದ ವರ್ಗಾವಾರು ಅಭ್ಯರ್ಥಿಗಳ ಶೇ. ಅಂಕಗಳ ಮಾಹಿತಿಗಳನ್ನು ಕೆಪಿಎಸ್‌ಸಿ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ತಾಣದಲ್ಲಿ ಪರಿಶೀಲನೆ ನಡೆಸಬಹುದು.

ಕಾಲೇಜು ಶಿಕ್ಷಣ ಇಲಾಖೆ ಗ್ರಂಥಾಲಯ ಸಹಾಯಕ ಮತ್ತು ಕೃಷಿ ಮಾರಾಟ ಇಲಾಖೆಯಲ್ಲಿನ ಮಾರಾಟ ಸಹಾಯಕರು ಹುದ್ದೆಗೆ 2017 ನೇ ಸಾಲಿನಲ್ಲಿ ಮತ್ತು ಜಲ ಸಂಪನ್ಮೂಲ ಇಲಾಖೆಯ ಅಸಿಸ್ಟಂಟ್‌ ಇಂಜಿನಿಯರ್ ಹುದ್ದೆಗೆ 2020ನೇ ಸಾಲಿನಲ್ಲಿ ನೇಮಕಾತಿ ಅಧಿಸೂಚನೆಗಳನ್ನು ಬಿಡುಗಡೆ ಮಾಡಲಾಗಿತ್ತು. ಅರ್ಜಿ ಸಲ್ಲಿಸಿ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳನ್ನು, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೀಸಲಾತಿಗೆ ಅನುಗುಣವಾಗಿ ಆಯ್ಕೆ ಮಾಡಿ ಅಂತಿಮ, ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.

SBI SCO Recruitment 2022: ಸ್ಪೆಷಲಿಸ್ಟ್ ಕೇಡರ್ ಅಧಿಕಾರಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

ಗ್ರೂಪ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 9 ಕೊನೆಯ ದಿನ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (Bharat Earth Movers Limited - BEML) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 25 ಗ್ರೂಪ್​ A ಪೋಸ್ಟ್​​ಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಫೆಬ್ರವರಿ 9 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳು ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ https://www.bemlindia.in/ ಭೇಟಿ ನೀಡಲು ಕೋರಲಾಗಿದೆ.

ಒಟ್ಟು 25 ಹುದ್ದೆಯ ಮಾಹಿತಿ:
ಡೆಪ್ಯುಟಿ ಜನರಲ್ ಮ್ಯಾನೇಜರ್-5
ಅಸಿಸ್ಟೆಂಟ್ ಜನರಲ್ ಮ್ಯಾನೇಜರ್-6
ಸೀನಿಯರ್ ಮ್ಯಾನೇಜರ್-5
ಮ್ಯಾನೇಜರ್-8
ಅಸಿಸ್ಟೆಂಟ್ ಮ್ಯಾನೇಜರ್-1

ಶೈಕ್ಷಣಿಕ ವಿದ್ಯಾರ್ಹತೆ: ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗ್ರೂಪ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು.

ಅರ್ಜಿ ಶುಲ್ಕ: ಬೆಮೆಲ್ ನಲ್ಲಿ ಖಾಲಿ ಇರುವ ಗ್ರೂಪ್​ ಎ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಹ ಮತ್ತು ಆಸಕ್ತ OBC ಅಭ್ಯರ್ಥಿಗಳು (SC/ST/ PWD ಗಳಿಗೆ ಅನ್ವಯಿಸುವುದಿಲ್ಲ) ಅರ್ಜಿ ನಮೂನೆಯ ಕೊನೆಯಲ್ಲಿ “ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ” ಕ್ಲಿಕ್ ಮಾಡುವ ಮೂಲಕ ಮರುಪಾವತಿಸಲಾಗದ ಶುಲ್ಕ ರೂ.500/- ಅನ್ನು ಪಾವತಿಸಬೇಕಾಗುತ್ತದೆ. ಹೆಚ್ಚಿನ ಸಂಬಂಧಿತ ವಿವರಗಳಿಗಾಗಿ ಅಭ್ಯರ್ಥಿಗಳು BEML ನ ಅಧಿಕೃತ ಸೈಟ್ ಅನ್ನು ಪರಿಶೀಲಿಸಬಹುದು.