Asianet Suvarna News Asianet Suvarna News

KRIDL Recruitment 2022: ವಿವಿಧ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ

ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ  ಅರ್ಜಿ ಆಹ್ವಾನಿಸಿದ್ದು, ಎಪ್ರಿಲ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

KRIDL Recruitment 2022 notification for various post gow
Author
Bengaluru, First Published Mar 30, 2022, 11:59 AM IST

ಬೆಂಗಳೂರು (ಮಾ.30): ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ (Karnataka Rural Infrastructure Development Limited -
KRIDL) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸಹಾಯಕ ಎಂಜಿನಿಯರ್ (Assistant Engineer), ಜೂನಿಯರ್ ಎಂಜಿನಿಯರ್ (Junior Engineer) ಸೇರಿ ಒಟ್ಟು 76 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ತಾಣ  http://kridl.org/ ಗೆ ಭೇಟಿ ನೀಡಲು ಕೋರಲಾಗಿದೆ. ಈ ಹುದ್ದೆಗಳಿಗೆ ಕರ್ನಾಟಕ ಎಕ್ಸಾಮಿನೇಷನ್ ಅಥಾರಿಟಿ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ ನಡೆಸುವ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಿದೆ.

ಒಟ್ಟು 76 ಹುದ್ದೆಗಳ ಮಾಹಿತಿ
ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್): 43
ಕಿರಿಯ ಅಭಿಯಂತರರು (ಸಿವಿಲ್): 18
ಪ್ರಥಮ ದರ್ಜೆ ಸಹಾಯಕರು: 5
ದ್ವಿತೀಯ ದರ್ಜೆ ಸಹಾಯಕರು: 10

ಶೈಕ್ಷಣಿಕ ವಿದ್ಯಾರ್ಹತೆ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪದವಿ, ಎಂಜಿನಿಯರಿಂಗ್, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್​  ಸೈನ್ಸ್​ನಲ್ಲಿ ಪದವಿ ಮಾಡಿರಬೇಕು.

KPSC Recruitment 2022: ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ನೇಮಕಾತಿ

ವಯೋಮಿತಿ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 18 ರಿಂದ 35 ವರ್ಷದೊಳಗಿರಬೇಕು.

ಅರ್ಜಿ ಶುಲ್ಕ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. 

ವೇತನ ವಿವರ: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹21400 - ₹83900 ದೊರೆಯಲಿದೆ.

Vijaya Nagara Anganwadi Recruitment 2022: ವಿಜಯನಗರ ಜಿಲ್ಲೆ ಅಂಗನವಾಡಿ ನೇಮಕಾತಿ 

ಸಮ್ಮರ್ ಇಂಟರ್ನ್‌ಶಿಪ್ ಗೆ NIT ನೇಮಕಾತಿ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (National Institute of Technology) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಮಂಗಳೂರಿನ ಸುರತ್ಕಲ್ ನಲ್ಲಿರುವ ಸಂಸ್ಥೆಯಲ್ಲಿ ಸಮ್ಮರ್ ಇಂಟರ್ನ್‌ಶಿಪ್ (Internship) ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ-ಮೇಲ್ ಮೂಲಕ ಅರ್ಜಿ ಸಲ್ಲಿಸಲು ಎಪ್ರಿಲ್ 30  ಕೊನೆಯ ದಿನವಾಗಿದೆ. 2 ತಿಂಗಳು ಇಂಟರ್ನ್‌ಶಿಪ್ ನಡೆಯಲಿದ್ದು,  ಹೆಚ್ಚಿನ ಮಾಹಿತಿಗೆ ಆಸಕ್ತರು https://www.nitk.ac.in/ ಗೆ ಭೇಟಿ ನೀಡಲು ಅಧಿಸೂಚನೆಯಲ್ಲಿ ಕೋರಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ B.Tech, M.E ಇಲ್ಲವೇ  M.Tech, M.Sc ಮಾಡಿರಬೇಕು. 2 ತಿಂಗಳ ಈ ಇಂಟರ್ನ್​ಶಿಪ್​ನಲ್ಲಿ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 5 ಸಾವಿರ ಸ್ಟೆಫಂಡ್​ ದೊರೆಯಲಿದೆ. 

ವಯೋಮಿತಿ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್  ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಹೊಂದಿರಬೇಕು. 

ಆಯ್ಕೆ ಪ್ರಕ್ರಿಯೆ: ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್  ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಸಲ್ಲಿಸುವ ವಿಧಾನ:  ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಸಮ್ಮರ್ ಇಂಟರ್ನ್‌ಶಿಪ್  ಹುದ್ದೆಗೆ  ಅರ್ಜಿ ಸಲ್ಲಿಸಬೇಕಾದ ಈ ಮೇಲ್ ವಿಳಾಸ 
​jideshnitk@gmail.com ಅಥವಾ nitksanthosh@gmail.com

Follow Us:
Download App:
  • android
  • ios