Asianet Suvarna News Asianet Suvarna News

KSP Recruitment 2022: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಹ್ವಾನ

  • ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಹುದ್ದೆಗಳ ಭರ್ತಿಗೆ ಅಧಿಸೂಚನೆ
  • ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
  • ಅರ್ಜಿ ಸಲ್ಲಿಸಲು ಜನವರಿ  15 ಕೊನೆಯ ದಿನ
     
KSP Recruitment 2022 apply for 206 Crime Scene Posts gow
Author
Bengaluru, First Published Dec 18, 2021, 3:59 PM IST

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ( Karnataka State Police  ) ಅಧೀನದಲ್ಲಿ ಬರುವಂತ ನ್ಯಾಯ ವಿಜ್ಞಾನ ಪ್ರಯೋಗಾಲಯ ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕಗಳಲ್ಲಿ ಖಾಲಿ ಇರುವಂತ ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ ( Scene of Crime Officer - SOCO ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಮಡಿವಾಳ, ಬೆಂಗಳೂರು ಮತ್ತು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದದ 206 ಅಪರಾಧ ಸ್ಥಳ ಪರಿಶೀಲನಾ ಅಧಿಕಾರಿ (ಸೀನ್ ಆಫ್ ಕ್ರೈಂ ಆಫೀಸರ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು  ಜನವರಿ  15 ಕೊನೆಯ ದಿನವಾಗಿರುತ್ತದೆ.  ಹೆಚ್ಚಿನ ಮಾಹಿತಿಗೆ https://recruitment.ksp.gov.in/ ಗೆ ಭೇಟಿ ನೀಡಲು ಕೋರಲಾಗಿದೆ.

ವಿದ್ಯಾರ್ಹತೆ: ವಿಜ್ಞಾನ ಪ್ರಯೋಗಾಲಯದಲ್ಲಿನ ಹುದ್ದೆಗೆ ಸೇರ ಬಯಸುವ ಅಭ್ಯರ್ಥಿಗಳು ವಿಶ್ವವಿದ್ಯಾಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪದವಿ ಪಾಸ್‌ ಆಗಿರಬೇಕು ಅಥವಾ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪದವಿ ಪಾಸ್‌ ಹಾಗೂ ಜತೆಗೆ ಮಾನ್ಯತೆ ಪಡೆದ ಸಂಸ್ಥೆಯಿಂದ ವಿಧಿ ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳೊಂದಿಗೆ 01 ವರ್ಷ ಡಿಪ್ಲೊಮ ಪಾಸ್ ಆಗಿರಬೇಕು. ಇಲ್ಲವೇ  ವಿಜ್ಞಾನ ವಿಷಯದಲ್ಲಿ ಕನಿಷ್ಠ ಶೇಕಡ.55 ಅಂಕಗಳೊಂದಿಗೆ ಪದವಿ ಪಾಸ್‌ ಹಾಗೂ ಜತೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಧಿ ವಿಜ್ಞಾನ ವಿಷಯದಲ್ಲಿ ಶೇಕಡ.55 ರಷ್ಟು ಅಂಕಗಳೊಂದಿಗೆ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳು ಸ್ಥಳೀಯ ವೃಂದದ ಹುದ್ದೆ ಹಾಗೂ ಮಿಕ್ಕುಳಿದ ವೃಂದದ ಹುದ್ದೆ ಈ ಎರಡೂ ವೃಂದದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.

KIMS HUBBALLI RECRUITMENT 2022: ಕಿಮ್ಸ್ ನಲ್ಲಿ ಖಾಲಿ ಇರುವ 37 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ವಯೋಮಿತಿ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ದಿನಾಂಕ 15-01-2022 ಕ್ಕೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗಕ್ಕೆ ಗರಿಷ್ಠ35 ವರ್ಷ, ಇತರೆ ಹಿಂದುಳಿದ ವರ್ಗಕ್ಕೆ  ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 - 40 ವರ್ಷ 40 ವರ್ಷ ಮೀರಿರಬಾರದು.

IISC SUICIDE PREVENTION: ಆತ್ಮಹತ್ಯೆ ತಡೆಗೆ ಸೀಲಿಂಗ್​ ಫ್ಯಾನ್​ ತೆರವುಗೊಳಿಸುತ್ತಿದೆ ಭಾರತೀಯ ವಿಜ್ಞಾನ ಸಂಸ್ಥೆ!

ಅರ್ಜಿ ಸಲ್ಲಿಸುವ ವಿಧಾನ: ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://recruitment.ksp.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಹೊರತುಪಡಿಸಿ ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.

ವೇತನ ಮತ್ತು ಅರ್ಜಿ ಶುಲ್ಕ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.37,000 ನಿಂದ ರೂ. 70850ವರೆಗೆ ವೇತನ ಇರಲಿದೆ. ಮತ್ತು ಬೆಂಗಳೂರಿನಲ್ಲಿ ಉದ್ಯೋಗ ಮಾಡುವ ಅವಕಾಶವಿದೆ. ಸಾಮಾನ್ಯ ವರ್ಗ, ಇತರೆ ಹಿಂದುಳಿದ ವರ್ಗಗಳಿಗೆ ರೂ.500. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250. ಅರ್ಜಿ ಶುಲ್ಕ ವಿಧಿಸಲಾಗಿದೆ. ಈ ಮೇಲಿನ ನಿಗದಿತ ನಗದು / ಆನ್‌ಲೈನ್‌ ರೂಪದಲ್ಲಿ ಸ್ಥಳೀಯ ಅಂಚೆ ಕಛೇರಿಗಳಲ್ಲಿ ಅಥವಾ ಹೆಚ್‌ಡಿಎಫ್‌ಸಿ ಬ್ಯಾಂಕಿನ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ ಅಭ್ಯರ್ಥಿ ಪ್ರತಿ ಇಟ್ಟುಕೊಂಡಿರತಕ್ಕದ್ದು.
 

Follow Us:
Download App:
  • android
  • ios