Asianet Suvarna News Asianet Suvarna News

ಕೆಎಸ್‌ಆರ್‌ಟಿಸಿ ನೌಕರರ ಅಂತರ ನಿಗಮ ವರ್ಗಾವಣೆ ಪಟ್ಟಿ ಬಿಡುಗಡೆ; ನಿಮ್ಮ ಹೆಸರಿದೆಯಾ ನೋಡಿ..

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದ ನೌಕರರ ವರ್ಗಾವಣೆ ಪಟ್ಟಿಯನ್ನು ಸಾರಿಗೆ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ.

KSRTC employees Inter Corporation Transfer List Released  See if your name is there sat
Author
First Published Jul 6, 2024, 4:35 PM IST | Last Updated Jul 6, 2024, 4:35 PM IST

ಬೆಂಗಳೂರು (ಜು.06): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ (ಕೆಎಸ್‌ಆರ್‌ಟಿಸಿ) ದರ್ಜೆ-3 ಮೇಲ್ವಿಚಾರಕೇತರ ಹಾಗೂ ದರ್ಜೆ-4 ನೌಕರರಾಗಿ ಕೆಲಸ ಮಾಡುತ್ತಿರುವ ನೌಕರರ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆಯನ್ನು ಕಳೆದ ವರ್ಷ ಆರಂಭಿಸಿತ್ತು. ಈಗ ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಕೆ ಮಾಡಿದ್ದವರನ್ನು ವರ್ಗಾವಣೆ ಮಾಡಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. 

ರಾಜ್ಯದಲ್ಲಿ ಅನೇಕ ಸರ್ಕಾರಿ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರು ತಮ್ಮ ಸ್ವಂತ ಜಿಲ್ಲೆಗೆ ವರ್ಗಾವಣೆಯಾಗಿ ಹೋಗಬೇಕು ಎಂದು ವಿವಿಧ ಕಸರತ್ತುಗಳನ್ನು ಮಾಡುತ್ತಿರುತ್ತಾರೆ. ಕೆಲವರು ಕುಟುಂಬದಿಂದ ದೂರವಿದ್ದು, ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಹಲವು ಸರ್ಕಾರಿ ಇಲಾಖಾ ನೌಕರರು ಅಂತರ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಿ ನಿವೃತ್ತಿಯನ್ನು ಹೊಂದಿದವರೂ ಸಾಕಷ್ಟಿದ್ದಾರೆ.

ರಾಜ್ಯದ 384 ಕೆಎಎಸ್ ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿ ಪ್ರಕಟ

ಅದರ ನಡುವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಈಗ ಅಂತರ ನಿಗಮ ವರ್ಗಾವಣೆಗೆ ಅವಕಾಶ ನೀಡಲಾಗಿತ್ತು. ಕೆಸ್‌ಆರ್‌ಟಿಸಿಯ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ ದಿನಾಂಕ: 05-07-2023 ರ ಬೆಳಿಗ್ಗೆ 11:00 ಗಂಟೆಯಿಂದ ಪ್ರಾರಂಭವಾಗಿದ್ದು, ದಿನಾಂಕ:31-12-2023 ರ ಸಂಜೆ 5:30 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು.

ಅಂತರ ನಿಗಮ ವರ್ಗಾವಣೆಗೆ ನೌಕರರಿಗೆ ಆನ್-ಲೈನ್ ಮೂಲಕ www.ksrtc.org/transfer ರಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC) ಮತ್ತು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳ (NEKRTC) ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರಿಗೆ ಅಂತರ ನಿಗಮ ಪರಸ್ಪರ 958 ನೌಕರರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 616 ನೌಕರರು ಅವರ ಕೋರಿಕೆ ಮೇರೆಗೆ ಅಂತರ ನಿಗಮ ಪರಸ್ಪರ ವರ್ಗಾವಣೆಗೊಂಡಿರುತ್ತಾರೆ.

ಪಬ್ಲಿಕ್ ಪ್ಲೇಸ್‌ನಲ್ಲಿ ಕಾಲೇಜು ಪ್ರೇಮಿಗಳ ಖುಲ್ಲಂ ಖುಲ್ಲಾ ಹಗ್ಗಿಂಗ್, ಕಿಸ್ಸಿಂಗ್ ಅಂಡ್ ರೊಮ್ಯಾನ್ಸ್!

ಸದರಿ ಪರಸ್ಪರ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್‌ಸೈಟ್‌ನಲ್ಲಿ ದಿನಾಂಕ:06.07.2024 ರಂದು ಪ್ರಕಟಿಸಲಾಗಿದೆ. ಸದರಿ ಆದೇಶಕ್ಕೆ ದಿನಾಂಕ: 06.07.2024 ರಿಂದ ದಿನಾಂಕ: 10.07.2024 ರ ಸಂಜೆ 5.30 ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ. ನೌಕರರು ಆಕ್ಷೇಪಣೆಗಳನ್ನು ಕಡ್ಡಾಯವಾಗಿ ಸಂಬಂಧಪಟ್ಟ ವಿಭಾಗದ ಆಡಳಿತಾಧಿಕಾರಿಗಳಿಗೆ ಸಲ್ಲಿಸಿ ಸ್ವೀಕೃತಿ ಪಡೆಯತಕ್ಕದ್ದು. ನೌಕರರು ವೈಯಕ್ತಿಕವಾಗಿ ಅಥವಾ ಅಂಚೆಯ ಮೂಲಕ ಕೇಂದ್ರ ಕಛೇರಿಗೆ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

Latest Videos
Follow Us:
Download App:
  • android
  • ios