Asianet Suvarna News Asianet Suvarna News

KUIDFC Recruitment 2022: ರಾಜ್ಯದ ಕೆಯುಐಡಿಎಫ್‌ಸಿಯಲ್ಲಿ ಖಾಲಿ ಇರುವ 30 ವಿವಿಧ ಹುದ್ದೆಗೆ ಅರ್ಜಿ ಸಲ್ಲಿಸಿ

  • KUIDFCಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
  • ಒಟ್ಟು 30 ವಿವಿಧ ಹುದ್ದೆಗಳು ಖಾಲಿ 
  • ಡಿಸೆಂಬರ್ 31 ಅರ್ಜಿ ಸಲ್ಲಿಸಲು ಕೊನೆ ದಿನ
KUIDFC Recruitment 2022 Apply  for Executive Engineer and more posts before December 31st gow
Author
Bengaluru, First Published Dec 19, 2021, 8:31 PM IST

ಬೆಂಗಳೂರು(ಡಿ.19): ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತದಲ್ಲಿ (Karnataka Urban Infrastructure Development and Finance Corporation -KUIDFC) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 30 ವಿವಿಧ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.  ಹೆಚ್ಚಿನ ಮಾಹಿತಿಗೆ http://www.kuidfc.com/ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: KUIDFCಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ 12ನೇ ತರಗತಿ, ಪದವಿ, ಬಿ.ಇ, ಬಿ.ಕಾಂ, ಬಿಬಿಎಂ, ಪಿಯುಸಿ, ಎಂಬಿಎ, ವಿದ್ಯಾರ್ಹತೆಯನ್ನು ಹೊಂದಿರಬೇಕು. ಅಭ್ಯರ್ಥಿಗಳು ಕನಿಷ್ಟ 25 ರಿಂದ ಗರಿಷ್ಟ 62 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯಯನ್ನು ನೀಡಲಾಗಿದೆ.

ವೇತನ ವಿವರ: ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ  ಆಯ್ಕೆಯಾದವರಿಗೆ  ಹುದ್ದೆಗೆ ಅನುಸಾರವಾಗಿ ವೇತನ ನಿಗದಿಯಾಗಿದೆ.

KIMS KOPPAL RECRUITMENT 2022: ಕೊಪ್ಪಳದ ಕಿಮ್ಸ್ ನಲ್ಲಿ 17 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ಅಧೀಕ್ಷಕರ ಅಭಿಯಂತರರು, ಪ್ರಧಾನ ವ್ಯವಸ್ಥಾಪಕರು - 1,08,852/-ರೂ
ಕಾರ್ಯನಿರ್ವಾಹಕ ಅಭಿಯಂತರರು, ಉಪ ಪ್ರಧಾನ ವ್ಯವಸ್ಥಾಪಕರು - 83,244/-ರೂ
ಸಹಾಯಕ ಪ್ರಧಾನ ವ್ಯವಸ್ಥಾಪಕರು - 77,206/-ರೂ
ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಪ್ರಧಾನ ವ್ಯವಸ್ಥಾಪಕರು -77,206/-ರೂ
ಸಾರ್ವಜನಿಕ ಸಂಪರ್ಕ ಅಧಿಕಾರಿ, ವ್ಯವಸ್ಥಾಪಕರು - 66,512/-ರೂ
ಸಹಾಯಕ ಅಭಿಯಂತರರು, ಉಪ ವ್ಯವಸ್ಥಾಪಕರು - 63,311/-ರೂ
ಲೆಕ್ಕಪತ್ರ ಅಧೀಕ್ಷಕರು, ಸಹಾಯಕ ವ್ಯವಸ್ಥಾಪಕರು - 60,110/-ರೂ
ಲೆಕ್ಕಿಗ, ಹಿರಿಯ ಕಾರ್ಯನಿರ್ವಾಹಕ ಸಹಾಯಕರು - 55,645/-ರೂ
ಲೆಕ್ಕ ಸಹಾಯಕರು, ಕಾರ್ಯನಿರ್ವಾಹಕ ಸಹಾಯಕರು - 40,731/-ರೂ
ಡಿಇಒ/ಕಂಪ್ಯೂಟರ್ ಆಪರೇಟರ್, ಕಿರಿಯ ಕಾರ್ಯನಿರ್ವಾಹಕ ಸಹಾಯಕರು - 31,637/-ರೂ ವೇತನ ನಿಗದಿಯಾಗಿದೆ.

BMRCL Recruitment 2022: ನಮ್ಮ ಮೆಟ್ರೋದಲ್ಲಿ 144 ಇಂಜಿನಿಯರ್ ಹುದ್ದೆ ಭರ್ತಿಗೆ ಅಧಿಸೂಚನೆ

ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ವಿದ್ಯಾರ್ಹತೆ ಮೆರಿಟ್, ಅನುಭವದ ಆಧಾರದ ಮೇಲೆ ಮೌಖಿಕ ಸಂದರ್ಶನ ನಡೆಸಿ  ಆಯ್ಕೆ ಮಾಡಲಾಗುತ್ತದೆ.

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ. ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ.  ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

Indian Air Force recruitment 2022: ವಾಯುಸೇನೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ

ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ( Rural Development and Panchayat Raj ) ಮಹಾತ್ಮಾಗಾಂಧಿ ರಾಷ್ಟ್ರೀಯ ಯೋಜನೆ (MGNREGA) ನರೇಗಾದ ಸಾಮಾಜಿಕ ಪರಿಶೋಧನಾ ಸಂಘದಲ್ಲಿ ಖಾಲಿ ಇರುವ 35 ಜಿಲ್ಲಾ ಮತ್ತು ತಾಲೂಕು ಸಾಮಾಜಿಕ ಪರಿಶೋಧನಾ ಸಂಪನ್ಮೂಲ ವ್ಯಕ್ತಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಇಲಾಖೆಯ ಅಧಿಕೃತ ವೆಬ್‌ತಾಣಕ್ಕೆ  https://rdpr.karnataka.gov.in/ ಭೇಟಿ ನೀಡಿ ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಕೇಳಲಾಗಿರುವ ಅಗತ್ಯ ಮಾಹಿತಿಯನ್ನು ತುಂಬಿ. ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಕಚೇರಿಗೆ ಅರ್ಜಿಯನ್ನು ಜನವರಿ 5,2022ರೊಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಅರ್ಜಿಯನ್ನು ತಲುಪಿಸುವಾಗ ಲಕೋಟೆಯ ಮೇಲೆ ಹುದ್ದೆಯ ಹೆಸರನ್ನು ಕಡ್ಡಾಯವಾಗಿ ಬರೆದಿರಬೇಕು.

Follow Us:
Download App:
  • android
  • ios