Asianet Suvarna News Asianet Suvarna News

KVAFSU Bidar Recruitment 2022: ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಇಲ್ಲಿ 6 ಸಹಾಯಕ ಪ್ರಾಧ್ಯಾಪಕ  ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಜನವರಿ 28ರಂದು ಬೆಳಿಗ್ಗೆ 10 ಗಂಟೆಗೆ ನೇರ ಸಂದರ್ಶನ ನಡೆಯಲಿದೆ.

KVAFSU Recruitment 2022 notification for assistant professor  gow
Author
Bengaluru, First Published Jan 26, 2022, 8:11 PM IST

ಬೆಂಗಳೂರು(ಜ.26): ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (Karnataka Veterinary, Animal and Fisheries Sciences University), ಬೀದರ್ ಇಲ್ಲಿ 6 ಸಹಾಯಕ ಪ್ರಾಧ್ಯಾಪಕ (assistant professor) ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 28,2022ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ http://kvafsu.edu.in/index.html ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

ಶೈಕ್ಷಣಿಕ ವಿದ್ಯಾಭ್ಯಾಸ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಎಂಬಿಎಸ್ಸಿ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.

Karnataka Bank Recruitment 2022: ಮಾಜಿ ಯೋಧರಿಗೆ ಅವಕಾಶ, ಮಂಗಳೂರಿನಲ್ಲಿ ಉದ್ಯೋಗ

ವೇತನ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ 57,600/-ರೂಗಳ ವರೆಗೆ ವೇತನ ದೊರೆಯಲಿದೆ. 

ಆಯ್ಕೆ ಪ್ರಕ್ರಿಯೆ: ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನ ನಡೆಯುವ ಸ್ಥಳ:
ಡೀನ್ ರವರ ಕಾರ್ಯಾಲಯ, ಪಶುವೈದ್ಯಕೀಯ ಮಹಾವಿದ್ಯಾಲಯ, ಬೀದರ್

NLC Apprentice Recruitment 2022: 500 ಕ್ಕೂ ಹೆಚ್ಚು ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Delhi University 635 ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ: ದೆಹಲಿ ವಿಶ್ವವಿದ್ಯಾಲಯ (Delhi University) ಪ್ರೊಫೆಸರ್ (Professor) ಮತ್ತು ಅಸೋಸಿಯೇಟ್‌ ಪ್ರೊಫೆಸರ್ ( Associate Professor) ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಒಟ್ಟು 635 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಫೆಬ್ರವರಿ 07  ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು ದೆಹಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ http://www.du.ac.in/ ಗೆ ಭೇಟಿ ನೀಡಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ದೆಹಲಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ  ಪ್ರೊಫೆಸರ್ ಮತ್ತು ಅಸೋಸಿಯೇಟ್‌ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪಿಹೆಚ್‌ಡಿ ಜತೆಗೆ ನೆಟ್‌, ಎಸ್‌ಎಲ್‌ಇಟಿ ಅರ್ಹತೆ ಪಡೆದಿರಬೇಕು. ಹಾಗೂ ಕನಿಷ್ಠ ಕಾರ್ಯಾನುಭವವನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ದೆಹಲಿ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ  ಪ್ರೊಫೆಸರ್ ಮತ್ತು ಅಸೋಸಿಯೇಟ್‌ ಪ್ರೊಫೆಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೊದಲು ಶಾರ್ಟ್ ಲಿಸ್ಟ್ ಮಾಡಲಾಗುತ್ತದೆ. ಬಳಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸು ವಿಧಾನಗಳು
- ದೆಹಲಿ ವಿಶ್ವವಿದ್ಯಾಲಯದ ವೆಬ್‌ಸೈಟ್‌ du.ac.in ಗೆ ಭೇಟಿ ನೀಡಿ.
- ಓಪನ್‌ ಆದ ಪೇಜ್‌ನಲ್ಲಿ 'Latest @DU' ಟ್ಯಾಬ್‌ ಸೆಲೆಕ್ಟ್‌ ಮಾಡಿ.
- ಸ್ಕ್ರಾಲ್‌ ಡೌನ್‌ ಮಾಡಿ ಜನವರಿ 17ನೇ ತಾರೀಖಿನ ನೋಟಿಫಿಕೇಶನ್‌ಗಳು ಇರುತ್ತವೆ.
- ನಿಮ್ಮ ಆಸಕ್ತ ಹುದ್ದೆಯ ನೋಟಿಫಿಕೇಶನ್‌ ಲಿಂಕ್‌ ಕ್ಲಿಕ್ ಮಾಡಿ.
- ನೋಟಿಫಿಕೇಶನ್‌ ಓದಿಕೊಂಡು, ನಂತರ ' Apply Online' ಎಂದಿರುವಲ್ಲಿ ಕ್ಲಿಕ್ ಮಾಡಿ.
- ಅಗತ್ಯ ಮಾಹಿತಿಗಳನ್ನು ಎಂಟರ್ ಮಾಡಿ, ಅರ್ಜಿ ಪೂರ್ಣಗೊಳಿಸಿ.
- ಅರ್ಜಿ ಶುಲ್ಕ ಪಾವತಿಸಿ.
- ನಂತರ ಮುಂದಿನ ರೆಫರೆನ್ಸ್‌ಗಾಗಿ ಅಪ್ಲಿಕೇಶನ್‌ ಪ್ರಿಂಟ್‌ ತೆಗೆದುಕೊಳ್ಳಿ.

 

Follow Us:
Download App:
  • android
  • ios