ಮರಾಠಿ ಶಿಕ್ಷಕರ ನೇಮಕ ವಿರುದ್ಧ ಮಹಾರಾಷ್ಟ್ರಕ್ಕೆ ಪತ್ರ: ಸಚಿವ ಶಿವರಾಜ ತಂಗಡಗಿ

ಮಹಾರಾಷ್ಟ್ರದ ಶಿಕ್ಷಣ ಸಚಿವ‌ರಿಗೆ ಪತ್ರದ ಮೂಲಕ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದು ಹೇಳಿದರು. ಕರ್ನಾಟಕದ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಬಗ್ಗೆ ಬೆಳಗಾವಿಯ ಕನ್ನಡ ಹೋರಾಟಗಾರ ಅಶೋಕ್‌ ಚಂದರಗಿ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. 

Letter to Maharashtra against Recruitment of Marathi Teachers Says Minister Shivaraj Tangadagi grg

ಬೆಂಗಳೂರು(ಜೂ.22):  ಗಡಿಭಾಗದ ಮಹಾರಾಷ್ಟ್ರದ ಜತ್‌ ಮತ್ತು ಸೊಲ್ಲಾಪುರ ಜಿಲ್ಲೆಗಳಲ್ಲಿರುವ ಕನ್ನಡ ಶಾಲೆಗಳಿಗೆ 24 ಮರಾಠಿ ಶಿಕ್ಷಕರನ್ನು ಮಹಾರಾಷ್ಟ್ರ ಸರ್ಕಾರದಿಂದ ನೇಮಕ ಮಾಡಲಾಗಿದೆ. ಈ ಕುರಿತು ಅಲ್ಲಿನ ಸರ್ಕಾರಕ್ಕೆ ಪತ್ರ ಬರೆದು ಆ ಶಾಲೆಗಳಿಗೆ ಕನ್ನಡ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಮಹಾರಾಷ್ಟ್ರದ ಶಿಕ್ಷಣ ಸಚಿವ‌ರಿಗೆ ಪತ್ರದ ಮೂಲಕ ವಾಸ್ತವ ಸ್ಥಿತಿ ಬಗ್ಗೆ ತಿಳಿಸಲಾಗಿದೆ ಎಂದು ಹೇಳಿದರು. ಕರ್ನಾಟಕದ ಗಡಿ ಭಾಗದಲ್ಲಿರುವ ಕನ್ನಡ ಶಾಲೆಗಳಿಗೆ ಮರಾಠಿ ಶಿಕ್ಷಕರನ್ನು ನೇಮಿಸುತ್ತಿರುವ ಬಗ್ಗೆ ಬೆಳಗಾವಿಯ ಕನ್ನಡ ಹೋರಾಟಗಾರ ಅಶೋಕ್‌ ಚಂದರಗಿ ಅವರು ಮುಖ್ಯಮಂತ್ರಿ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದರು.

ಸರ್ಕಾರದಿಂದ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಕ್ರಿಯಾಯೋಜನೆಗೆ ಸೂಚನೆ :

ಅಕಾಡೆಮಿಗಳಿಗೆ ಕ್ರಿಯಾಯೋಜನೆ ಸಿದ್ಧಪಡಿಸಲು ಸೂಚಿಸಲಾಗಿದ್ದು, ಅಗತ್ಯವಿರುವ ಅನುದಾನ ನೀಡಲಾಗುವುದು ಎಂದು ಸಚಿವರು ಹೇಳಿದರು. ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ ಅಕಾಡೆಮಿ, ಪ್ರಾಧಿಕಾರದ ನೂತನ ಅಧ್ಯಕ್ಷರು ಮತ್ತು ಸದಸ್ಯರ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಇದೀಗ ಎಲ್ಲರೊಂದಿಗೆ ಸಭೆ ನಡೆಸಿದ್ದೇನೆ. ಅಕಾಡೆಮಿಗಳು ಹಾಗೂ ಪ್ರಾಧಿಕಾರಗಳು ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಾಮಾಜಿಕ ನ್ಯಾಯ ಪಾಲನೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಮುಕ್ತವಾಗಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.

ಸಭೆಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಚನ್ನಪ್ಪ ಕಟ್ಟಿ, ನಾಟಕ‌ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜ್ ಮೂರ್ತಿ,‌ ಇಲಾಖಾ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಡಾ.ಧರಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Latest Videos
Follow Us:
Download App:
  • android
  • ios