Mangalore University Recruitment 2022: ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಆಸಕ್ತರು ಫೆಬ್ರವರಿ 4ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಕೋರಲಾಗಿದೆ.
ಬೆಂಗಳೂರು(ಜ.24): ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಿದೆ. ಲ್ಯಾಬ್, ಲೈಬ್ರರಿ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ 4ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಆಸಕ್ತರು mangaloreuniversity.ac.in ಗೆ ಭೇಟಿ ನೀಡಬಹುದು.
ಹುದ್ದೆಯ ಮಾಹಿತಿ:
ಲ್ಯಾಬ್ ಅಸಿಸ್ಟೆಂಟ್
ಲೈಬ್ರರಿ ಅಸಿಸ್ಟೆಂಟ್
ಎ/ಸಿ ಮೆಕ್ಯಾನಿಕ್
ಪ್ಲಂಬರ್
ಶೈಕ್ಷಣಿಕ ವಿದ್ಯಾರ್ಹತೆ: ಮಂಗಳೂರು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ವಿದ್ಯಾರ್ಥಿಗಳು ಆಯಾಯ ಹುದ್ದೆಗೆ ಅನುಸಾರವಾಗಿ ವಿದ್ಯಾರ್ಹತೆ ಹೊಂದಿರಬೇಕು
ಲ್ಯಾಬ್ ಅಸಿಸ್ಟೆಂಟ್- ಬಿಎಸ್ಸಿ ಪದವಿ ಮಾಡಿರಬೇಕು
ಲೈಬ್ರರಿ ಅಸಿಸ್ಟೆಂಟ್- ಪಿಯುಸಿ, ಡಿಪ್ಲೋಮಾ ಉತ್ತೀರ್ಣರಾಗಿರಬೇಕು.
ಎ/ಸಿ ಮೆಕ್ಯಾನಿಕ್- ಪಿಯುಸಿ ಪಾಸಾಗಿರಬೇಕು.
ಪ್ಲಂಬರ್- ಎಸ್ಎಸ್ಎಲ್ಸಿ ವಿದ್ಯಾಭ್ಯಾಸ ಹೊಂದಿರಬೇಕು.
Shivamogga Karnataka Sangha ಕರ್ನಾಟಕ ಸಂಘದಿಂದ ಪುಸ್ತಕ ಬಹುಮಾನಕ್ಕೆ ಕೃತಿಗಳ ಆಹ್ವಾನ
ವಯೋಮಿತಿ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 38 ವರ್ಷ ಇರಬೇಕು. ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ: ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಸಂದರ್ಶನ ನಡೆಯುವ ಸ್ಥಳ:
ಸಿಂಡಿಕೇಟ್ ಹಾಲ್, ಮಂಗಳೂರು ವಿಶ್ವವಿದ್ಯಾನಿಲಯ
ಮಂಗಳಗಂಗೋತ್ರಿ, ಮಂಗಳೂರು
ಕರ್ನಾಟಕ
ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ: ಭಾರತೀಯ ವಿಜ್ಞಾನ ಸಂಸ್ಥೆ(Indian Institute of Science)ಬೆಂಗಳೂರಿನಲ್ಲಿ ಖಾಲಿ ಇರುವ 1 ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ (Project Engineer and Estate Officer) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಜನವರಿ 13ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಲು ಫೆಬ್ರವರಿ 4 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಭಾರತೀಯ ವಿಜ್ಞಾನ ಸಂಸ್ಥೆಯ ಅಧಿಕೃತ ವೆಬ್ಸೈಟ್ www.iisc.ac.in ಗೆ ಭೇಟಿ ನೀಡಲು ಕೋರಲಾಗಿದೆ.
ಶೈಕ್ಷಣಿಕ ವಿದ್ಯಾರ್ಹತೆ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ನಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್ ಪೂರ್ಣಗೊಳಿಸಿರಬೇಕು. ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ 15 ವರ್ಷ ಅನುಭವ ಹೊಂದಿರಬೇಕು.
ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 4, 2022ಕ್ಕೆ 55 ವರ್ಷ ಮೀರಿರಬಾರದು.
ಆಯ್ಕೆ ಪ್ರಕ್ರಿಯೆ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ದಾಖಲಾತಿ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ವೇತನ ವಿವರ: ಭಾರತೀಯ ವಿಜ್ಞಾನ ಸಂಸ್ಥೆ-ಬೆಂಗಳೂರು ಖಾಲಿ ಇರುವ ಪ್ರಾಜೆಕ್ಟ್ ಎಂಜಿನಿಯರ್ ಮತ್ತು ಎಸ್ಟೇಟ್ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 1,23,100 ರಿಂದ 2,15,900 ರೂ ವೇತನ ಸಿಗಲಿದೆ.