NMPT Recruitment 2022: ನವ ಮಂಗಳೂರು ಬಂದರಿನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ನವ ಮಂಗಳೂರು ಬಂದರು ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಲು 30 ಡಿಸೆಂಬರ್ ಕೊನೆಯ ದಿನವಾಗಿದೆ.
ಬೆಂಗಳೂರು (ಡಿ.4): ನವ ಮಂಗಳೂರು ಬಂದರು ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ನ್ಯೂ ಮಂಗಳೂರು ಪೋರ್ಟ್ ಟ್ರಸ್ಟ್ ಅಧಿಕಾರಿಗಳು ಇತ್ತೀಚೆಗೆ ಆಫ್‌ಲೈನ್ ಮೋಡ್ ಮೂಲಕ 2 ಪೋಸ್ಟ್‌ಗಳನ್ನು ಭರ್ತಿ ಮಾಡಲು ಉದ್ಯೋಗ ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ. ಈ ಖಾಲಿ ಹುದ್ದೆಗೆ ಕೆಳಗೆ ನಮೂದಿಸಲಾದ ವಿವರಗಳು ಮತ್ತು ಅರ್ಹತಾ ಮಾನದಂಡಗಳನ್ನು ಓದಲು ಅಭ್ಯರ್ಥಿಗಳಿಗೆ ಸೂಚಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಹತೆಯನ್ನು ಅಂದರೆ ಶೈಕ್ಷಣಿಕ ಅರ್ಹತೆ, ವಯಸ್ಸಿನ ಮಿತಿ, ಅನುಭವ ಮತ್ತು ಇತ್ಯಾದಿಗಳನ್ನು ಪರಿಶೀಲಿಸಬೇಕು. ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ನೇರವಾಗಿ 30 ಡಿಸೆಂಬರ್ 2022 ರ ಮೊದಲು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಆಸಕ್ತರು ಅಧಿಕೃತ ವೆಬ್‌ತಾಣ https://newmangaloreport.gov.in/ ಗೆ ಭೇಟಿ ನೀಡಬಹುದು.
ಶೈಕ್ಷಣಿಕ ವಿದ್ಯಾಭ್ಯಾಸ: ನವ ಮಂಗಳೂರು ಬಂದರಿನಲ್ಲಿ ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಹುದ್ದೆಗೆ ಅನುಸಾರವಾಗಿ ಪದವಿ ವಿದ್ಯಾರ್ಹತೆ ಪಡೆದಿರಬೇಕು.
ವೇತನ ವಿವರ: ನವ ಮಂಗಳೂರು ಬಂದರಿನಲ್ಲಿ ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 40000 ರಿಂದ 140000 ರೂ ತನಕ ವೇತನ ದೊರೆಯಲಿದೆ.
ಆಯ್ಕೆ ಪ್ರಕ್ರಿಯೆ: ನವ ಮಂಗಳೂರು ಬಂದರಿನಲ್ಲಿ ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಅರ್ಜಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆ, ವಾಕಿನ್ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅನುಭವ: ನವ ಮಂಗಳೂರು ಬಂದರಿನಲ್ಲಿ ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 3 ರಿಂದ 10 ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿ ಶುಲ್ಕ: ನವ ಮಂಗಳೂರು ಬಂದರಿನಲ್ಲಿ ಖಾಲಿ ಇರುವ 2 ಸಹಾಯಕ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.
ಅರ್ಜಿ ಸಲ್ಲಿಸಬೇಕಾದ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವ ಮಂಗಳೂರು ಬಂದರು, ಪ್ರಾಧಿಕಾರ ಪಣಂಬೂರು ಮಂಗಳೂರು -575010 ಈ ವಿಳಾಸಕ್ಕೆ ಕಳುಹಿಸಬೇಕು.
ICTS Recruitment 2023: ಬೆಂಗಳೂರಿನ ಸೈದ್ಧಾಂತಿಕ ವಿಜ್ಞಾನಗಳ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗೆ ನೇಮಕಾತಿ
ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆ ನೇಮಕಾತಿ: ಇಷ್ಟು ಮಾತ್ರವಲ್ಲದೆ ನವ ಮಂಗಳೂರು ಬಂದರಿನಲ್ಲಿ 1 ಉಪ ಮುಖ್ಯ ವಿಜಿಲೆನ್ಸ್ ಅಧಿಕಾರಿ ಹುದ್ದೆ ಕೂಡ ಖಾಲಿ ಇದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಯಾವುದೇ ವಿಭಾಗದಲ್ಲಿ ಪದವಿ ವಿದ್ಯಾಭ್ಯಾಸ ಪಡೆದಿರಬೇಕು. 10 ರಿಂದ 15 ವರ್ಷಗಳ ಅನುಭವ ಹೊಂದಿರಬೇಕು. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 28 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳೀಗೆ 60000 ರಿಂದ180000 ರೂ ತನಕ ವೇತನ ದೊರೆಯಲಿದೆ.
NLC RECRUITMENT 2022: ನೇವೇಲಿ ಲಿಗ್ನೈಟ್ ಕಾರ್ಪೊರೇಷನ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ನಿರ್ದೇಶಕರ ಹುದ್ದೆಗಳಿಗೆ ನೇಮಕಾತಿ: ಇದರೊಂದಿಗೆ ನವ ಮಂಗಳೂರು ಬಂದರಿನಲ್ಲಿ ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆ ಮತ್ತು ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಕೂಡ ಖಾಲಿ ಇದ್ದು, ಬಿಟೆಕ್ ವಿದ್ಯಾರ್ಹತೆ ಪಡೆದಿರುವ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 57 ವರ್ಷ ಮೀರಿರಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 75 ಸಾವಿರದಿಂದ 3,20,000 ವರೆಗೆ ವೇತನ ದೊರೆಯಲಿದೆ.