4055 ಪಿಯು ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರದಿಂದ ಸೂಚನೆ

ತಿಂಗಳಿಗೆ 12 ಸಾವಿರ ರು. ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಳೆದ ವರ್ಷ ನೇಮಕದ ಸಂದರ್ಭದಲ್ಲಿ ನಿಯಮಗಳ ಪಾಲನೆಯಾಗಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದ್ದರಿಂದ ಈ ಬಾರಿ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. 

Notice from Government for Recruitment of 4055 PU Guest Lecturers in Karnataka grg

ಬೆಂಗಳೂರು(ಜೂ.04):  ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿಗೆ 4,055 ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಪಿಯು ಇಲಾಖೆ, ಕಾಲೇಜುಗಳಿಗೆ ಸೂಚಿಸಿದೆ.

ಬಡ್ತಿ, ನಿಧನ, ವಯೋನಿವೃತ್ತಿ, ಖಾಲಿ ಇರುವ ಹುದ್ದೆ ಸೇರಿದಂತೆ ಮತ್ತಿತರ ಕಾರಣಗಳಿಂದಾಗಿ ಖಾಲಿ ಇರುವ ಸ್ಥಾನಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಾರ್ಯಭಾರ ಹೆಚ್ಚಾಗುವ ಹಿನ್ನೆಲೆಯಲ್ಲಿ ಒಟ್ಟಾರೆ 4055 ಹುದ್ದೆ ನೇಮಕ ಮಾಡಿಕೊಳ್ಳಬಹುದು ಎಂದು ಇಲಾಖೆಯು ಕಾಲೇಜುಗಳು, ಸಂಬಂಧಪಟ್ಟ ಜಿಲ್ಲಾ ಉಪನಿರ್ದೇಶಕರಿಗೆ ತಿಳಿಸಿದೆ.

ಸರ್ಕಾರದ ಯುವನಿಧಿ ಯೋಜನೆ ಮಾನದಂಡ ಪ್ರಕಟ: ಯಾರಿಗೆಲ್ಲ 3 ಸಾವಿರ ರೂ. ಸಿಗುತ್ತೆ

ತಿಂಗಳಿಗೆ 12 ಸಾವಿರ ರು. ವೇತನದಂತೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು. ಕಳೆದ ವರ್ಷ ನೇಮಕದ ಸಂದರ್ಭದಲ್ಲಿ ನಿಯಮಗಳ ಪಾಲನೆಯಾಗಿಲ್ಲ ಎಂಬ ಆರೋಪ ಕೇಳಿಬಂದಿತ್ತು. ಆದ್ದರಿಂದ ಈ ಬಾರಿ ನಿಯಮ ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

Latest Videos
Follow Us:
Download App:
  • android
  • ios