ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತರ ಕಚೇರಿ ಪ್ರಕಟಣೆ ಹೊರಡಿಸಿದೆ.
ಬೆಂಗಳುರು, (ಸೆ.12): ಇದೇ ಸೆ.20 ರಂದು ಪೊಲೀಸ್ ಕಾನ್ ಸ್ಟೇಬಲ್ ಹುದ್ದೆಗೆ ನಗರದ 69 ಪರೀಕ್ಷಾ ಕೇಂದ್ರದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಿವಿಲ್ ಪೊಲೀಸ್ ಕಾನ್‍ಟೇಬಲ್ ಪುರುಷ ಮತ್ತು ಮಹಿಳಾ ಹಾಗೂ ಸಿವಿಲ್ ಪೊಲೀಸ್ ಕಾನ್‍ಸ್ಟೆಬಲ್ ಪುರುಷ ಮತ್ತು ಮಹಿಳಾ)( ಕಲ್ಯಾಣ ಕರ್ನಾಟಕ) ಹುದ್ದೆಗಳ ಭರ್ತಿಯ ಸಂಬಂಧ ಸುಮಾರು 37,640 ಅಭ್ಯರ್ಥಿಗಳಿಗೆ ಸೆ.20ರಂದು ಪರೀಕ್ಷೆ ನಡೆಯಲಿದೆ.
ಅಂಚೆ ಇಲಾಖೆಯಲ್ಲಿ ನೇಮಕಾತಿ: ವಿದ್ಯಾರ್ಹತೆ 10ನೇ ತರಗತಿ
ನಗರದ 69 ಪರೀಕ್ಷಾ ಕೇಂದ್ರದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 12.30ರವರೆಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಆಯುಕ್ತರ ಕಚೇರಿ ಪಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.ksp.gov.in ವೆಬ್ ಸೈಟ್ ವೀಕ್ಷಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಕರೆಪತ್ರವನ್ನು ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬಹುದಾಗಿದೆ.
