Asianet Suvarna News Asianet Suvarna News

ಪಿಎಸ್‌ಐ ಪರೀಕ್ಷೆ ಮತ್ತೆ ಮುಂದೂಡಿಕೆ: ಅ.3 ರಂದು ನಡೆಸಲು ನಿರ್ಧಾರ

ಸೆಪ್ಟೆಂಬರ್ 28 ರಂದು ನಡೆಯಬೇಕಿದ್ದ ಪಿಎಸ್‌ಐ ಪರೀಕ್ಷೆಯನ್ನು ಅಕ್ಟೋಬರ್ 3 ರಂದು ನಡೆಸಲು ತೀರ್ಮಾನಿಸಿ ಮುಂದೂಡಲಾಗಿದೆ. ಈ ದಿನ ಯುಪಿಎಸ್‌ಸಿ ಇಂಗ್ಲೀಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

PSI exam postponed again on october third says Minister Parameshwara sat
Author
First Published Sep 13, 2024, 9:35 PM IST | Last Updated Sep 13, 2024, 9:35 PM IST

ಬೆಂಗಳೂರು (ಸೆ.13): ರಾಜ್ಯದಲ್ಲಿ ಸೆ.22ರಂದು ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಸೆ.28ಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಆದರೆ, ಈ ದಿನವೂ ಬೇರೆ ಪರೀಕ್ಷೆ ಇರುವುದಿಂದ ಮತ್ತೆ ಮುಂದೂಡಿಗೆ ಮಾಡಿ ಅ.3ರಂದು ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

ರಾಜ್ಯದಲ್ಲಿ ಖಾಲಿ ಇರುವ 402 ಪಿಎಸ್ಐ ಹುದ್ದೆಗಳಿಗೆ ಸೆ.22ರಂದು ನಡೆಸಲು ನಿಗಧಿಯಾಗಿದ್ದ ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯ ಕೇಳಿ ಬಂದಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅವರೊಂದಿಗೆ ಚರ್ಚಿಸಿ, ಸೆ.28ರಂದು ನಡೆಸಲು ತೀರ್ಮಾನಿಸಲಾಗಿತ್ತು. ಆ ದಿನ ಯುಪಿಎಸ್‌ಸಿ ಇಂಗ್ಲೀಷ್ ಕಡ್ಡಾಯ ಪರೀಕ್ಷೆ ಇರುವುದರಿಂದ ಅಕ್ಟೋಬರ್ 3ರಂದು ನಡೆಸಲು ನಿರ್ಧರಿಸಲಾಗಿದೆ. ಕೆಇಎ ಅವರು ಅಧಿಕೃತವಾಗಿ ಪ್ರಕಟಣೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮುಸ್ಲಿಂ ಮತಾಂಧರ ಓಲೈಸುವ ಕಾಂಗ್ರೆಸ್ ಸರ್ಕಾರ ಹಿಂದೂಗಳ ಪ್ರಶ್ನೆಗಳಿಗೆ ಉತ್ತರಿಸಲಿ: ಆರ್. ಅಶೋಕ್

ಸರ್ಕಾರದ ಮತ್ತು ತನಿಖಾ ಸಂಸ್ಥೆಗಳ ಹಂತದಲ್ಲಿ ಚಾಲ್ತಿಯಲ್ಲಿರುವ ವಿವಿಧ ಹಗರಣಗಳ ತನಿಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಇಲಾಖಾವಾರು ಪರಿಶೀಲನೆ ನಡೆಸಲಾಗಿದೆ. ಇದು ಮೊದಲ ಸಭೆಯಾಗಿರುವುದರಿಂದ ತೀರ್ಮಾನಕ್ಕೆ ಬಂದಿಲ್ಲ. ಎಲ್ಲ ಪ್ರಕರಣಗಳನ್ನು ಪರಿಶೀಲಿಸಿದ್ದೇವೆ. ಹೊಸದಾಗಿ ತನಿಖೆ ಆಗಬೇಕಿರುವುದನ್ನು ಗಮನಿಸಿದ್ದೇವೆ. ಎರಡು ತಿಂಗಳೊಳಗೆ ಪೂರ್ಣಗೊಳಿಸಿ ಸಚಿವ ಸಂಪುಟಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಮಾಹಿತಿ ನೀಡಿದರು.

ವಿರೋಧ ಪಕ್ಷದ ನಾಯಕರ ಹೇಳಿಕೆಗಳಿಗೆ ನಾನು ಏನನ್ನು ಹೇಳಲು ಹೋಗುವುದಿಲ್ಲ. ಅವರು ಏನೇ ಹೇಳಿದರು ಕೆರಳುವುದಿಲ್ಲ. ಸರ್ಕಾರದಲ್ಲಿ ನನಗೆ ಏನು ಜವಾಬ್ದಾರಿ ಕೊಟ್ಟಿದ್ದಾರೆ, ಅದನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತಿದ್ದೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿರಬೇಕು. ಆ‌ ಕೆಲಸವನ್ನು ಮಾಡುತ್ತಿದ್ದೇನೆ. ನನಗೆ ಇದೆಲ್ಲ‌ ಹೊಸತೇನಲ್ಲ.  ಮೂರು ಬಾರಿ ಗೃಹ ಸಚಿವನಾಗಿ‌ ಕೆಲಸ‌ ಮಾಡಿದ್ದೇನೆ. ನನ್ನ ಸಾಮಾರ್ಥ್ಯ ರಾಜ್ಯದ ಜನತೆಗೆ ಗೊತ್ತಿದೆ. ನಾನು ಯಾವ ಇಲಾಖೆಯನ್ನು ನಿಭಾಯಿಸಿದ್ದೇನೆ, ಎಲ್ಲ‌ ಸಂದರ್ಭದಲ್ಲಿ ಕೂಡ ನನ್ನ ಸಾಮರ್ಥ್ಯ ಆಯಾ ಇಲಾಖೆಯವರಿಗೆ ಗೊತ್ತಾಗಿದೆ ಎಂದು ಹೇಳಿದರು.

ಚಮಚದಲ್ಲಿ ಮುದ್ದೆ ತಿಂದಿದ್ದ ನಿವೇದಿತಾ ಗೌಡ, ಹಾಲು ಬೆರೆಸಿ ಕಾಶ್ಮೀರಿ ಚಿಕನ್ ಮಾಡಿದ್ದೇ ಅದ್ಭುತ!

ನಾವೇನು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಕಾನೂನು ಬಾಹಿರವಾಗಿ ಕೆಲವು ಪ್ರಕರಣಗಳು ನಡೆದಿವೆ. ಅದನ್ನು ಜನರಿಗೆ ತಿಳಿಸಲು ಚರ್ಚಿಸುತ್ತೇವೆ ಅಂದ ತಕ್ಷಣ‌ ದ್ವೇಷದ ರಾಜಕಾರಣ ಎನ್ನುತ್ತಿದ್ದಾರೆ. ಕೆಲವು ಹಗರಣಗಳ‌ ತನಿಖೆ ಮುಡಾಕ್ಕಿಂತ ಮುಂಚೆಯೇ ನಡೆಯುತ್ತಿವೆ. ಗುಪ್ತಚರ ದಳಕ್ಕೆ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಕುರಿರು ಪ್ರತಿಕ್ರಿಯಿಸಿ, ಗುಪ್ತಚರ ದಳ ಇಲಾಖೆ ಮುಖ್ಯಮಂತ್ರಿಯವರಿಗೆ ಬರುತ್ತದೆ. ಅವರು ತೀರ್ಮಾನ ತೆಗೆದುಕೊಂಡಿದ್ದಾರೆ. ಯಾರ ಮೇಲೆ ಕಾನ್ಫಿಡೆನ್ಸ್ ಇರುತ್ತದೆಯೋ ಅಂತವರನ್ನು ತೆಗೆದುಕೊಂಡಿರುತ್ತಾರೆ ಎಂದು ಹೇಳಿದರು.

Latest Videos
Follow Us:
Download App:
  • android
  • ios