ಬೆಂಗಳೂರು, (ಮಾ.17) : ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ 870 ಹುದ್ದೆಗಳ ನೇಮಕಾತಿಗೆ  ಅರ್ಜಿ ಆಹ್ವಾನಿಸಲಾಗಿದೆ.

ಅಸಿಸ್ಟೆಂಟ್ ಇಂಜಿನಿಯರ್, ಜ್ಯುನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು 10/4/2019ರೊಳಗೆ ಅರ್ಜಿಗಳನ್ನು ಸಲ್ಲಿಸಹುದು. 

ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

ವಿದ್ಯಾರ್ಹತೆ: ಪದವಿ, ಡಿಪ್ಲೊಮಾ ಇನ್ ಸಿವಿಲ್ ಇಂಜಿನಿಯರಿಂಗ್ ಅಥವಾ ಮಾನ್ಯತೆ ಪಡೆದ ಸಂಸ್ಥೆಯಿಂದ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. 

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 40 ವರ್ಷಗಳು.

ವೇತನ ಶ್ರೇಣಿ : ಮೇಲೆ ತಿಳಿಸಲಾಗಿರುವ ಹುದ್ದೆಗಳಿಗೆ ಸೆಲೆಕ್ಟ್ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 33450 ರಿಂದ 83,900 ರೂ. ವೇತನ ನಿಗದಿ ಮಾಡಲಾಗಿದೆ. 

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಈ ಬಗ್ಗೆ ಇನ್ನಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.