ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.
ಬೆಂಗಳೂರು, (ಆ.19): ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಜಿಲ್ಲೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಒಟ್ಟು 54 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಆಗಸ್ಟ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಜಾಬ್ಸ್ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಹುದ್ದೆಗಳ ವಿವರ:
ದಾಖಲಾತಿ ತಜ್ಞರು - 1
ಹಿರಿಯ ಭೂ ವಿಜ್ಞಾನಿ - 1
ಸಮಾಲೋಚಕರು - 2
ಹಿರಿಯ ಸಮಾಲೋಚಕರು - 2
ಕಿರಿಯ ಸಮಾಲೋಚಕರು - 1
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ - 5
ಸಪೋರ್ಟ್ ಇಂಜಿನಿಯರ್ - 4
ಡೇಟಾ ಎಂಟ್ರಿ ಆಪರೇಟರ್ - 2
ಜಿಲ್ಲಾ ಯೋಜನಾ ವ್ಯವಸ್ಥಾಪಕ - 8
ಜಿಲ್ಲಾ ಎಂಐಎಸ್ ಸಮಾಲೋಚಕರು - 16
ಮಾಹಿತಿ ಶಿಕ್ಷಣ ಹಾಗೂ ಸಂವಹನ ಸಮಾಲೋಚಕರು - 1
ನೈರ್ಮಲ್ಯ ಹಾಗೂ ಶುಚಿತ್ವ ಸಮಾಲೋಚಕರು - 7
ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು - 2
ಮೇಲ್ವಿಚಾರಣೆ ಹಾಗೂ ಮೌಲ್ಯಮಾಪನ-ಸಮಾಲೋಚಕರು -
ವಿದ್ಯಾರ್ಹತೆ: ಪದವಿ, ಪಿಯುಸಿ ಮತ್ತು ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ /ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ: ನೇಮಕಾತಿ ಬಗೆಗಿನ ಪ್ರಕಟಣೆ ಹೊರಡಿಸಿದ ದಿನಾಂಕಕ್ಕೆ 45 ವರ್ಷಗಳು ಮೀರಿರಬಾರದು.
ವೇತನ ಶ್ರೇಣಿ: ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000 ರಿಂದ 60,000 ರೂ ಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
ಈ ಬಗ್ಗೆ ಮತ್ತಷ್ಟು ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
