ನಿರುದ್ಯೋಗಿಗಳಿಗೆ ಸಂತಸದ ಸುದ್ದಿ: 5151 ಸರ್ಕಾರಿ ಹುದ್ದೆಗೆ ನೇಮಕ ಶೀಘ್ರ
ಖಾಲಿ ಇರುವ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಬೆಂಗಳೂರು(ಜ.12): ಬಿಎಂಟಿಸಿಯಲ್ಲಿ 2500 ನಿರ್ವಾಹಕ ಹುದ್ದೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ 1737 ನಿರ್ವಾಹಕ ಹುದ್ದೆ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ ಒಟ್ಟು 5,151 ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ಹುದ್ದೆಗಳಿಗೆ ನೇರನೇಮಕಾತಿಯಡಿ ಭರ್ತಿಗೆ ಶೀಘ್ರ ಅಧಿಸೂಚನೆ ಹೊರಬೀಳಲಿದೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆ, 14 ಪ್ರಥಮ ದರ್ಜೆ ಲೆಕ್ಕ ಸಹಾಯಕ (ಗ್ರೂಪ್ -ಸಿ) ಹುದ್ದೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ 2500 ನಿರ್ವಾಹಕ, ತಲಾ ಒಂದು ಸಹಾಯಕ ಲೆಕ್ಕಿಗ, ಸ್ಟಾಫ್ ನರ್ಸ್, ಮಾರ್ಪಸಿಸ್ಟ್, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಬ್ಬ ಸಹಾಯಕ ಗ್ರಂಥಪಾಲಕ, ಓರ್ವ ಸಹಾಯಕ ಎಂಜಿನಿಯರ್, 5 ಜೂನಿಯರ್ ಪ್ರೋಗ್ರಾಮರ್, 12 ಸಹಾಯಕ, 25 ಹಿರಿಯ ಸಹಾಯಕ ಹುದ್ದೆಗಳು.
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 504 ಹುದ್ದೆಗಳ ಭರ್ತಿಗೆ ಸರ್ಕಾರ ಒಪ್ಪಿಗೆ, ಕೆಎಎಸ್ ಅಧಿಕಾರಿಗಳ ನೇಮಕಾತಿ ಹೇಗೆ?
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸಹಾಯಕ ಆಡಳಿತಾಧಿಕಾರಿ, ಉಗ್ರಾಣಾಧಿಕಾರಿ ಸೇರಿ ವಿವಿಧ 23 ಹುದ್ದೆಗಳು, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 500 ತಾಂತ್ರಿಕ ಸಹಾಯಕ (ದರ್ಜೆ -ಎ) ಹುದ್ದೆಗಳು ಸೇರಿದಂತೆ ಒಟ್ಟು 727 ಹುದ್ದೆಗಳು, ಕರ್ನಾಟಕ ಸೋಪ್ ಅಂಡ್ ಡಿಟರ್ಜೆಂಟ್ ಲಿ.ನಲ್ಲಿ ಖಾಲಿ ಇರುವ ವಿವಿಧ 38 ಹುದ್ದೆಗಳು ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ 1737 ನಿರ್ವಾಹಕ, 15 ಸಹಾಯಕ ಲೆಕ್ಕಿಗ ಹುದ್ದೆಗಳಿಗೆ ಶೀಘ್ರ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.