ರಾಜ್ಯಾದ್ಯಂತ 27 ಸಾವಿರ ಅತಿಥಿ ಶಿಕ್ಷಕರ ನೇಮಕ: ಜಿಲ್ಲಾವಾರು ಹುದ್ದೆಗಳ ವಿವರ ಇಲ್ಲಿದೆ..
ಕರ್ನಾಟಕ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ಬದಲಿಯಾಗಿ 27 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರು (ಮೇ 25): ರಾಜ್ಯಾದ್ಯಂತ ಜೂನ್ ಎರಡನೇ ವಾರದಿಂದ ಪ್ರಾಥಮಿಕ ಶಾಲೆಗಳು ಆರಂಭವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಉಳಿದಿರುವ 27 ಸಾವಿರ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಕ್ಕೆ ರಾಜ್ಯ ಶೈಕ್ಷಣಿಕ ಇಲಾಖೆ ಮುಂದಾಗಿದೆ. ಈ ಹಿನ್ನಲೆಯಲ್ಲಿ ತಾಲೂಕು ಕ್ಷೇತ್ರ ಶಿಕ್ಷಣ ಇಲಾಖಾವಾರು ಅರ್ಜಿ ಸಲ್ಲಿಕೆ ಮಾಡಬಹುದು. ಇನ್ನು ಅತಿಥಿ ಶಿಕ್ಷಕರಾಗಿ ಆಯ್ಕೆಯಾದವರಿಗೆ ಮಾಸಿಕ 10 ಸಾವಿರ ರೂ. ಗೌರವ ಸಂಭಾವನೆ ನೀಡಲಾಗುತ್ತದೆ ಎಂದು ಆದೇಶ ಹೊರಡಿಸಲಾಗಿದೆ.
2023-2024 ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡುವವರೆಗೆ ಅಥವಾ ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಇವುಗಳಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಖಾಲಿ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಒಟ್ಟು 27000 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರದ ಆದೇಶದಲ್ಲಿ (ಸರ್ಕಾರವು ಈಗಾಗಲೇ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿರುವ ಒಟ್ಟು 15,000 ಪದವೀಧರ ಪ್ರಾಥಮಿಕ ಶಿಕ್ಷಕರ (6 ರಿಂದ 8 ನೇ ತರಗತಿ) ಹುದ್ದೆಗಳ ಅಡಿಯಲ್ಲಿ ಪ್ರಸ್ತುತ ನೇಮಕಾತಿಯ ಎಲ್ಲಾ ಅಂತಿಮ ಪ್ರಕ್ರಿಯೆಗಳು ಮುಕ್ತಾಯಗೊಂಡು 2023-24 ನೇ ಸಾಲಿನಲ್ಲಿ ಹಾಜರಾಗುವ ಒಟ್ಟು ಶಿಕ್ಷಕರುಗಳ ಸಂಖ್ಯೆಗೆ ಅನುಗುಣವಾಗಿ ಕಡಿತಗೊಳಿಸುವ ಷರತ್ತಿಗೊಳಪಟ್ಟು ಅನುಮತಿ ನೀಡಲಾಗಿದೆ.
ಜೂ.12ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ, ವೇಳಾಪಟ್ಟಿಪ್ರಕಟ
ಮಾಸಿಕ 10 ಸಾವಿರ ರೂ. ಗೌರವ ಸಂಭಾವನೆ: ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 2022-23 ನೇ ಸಾಲಿನಲ್ಲಿ ಅಗತ್ಯತೆ/ಹೆಚ್ಚುವರಿ ಶಿಕ್ಷಕರ ಹುದ್ದೆಗಳ ಗುರ್ತಿಸುವಿಕೆ ಮತ್ತು ಮರು ಹೊಂದಾಣಿಕೆ ಪ್ರಕ್ರಿಯೆ ಸಂಬಂಧ ನೀಡಲಾಗಿರುವ ಹುದ್ದೆ ಹಂಚಿಕೆ, ಅನುಬಂಧ-1 ಮತ್ತು ಅನುಬಂಧ-2 ಸೂಚನೆಗಳನ್ನು ಪಾಲಿಸಿ ಪ್ರತಿ ಶಾಲೆಗೆ ಅಗತ್ಯವಿರುವ ಶಿಕ್ಷಕರ ಹುದ್ದೆಗಳ ಕುರಿತಂತೆ, ಶಾಲಾವಾರು ವೃಂದ ಮಂಜೂರಾತಿ ಕ್ರಮಗಳನ್ನು ಈಗಾಗಲೇ ಜಿಲ್ಲಾ ಹಂತದಲ್ಲಿ ನಿಯಮಾನುಸಾರ ಕೈಗೊಳ್ಳಲಾಗಿರುತ್ತದೆ. ಆಯ್ಕೆಯಾದ ಅತಿಥಿ ಶಿಕ್ಷಕರಿಗೆ ಮಾಸಿಕ 10 ಸಾವಿರ ರೂ. ಗೌರವ ಸಂಭಾವನೆ ನೀಡಲಾಗುತ್ತದೆ.
ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರ ನಿಯೋಜನೆ: ಸದರಿ ಆಧಾರದಲ್ಲಿ, ಎಲ್ಲಿ ಅಗತ್ಯ ಖಾಲಿ ಹುದ್ದೆಗಳಿವೆಯೋ ಅಂತಹ ಖಾಲಿ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಪ್ರಸ್ತುತ ಲಭ್ಯವಿರುವ ಖಾಲಿ ಹುದ್ದೆಗಳ ಮಾಹಿತಿಯಂತೆ ಅತಿಥಿ ಶಿಕ್ಷಕರ ಹುದ್ದೆಗಳನ್ನು ಜಿಲ್ಲಾ ಉಪನಿರ್ದೇಶಕರ ವಿಲೇವಾರಿಯಲ್ಲಿ ಹಂಚಿಕೆ ಮಾಡಲಾಗಿದೆ. ಕೆಳಕಂಡ ಷರತ್ತುಗಳಿಗೆ ಒಳಪಡಿಸಿ ಅತಿಥಿ ಶಿಕ್ಷಕರನ್ನು ತಾತ್ಕಲಿಕವಾಗಿ ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿದೆ.
ಮತ್ತೆ ಪಠ್ಯಪುಸ್ತಕ ಪರಿಷ್ಕರಣೆ, ಕಾಂಗ್ರೆಸ್ ಸರ್ಕಾರದ ಹೊಸ ಪಠ್ಯಪುಸ್ತಕ ಮುದ್ರಣ!
ಶಾಲೆಯ ಮುಖ್ಯ ಶಿಕ್ಷಕರ ಮೂಲಕವೇ ನೇಮಕ:
ಖಾಲಿ ಇರುವ ಅಗತ್ಯ ಹುದ್ದೆಗಳಿಗೆ ಮಾತ್ರ ಆದ್ಯತೆ ಮೇರೆಗೆ ಅತಿಥಿ ಶಿಕ್ಷಕರನ್ನು ತ್ವರಿತವಾಗಿ ನೇಮಕಾತಿ ಮಾಡಲು ಜಿಲ್ಲಾ ಉಪನಿರ್ದೇಶಕರು ತಾಲ್ಲೂಕುವಾರು ಹುದ್ದೆಗಳ ಮರು ಹಂಚಿಕೆಯನ್ನು ದಿನಾಂಕ 26/05/2023 ರ ಒಳಗಾಗಿ ಕಡ್ಡಾಯವಾಗಿ ಮಾಡತಕ್ಕದು, ತಾಲ್ಲೂಕುವಾರು ಹುದ್ದೆಗಳ ಹಂಚಿಕೆ ಆದೇಶದ ಪ್ರತಿಯನ್ನು ಅಂದೇ ಈ ಕಛೇರಿಗೆ ಮಿಚಂಚೆ (ಇ-ಮೇಲ್) ಮೂಲಕ ಸಲ್ಲಿಸುವುದು. 2, ಪ್ರಾಥಮಿಕ ಶಾಲೆಗಳಿಗೆ ಸಂಬಂಧಿಸಿದಂತೆ ಅತಿಥಿ ಶಿಕ್ಷಕರ ಆಯ್ಕೆ ಜವಾಬ್ದಾರಿಯನ್ನು ಸಂಬಂಧಿಸಿದ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರುಗಳ ಮೂಲಕವೇ ಮಾಡುವುದು.