Asianet Suvarna News Asianet Suvarna News

ಸತ್ರ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗೆ ನೇಮಕಾತಿ: ಅರ್ಜಿ ಹಾಕಿ

ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.

Shivamogga district court recruitment 2020 apply various posts
Author
Bengaluru, First Published Jan 19, 2020, 2:40 PM IST
  • Facebook
  • Twitter
  • Whatsapp

ಶಿವಮೊಗ್ಗ, (ಜ.19): ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು, ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಶಿಕಾರಿಪುರ -1, ಭದ್ರಾವತಿ-1, ಸೊರಬ-1, ಹೊಸನಗರ-1, ತಾಲ್ಲೂಕುಗಳಲ್ಲಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 

ಗ್ರಾಮಲೆಕ್ಕಾಧಿಕಾರಿ ನೇಮಕಾತಿಗೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೇ ನೇರ ನೇಮಕಾತಿ

ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 37 ವರ್ಷ, ಪ್ರವರ್ಗ-2 (ಎ), 2 (ಬಿ), 3 (ಎ), 3(ಬಿ) ಅಭ್ಯರ್ಥಿಗಳಿಗೆ 40 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ರ ಅಭ್ಯರ್ಥಿಗಳಿಗೆ 42 ವರ್ಷ ವಯೋಮಿತಿಯನ್ನು ನಿಗಧಿಪಡಿಸಲಾಗಿದೆ.

ವಿದ್ಯಾರ್ಹತೆ ಮತ್ತು ವಿವಿಧ ಅರ್ಹತೆಗಳು
* ಆಸಕ್ತ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ/ ತತ್ಸಮಾನ/ ಎಲ್‍ಎಲ್‍ಬಿ ಅಂಕಪಟ್ಟಿಯ ಪ್ರತಿ. ವರ್ಷದ ಸೆಮಿಸ್ಟರ್‌ ಅಂಕ ಪಟ್ಟಿಗಳ ಪ್ರತಿಗಳು. ವಕೀಲರಾಗಿ ನೊಂದಣಿ ಆದ ಬಾರ್‌ ಕೌನ್ಸಿಲ್ ನೀಡಿದ ಸನ್ನದಿನ ಪ್ರತಿ. 

ದಕ್ಷಿಣ ಕನ್ನಡ ಜಿಲ್ಲಾ ಕೋರ್ಟ್‌ನಲ್ಲಿ ನೇಮಕಾತಿ: ವಿವಿಧ ಹುದ್ದೆಗೆ ಅರ್ಜಿ ಹಾಕಿ

* ವಕೀಲರಾಗಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ವಕೀಲರ ಸಂಘದಿಂದ ಪಡೆದ ಪ್ರಮಾಣ ಪತ್ರ. ಗುತ್ತಿಗೆ ಆಧಾರದಲ್ಲಿ ಆಯ್ಕೆಯಾದಲ್ಲಿ ಜಿಲ್ಲೆಯ ಇತರೆ ತಾಲ್ಲೂಕುಗಳಲ್ಲಿ ಮತ್ತು ಪಕ್ಕದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವುದಾಗಿ ನೀಡಿದ ಒಪ್ಪಿಗೆ ಪತ್ರ. 

* ಜಾತಿ/ ಆದಾಯ ಪ್ರಮಾಣ ಪತ್ರದ ಪ್ರತಿ ಅರ್ಜಿಯೊಂದಿಗೆ ಲಗತ್ತಿಸಿ ಜ. 21ರೊಳಗಾಗಿ ಸಲ್ಲಿಸುವಂತೆ ಸರ್ಕಾರಿ ಅಭಿಯೋಜಕ ಹಾಗೂ ಸದಸ್ಯ ಕಾರ್ಯದರ್ಶಿ ವಿ.ಜಿ ಯಳಗೇರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow Us:
Download App:
  • android
  • ios