ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ

* ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆ
* ಶಿಕ್ಷಕರ ವರ್ಗಾವಣೆ ತಾತ್ಕಾಲಿಕವಾಗಿ ಮುಂದೂಡಕೆ
* ಶಿಕ್ಷಣ ಇಲಾಖೆ ಅಧಿಕೃತವಾಗಿ ಸುತ್ತೋಲೆ

teacher transfer postponed By karnataka Education Department rbj

ಬೆಂಗಳೂರು, (ಸೆ.15):  ಶಿಕ್ಷಕರ ವರ್ಗಾವಣೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಇದರಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆಯಾಗಿದೆ.

ಶಿಕ್ಷಕರ ವರ್ಗಾವಣೆಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ(ಕೆಎಟಿ) ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ಅಧಿಕೃತವಾಗಿ ಸುತ್ತೋಲೆ ಹೊರಡಿಸಿದೆ.

ಸೆ.8ರಂದು ಕೆಎಟಿ 2020-21ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ತಡೆಯಾಜ್ಞೆ ನೀಡಿತ್ತು. ಈ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಯಿತು. 

ಈ ಸಂಬಂಧ ಸೆ.14ರಂದು ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಧ್ಯಾಯರು ಒಳಗೊಂಡಂತೆ ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರು ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

ವರ್ಗಾವಣೆ ಬಯಸಿ 71 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಕಳೆದ ವರ್ಷ ಹೆಚ್ಚುವರಿ ಮತ್ತು ಕಡ್ಡಾಯವಾಗಿ ವರ್ಗಾವಣೆಗೊಂಡ ಶಿಕ್ಷಕರಿಗೆ ಸೆ.15ರಿಂದ ಕೌನ್ಸೆಲಿಂಗ್ ಆರಂಭವಾಗಬೇಕಾಗಿತ್ತು. ಆದರೆ, ಕೆಎಟಿನಲ್ಲಿ ತಡೆಯಾಜ್ಞೆ ಬಿದ್ದ ಹಿನ್ನೆಲೆಯಲ್ಲಿ ಸಂಪೂರ್ಣ ವರ್ಗಾವಣೆ ಪ್ರಕ್ರಿಯೆ ಸ್ಥಗಿತವಾಗಿದೆ.

Latest Videos
Follow Us:
Download App:
  • android
  • ios